ಮಕ್ಕಳಿಗಾಗಿ ಸಮಯ ಮೀಸಲಿಡಿ: ಕೆ.ಪಿ.ಉತ್ತಪ್ಪ ಸಲಹೆ
Team Udayavani, Apr 12, 2018, 10:15 AM IST
ಮಡಿಕೇರಿ: ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಹಿರಿದಾಗಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗಾಗಿ ಸಮಯವನ್ನು ಮೀಸಲಿಡುವುದು ಸೂಕ್ತವೆಂದು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಕೆ.ಪಿ. ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಯುಕೆಜಿ ವಿದ್ಯಾರ್ಥಿಗಳು ಒಂದನೇ ತರಗತಿಗೆ ಸೇರ್ಪಡೆಗೊಳ್ಳುವ ಗ್ರಾಜ್ಯುಯೇಷನ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಂದು ಮಗುವು ಹುಟ್ಟುತ್ತಲೆ ವಿಶಿಷ್ಟವಾದ ಪ್ರತಿಭೆಯನ್ನು ಪಡೆದಿರುತ್ತದೆ. ಅಂತಹ ಪ್ರತಿಭೆೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕೆಂದು ತಿಳಿಸಿದರು.
ಮಕ್ಕಳ ಶಿಕ್ಷಣದ ಬಗ್ಗೆ ಪ್ರತಿಯೊಬ್ಬ ಪೋಷಕರು ವಿಶೇಷ ಆಸಕ್ತಿ ವಹಿಸಬೇಕೆಂದು ಕಿವಿ ಮಾತುಗಳನ್ನಾಡಿದ ಕೆ.ಪಿ. ಉತ್ತಪ್ಪ, ಮಕ್ಕಳ ಶಿಕ್ಷಣಕ್ಕೆ ಮೀಸಲಿಡುವ ಹಣವೇ ಅತ್ಯಂತ ದೊಡ್ಡ ಬಂಡವಾಳ ಹೂಡಿಕೆಯೆಂದು ತಿಳಿಸಿದರು. ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಕೆ. ಸುಬ್ಬಯ್ಯ ಅವರು ಮಕ್ಕಳ ಉತ್ತಮ ಭವಿಷ್ಯಕ್ಕೆ ಶುಭ ಕೋರಿದರು. ಯುಕೆಜಿಯಿಂದ ಒಂದನೇ ತರಗತಿಗೆ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭ ಅತಿಥಿ ಗಣ್ಯರು ಪ್ರಮಾಣ ಪತ್ರವನ್ನು ವಿತರಿಸಿ, ಪ್ರೋತ್ಸಾಹಿಸಿದರು.
ಬೀಳ್ಕೊಡುಗೆ- ಕೊಡಗು ವಿದ್ಯಾಲಯದಲ್ಲಿ ಕಳೆದ 26 ವರ್ಷಗಳಿಂದ ಸೇವೆ ಸಲ್ಲಿಸಿ ವಯೋ ನಿವೃತ್ತರಾದ ಶಿಕ್ಷಕಿ ಜೆಸ್ಸಿ ಅವರನ್ನು ಆಡಳಿತ ಮಂಡಳಿಯ ಬಿ.ಕೆ. ಸುಬ್ಬಯ್ಯ, ಕೆ.ಪಿ. ಉತ್ತಪ್ಪ ಅವರು ಸಮ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಪುಟಾಣಿಗಳಿಂದಲೇ ನಿರೂಪಿಸಲ್ಪಟ್ಟ ಗ್ರಾಜ್ಯುಯೇಷನ್ ಡೇ ಕಾರ್ಯಕ್ರಮದಲ್ಲಿ ಎಲ್.ಕೆ.ಜಿ., ಯುಕೆಜಿ ಮತ್ತು ಒಂದನೇ ತರಗತಿ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ನೃತ್ಯ ಕಾರ್ಯಕ್ರಮ ಗಮನ ಸೆಳೆೆಯಿತು. ಶಾಲಾ ಪ್ರಾಂಶುಪಾಲ ಸೀನಿವಾಸನ್, ಅತಿಥಿಗಳಾದ ರಘ ಮಾದಪ್ಪ, ಶಿಕ್ಷಕ ವೃಂದ, ಮಕ್ಕಳ ಪೋಷಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.