ಪೆರ್ಮುದೆ ಇಗರ್ಜಿಯಲ್ಲಿ ಶುಭ ಶುಕ್ರವಾರ ಆಚರಣೆ
Team Udayavani, Mar 31, 2018, 9:25 AM IST
ಕಾಸರಗೋಡು: ಮನುಕುಲದ ಪಾಪ ವಿಮೋಚನೆಗಾಗಿ ದೇವಪುತ್ರ ಪ್ರಭು ಯೇಸು ಕ್ರಿಸ್ತ ಶಿಲುಬೆಗೆ ಬಲಿಯಾದ ದಿನದ ಅಂಗವಾಗಿ ಶುಕ್ರವಾರ ಕೆಥೋಲಿಕ್ ಕ್ರೈಸ್ತರು ಗುಡ್ ಫ್ತೈಡೇ ಅಥವಾ ಶುಭ ಶುಕ್ರವಾರವಾಗಿ ಆಚರಿಸಿದರು. ಶುಕ್ರವಾರ ಬೆಳಗ್ಗೆ ಪೆರ್ಮುದೆ ಸೈಂಟ್ ಲಾರೆನ್ಸ್ ಇಗರ್ಜಿ ಮೈದಾನದಲ್ಲಿ ಶಿಲುಬೆ ಹಾದಿ ನಡೆಯಿತು. ಫಾ| ಮೆಲ್ವಿನ್ ಫೆರ್ನಾಂಡಿಸ್ ನೇತೃತ್ವ ನೀಡಿದರು.
ಗೋಲ್ಗೊಥಾ ಎಂಬ ಸ್ಥಳದಲ್ಲಿ ನಿರಪರಾಧಿ ಯೇಸುವನ್ನು ಯೆಹೂದ್ಯರು ಶಿಲುಬೆಗೆ ಏರಿಸಿದ್ದರು. ‘ಪಿತನೇ ಇವರನ್ನು ಕ್ಷಮಿಸಿ. ತಾವು ಏನು ಮಾಡುತ್ತಿರುವರು ಎಂದು ಇವರು ಅರಿಯರು’ ಎಂದು ಶಿಲುಬೆಯಿಂದ ಹೇಳಿದ ಯೇಸು ಕ್ಷಮೆಯ ಹೊಸ ಉಪದೇಶವನ್ನು ಮನುಕುಲಕ್ಕೆ ನೀಡಿದರು. ಮುಳ್ಳುಗಳಿಂದ ತುಂಬಿದ ಗೋಲ್ಗೊಥಾ ಬೆಟ್ಟಕ್ಕೆ ಶಿಲುಬೆಯನ್ನು ಹೆಗಲಿಗೇರಿಸಿ ಯೇಸು ನಡೆದ ಶಿಲುಬೆಯ ಹಾದಿಯನ್ನು ಹದಿನಾಲ್ಕು ಹಂತಗಳಾಗಿ ವಿಭಜಿಸಿ ವಿಮರ್ಶಿಸಿ ಕ್ರೈಸ್ತ ಬಾಂಧವರು ಧ್ಯಾನ- ಪ್ರಾರ್ಥನೆ ಸಲ್ಲಿಸಿದರು. ಯೇಸು ಪ್ರಾಣಾರ್ಪಣೆ ಮಾಡಿದ ದಿನ ನಡು ಮಧ್ಯಾಹ್ನದವರೆಗೆ ಸೂರ್ಯ ಕಾಂತಿಹೀನನಾಗಿದ್ದನು. ಎಲ್ಲೆಡೆ ಕತ್ತಲೆ ಆವರಿಸಿತ್ತು. ಮಹಾದೇವಾಲಯದ ತೆರೆ ಇಬ್ಭಾಗವಾಗಿ ಸೀಳಿತು. ಯೇಸು ಸ್ವಾಮಿ ‘ಪಿತನೇ ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ’ ಎಂದು ಗಟ್ಟಿಯಾಗಿ ಕೂಗಿ ಪ್ರಾಣ ಬಿಟ್ಟರು.
ಯೇಸುವಿನ ಹೆಗಲಿಗೆ ಶಿಲುಬೆ ನೀಡುವುದು, ಯೇಸು ಮೊದಲ ಬಾರಿ ಶಿಲುಬೆಯಡಿ ಬೀಳುವುದು, ಯೇಸು ತನ್ನ ದುಃಖತಪ್ತ ಮಾತೆಯನ್ನು ನೋಡುವುದು, ಸಿರೆನಾದ ಸೈಮಾನ್ ಯೇಸುವಿಗೆ ಶಿಲುಬೆ ಹೊರಲು ಸಹಾಯ ಮಾಡುವುದು, ವೆರೊನಿಕಾ ಯೇಸುವಿನ ಮುಖಾರವಿಂದವನ್ನು ಒರೆಸುವುದು, ಯೇಸು ಎರಡನೇ ಬಾರಿ ಶಿಲುಬೆಯಡಿ ಬೀಳುವುದು, ಯೇಸು ಜೆರುಸಲೇಂನ ಮಹಿಳೆಯರಿಗೆ ಸಾಂತ್ವನ ಹೇಳುವುದು, ಯೇಸು ಮೂರನೇ ಬಾರಿ ಶಿಲುಬೆಯಡಿ ಬೀಳುವುದು, ಯೇಸುವಿನ ದೇಹದ ವಸ್ತ್ರ ತೆಗೆದು ನಗ್ನ ಮಾಡುತ್ತಾರೆ. ಯೇಸುವನ್ನು ಶಿಲುಬೆಗೇರಿಸುವುದು, ಯೇಸು ಶಿಲುಬೆಯಲ್ಲಿ ಪ್ರಾಣ ಬಿಡುವುದು, ಯೇಸುವಿನ ಪಾರ್ಥಿವ ಶರೀರ ಶಿಲುಬೆಯಿಂದ ಕೆಳಗಿಳಿಸುತ್ತಾರೆ. ಯೇಸುವಿನ ಪಾರ್ಥಿವ ಶರೀರವನ್ನು ಸಂಸ್ಕರಿಸುವುದು ಹೀಗೆ ಹದಿನಾಲ್ಕು ಹಂತಗಳಲ್ಲಿ ಶಿಲುಬೆ ಹಾದಿ ನಡೆಯಿತು. ನೂರಾರು ಕ್ರೈಸ್ತ ಬಾಂಧವರು ಶಿಲುಬೆ ಹಾದಿಯಲ್ಲಿ ಭಾಗವಹಿಸಿದರು.
ಪಾಸ್ಖ ಹಬ್ಬದ ಅಂಗವಾಗಿ ಪೆರ್ಮುದೆ ಸೈಂಟ್ ಲಾರೆನ್ಸ್ ಇಗರ್ಜಿಯಲ್ಲಿ ಮಾ. 31ರಂದು ರಾತ್ರಿ 7.30ಕ್ಕೆ ಹೊಸ ಬೆಳಕಿನ ಆಶೀರ್ವಚನ, ಬಳಿಕ ದಿವ್ಯಬಲಿಪೂಜೆ ನಡೆಯಲಿದೆ. ಎ. 1ರಂದು ಬೆಳಗ್ಗೆ 8 ಗಂಟೆಗೆ ದಿವ್ಯಬಲಿಪೂಜೆ ನಡೆಯಲಿದೆ. ಧರ್ಮಗುರು ಫಾ| ಮೆಲ್ವಿನ್ ಫೆರ್ನಾಂಡಿಸ್ ನೇತೃತ್ವ ನೀಡುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.