ಕಾಸರಗೋಡು ನಗರದ ವಾಹನ ದಟ್ಟಣೆಗೆ ಕೂಡಲೇ ಪರಿಹಾರ ಕಲ್ಪಿಸಿ’
Team Udayavani, Jul 1, 2019, 5:51 AM IST
ಕಾಸರಗೋಡು: ವಿವಿಧ ಬೇಡಿಕೆ ಗಳನ್ನು ಮುಂದಿಟ್ಟುಕೊಂಡು ಆಟೋರಿಕ್ಷಾ ಮಜ್ದೂರ್ ಸಂಘ (ಬಿಎಂಎಸ್)ದ ನೇತೃತ್ವದಲ್ಲಿ ಆಟೋರಿಕ್ಷಾ ಚಾಲಕರು ಕಾಸರಗೋಡು ನಗರಸಭಾ ಕಚೇರಿಗೆ ಪ್ರತಿಭಟನಾ ಮಾರ್ಚ್ ಮತ್ತು ಧರಣಿ ಸತ್ಯಾಗ್ರಹ ನಡೆಸಿದರು.
ಪ್ರತಿಭಟನಾ ಧರಣಿಯನ್ನು ಉದ್ಘಾಟಿಸಿದ ಬಿಎಂಎಸ್ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಕೆ.ಎ.ಶ್ರೀನಿವಾಸನ್ ಮಾತನಾಡಿ, ನೂರಾರು ಜನರ ಆಶ್ರಯ ಕೇಂದ್ರವಾಗಿರುವ ಕಾಸರಗೋಡು ನಗರದಲ್ಲಿ ಜನರಿಗೆ ಸುಗಮವಾಗಿ ನಡೆದುಕೊಂಡು ಹೋಗಲು ಸಾಧ್ಯವಾಗದ ದುಸ್ಥಿತಿಯಿದೆ. ಕಾಸರಗೋಡು ನಗರದ ಟ್ರಾಫಿಕ್ ದಟ್ಟಣೆಯಿಂದಾಗಿ ನಗರದಲ್ಲಿ ಸಮರ್ಪಕವಾದ ವಾಹನ ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾಸರಗೋಡು ನಗರಸಭೆಯಲ್ಲಿ ಆಡಳಿತ ನಡೆಸುವ ಮುಸ್ಲಿಂಲೀಗ್‌ನ ವೈಫಲ್ಯವೇ ಕಾರಣವಾಗಿದೆ ಎಂದು ಆರೋಪಿಸಿದರು.
ನಗರಗಳನ್ನು ಅತ್ಯಾಧುನಿಕ ರೀತಿಯಲ್ಲಿ ಮಾರ್ಪಾಡುಗೊಳಿಸಲು ಹಾಗೂ ನಗರ ಅಭಿವೃದ್ಧಿಗಾಗಿ ಕೇಂದ್ರ ಸರಕಾರವು ಕೋಟ್ಯಾಂತರ ರೂ. ಗಳನ್ನು ಮಂಜೂರು ಮಾಡುತ್ತಿದ್ದರೂ, ಕೇರಳದ ಸಿಪಿಎಂ ಸರಕಾರ ಮಾತ್ರ ಈ ಮೊತ್ತವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿ ಅವ್ಯವಹಾರ ಮಾಡುತ್ತಿದೆ ಎಂದು ಕೆ.ಶ್ರೀನಿವಾಸನ್ ಆಕ್ರೋಶ ವ್ಯಕ್ತಪಡಿಸಿದರು.
ಬಿಎಂಎಸ್ ಜಿಲ್ಲಾ ಕಚೇರಿ ಪರಿಸರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ನಗರಸಭಾ ಕಚೇರಿಯ ಮುಂಭಾಗದಲ್ಲಿ ಸಮಾಪ್ತಿಗೊಂಡಿತು.
ಮೆರವಣಿಗೆಗೆ ನೇತಾರರಾದ ಕೆ.ಉಮೇಶ್, ಕೆ.ವಿಶ್ವನಾಥ ಶೆಟ್ಟಿ , ರಿಜೇಶ್ ಜೆ.ಪಿ.ನಗರ, ಕೆ.ಅರವಿಂದನ್, ಪ್ರಸಾದ್, ಸತೀಶ್ ಮೊದಲಾದವರು ನೇತೃತ್ವ ವಹಿಸಿದ್ದರು.
ಬಳಿಕ ಜಿಲ್ಲಾ ಆಟೋರಿಕ್ಷಾ ಮಜ್ದೂರ್ ಸಂಘ (ಬಿಎಂಎಸ್)ದ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಕುರಿತಾದ ಮನವಿಯನ್ನು ನಗರಸಭಾ ಕಾರ್ಯದರ್ಶಿಯವರಿಗೆ ಸಮರ್ಪಿಸಿದರು.
ಕಾಸರಗೋಡು ನಗರದ ವಾಹನ ದಟ್ಟಣೆಗೆ ಕೂಡಲೇ ಪರಿಹಾರ ಕಲ್ಪಿಸಬೇಕು, ಕಾಸರಗೋಡು ಜನರಲ್ ಆಸ್ಪತ್ರೆ ರಸ್ತೆ, ಹೊಸ ಬಸ್ ನಿಲ್ದಾಣ ಪರಿಸರದ ಕೋಟೆಕಣಿ ರಸ್ತೆ, ಕೆಪಿಆರ್ ರಾವ್ ರಸ್ತೆಯನ್ನು ತತ್‌ಕ್ಷಣ ಡಾಮರೀಕರಣಗೊಳಿಸಬೇಕು, ನಗರದ ಬೀದಿ ದೀಪಗಳು ರಾತ್ರಿ ಹೊತ್ತಿನಲ್ಲಿ ಉರಿಯುವಂತೆ ಮಾಡಲು ಕ್ರಮ ಕೈಗೊಳ್ಳಬೇಕು, ನಗರದಲ್ಲಿ ಸ್ಥಾಪಿಸಿದ ಸಿಸಿ ಟಿವಿ ಕ್ಯಾಮರಾಗಳನ್ನು ಸರಿಯಾಗಿ ಕಾರ್ಯಾಚರಿಸುವಂತೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಪ್ರತಿಭಟನಾಕಾರರು ನಗರಸಭಾ ಆಡಳಿತದ ಮುಂದಿರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.