ದೇವಕಾರ್ಯದಲ್ಲಿ ತೊಡಗಿದರೆ‌ ಅನುಗ್ರಹ: ಕೊಂಡೆವೂರು ಶ್ರೀ


Team Udayavani, Mar 11, 2019, 1:00 AM IST

devakarya.jpg

ಕಾಸರಗೋಡು: ಸನಾತನ ಧರ್ಮ, ಭಾರತೀಯ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಜಾಗೃತಿ ಮೂಡಿದಾಗ ನಾಡಿನಲ್ಲಿ ಶಾಂತಿ, ಸಮೃದ್ಧಿ ಸೃಷ್ಟಿಯಾಗುತ್ತದೆ. ದೇವರ ಕೆಲಸದಲ್ಲಿ ತೊಡಗಿಕೊಂಡಾಗ ಹೃದಯ ಪರಿಶುದ್ಧಗೊಂಡು ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು.

ಅವರು ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪುನರ್‌ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಅಶೀರ್ವಚನ ನೀಡಿದರು.

ಒಗ್ಗಟ್ಟಿನಿಂದ ದೇವಸ್ಥಾನಗಳಲ್ಲಿ ಪೂಜೆ, ಪುನಸ್ಕಾರ, ಯಾಗ, ಭಜನೆ ಸಹಿತ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಈ ಮೂಲಕ ಊರು ಸಮೃದ್ಧಿಯಾಗುತ್ತದೆ. ಮುಂದಿನ ಭವಿಷ್ಯವಾಗಿರುವ ಮಕ್ಕಳಿಗೆ ನಮ್ಮ ಸಂಸ್ಕೃತಿಯ ಮಹತ್ವವನ್ನು ಮನವರಿಕೆ ಮಾಡಿಕೊಡಬೇಕಾದ ಅನಿವಾರ್ಯತೆ ಇಂದು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಮಾತೆಯರ ಪಾತ್ರ ಪ್ರಮುಖವಾಗಿದೆ. ದೇವರ ಕೆಲಸ ಕಾರ್ಯಗಳಲ್ಲಿ ನಿಸ್ವಾರ್ಥದಿಂದ ದುಡಿದರೆ ಭಗವಂತನ ಅನುಗ್ರಹ ಲಭಿಸುವುದರಲ್ಲಿ ಎಳ್ಳಷ್ಟು ಸಂಶಯವಿಲ್ಲ ಎಂದು ನುಡಿದ ಸ್ವಾಮೀಜಿಯವರು ದೇವಸ್ಥಾನಗಳು ಅಧಿವೃದ್ಧಿಯಾದಂತೆ ನಮ್ಮ ನಾಡು ಅಭಿವೃದ್ಧಿಯಾಗುತ್ತದೆ ಎಂದರು.

ಶ್ರೇಷ್ಠ ಸಂಸ್ಕೃತಿ ಭಾರತದ್ದು : ಇಡೀ ಜಗತ್ತಿಗೇ ಒಳ್ಳೆಯತನವನ್ನು, ಶ್ರೇಷ್ಠ ಸಂಸ್ಕಾರವನ್ನು ನೀಡಿದ ಏಕೈಕ ದೇಶ ಭಾರತ. ಆದರೆ ಯಾರು ಈ ದೇಶದ ಆಕ್ರಮಣ ಮಾಡಿದ್ರೋ ಅವರನ್ನೇ ಓಲೈಸುವ, ಭಾರತೀಯರೆಂದು ಕರೆಯುವ ದು:ಸ್ಥಿತಿ ನಮಗೊದಗಿ ಬಂತು. ಅಣು ರೇಣ ತೃಣಕಾಷ್ಟದಲ್ಲಿ ಭಗವಂತನ ಸಾನ್ನಿಧ್ಯವನ್ನು ಕಾಣುವ ಶ್ನೆàಷ್ಠ ಸಂಸ್ಕೃತಿ ಭಾರತದ್ದು. ಇದು ಶ್ರೀ ಕೃಷ್ಣ ನೀಡಿದ ಗೀತಾ ಸಂದೇಶ. ಕ್ಷೇತ್ರದ ಜೀರ್ಣೋದ್ಧಾರದಿಂದ ಸಮಾಜದ ಉನ್ನತಿಯ ಕಡೆ ನಮ್ಮ ಶ್ರದ್ಧೆ ಹರಿಯಬೇಕಾಗಿದೆ. ದೇವರೊಂದಿಗಿನ ಸಂಭಾಷಣೆಯೇ ಭಕ್ತಿ ಎಂದೆನಿಸಿದ್ದು, ಇದು ಧರ್ಮಶ್ರದ್ಧೆಗೆ ಪೂರಕವಾಗಿದೆ. ಧರ್ಮ ಜಾಗೃತಿಯಲ್ಲಿ ಬ್ರಹ್ಮಕಲಶೋತ್ಸವ ನೆರವಾಗುತ್ತದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವಿಧಾನಪರಿಷತ್‌ ಮಾಜಿ ಸದಸ್ಯ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಹೇಳಿದರು.

ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಸರ್ವೋತ್ತಮ ಕಾಮತ್‌ ಅಧ್ಯಕ್ಷತೆ ವಹಿಸಿದರು. ಡಾ|ಪ್ರಿಯದರ್ಶನ್‌ಲಾಲ್‌ ಮುಖ್ಯ ಭಾಷಣ ಮಾಡಿದರು. ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷೆ ಮೀರಾ ಕಾಮತ್‌, ಕೊರಕ್ಕೋಡು ಶ್ರೀ ಆರ್ಯಕಾತ್ಯಾಯಿನಿ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ರಾವ್‌ ಧರೇಕರ್‌, ಹಿರಿಯ ನ್ಯಾಯವಾದಿ ಅಡೂರು ಉಮೇಶ್‌ ನಾೖಕ್‌, ಕೋಟೆಕಣಿ ಶ್ರೀರಾಮನಾಥ ದೇವಸ್ಥಾನದ ಗೌರವಾಧ್ಯಕ್ಷ ಗಣಪತಿ ಕೋಟೆಕಣಿ, ಉದ್ಯಮಿ ಬಾಬೂಜಿ ಭಟ್‌, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ನ್ಯಾಯವಾದಿ ಬಿ.ಕರುಣಾಕರನ್‌, ಕೀಯೂರು ಶ್ರೀ ಧರ್ಮಶಾಸ್ತಾ ಕ್ಷೇತ್ರ ನವೀಕರಣ ಸಮಿತಿ ಸಂಚಾಲಕ ನ್ಯಾಯವಾದಿ ಬಾಲಕೃಷ್ಣನ್‌ ನಾಯರ್‌, ಅಮೈ ಶ್ರೀಕೃಷ್ಣ ಭಜನಾ ಮಂದಿರ ಅಧ್ಯಕ್ಷ ದೇವಪ್ಪ, ಕಾಸರಗೋಡು ನಗರಸಭೆ ಸದಸ್ಯ ಕೆ.ಶಂಕರ ಮೊದಲಾದವರು ಉಪಸ್ಥಿತರಿದ್ದರು.

ರಜನಿ, ಆದ್ಯ, ಪ್ರಶಾಂತಿ ಪ್ರಾರ್ಥನೆ ಹಾಡಿದರು. ಜೀರ್ಣೋದ್ಧಾರ ಸಮಿತಿ ಜತೆ ಕಾರ್ಯದರ್ಶಿ ಸುನಿಲ್‌ ಶೆಟ್ಟಿ ಅಣಂಗೂರು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಎ.ಕೇಶವ ವಂದಿಸಿದರು. ಜತೆ ಕಾರ್ಯದರ್ಶಿ ಶ್ರೀನಿವಾಸನ್‌ ಕಾರ್ಯಕ್ರಮ ನಿರೂಪಿಸಿದರು.

ಪೂರ್ಣಕುಂಭ ಸ್ವಾಗತ 
ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರಿಗೆ  ೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಅದ್ಭುತ ಶಾಂತಿ ಹೋಮ : ಮಾ.10 ರಂದು ಬೆಳಗ್ಗೆ ಗಣಪತಿ ಹೋಮ, ಅಂಕುರ ಪೂಜೆ, ಚೋರ ಶಾಂತಿ ಹೋಮ, ಸ್ವಶಾಂತಿ ಹೋಮ, ಶ್ವಾನ ಶಾಂತಿ ಹೋಮ, ಖನನಾದಿ ಸಪ್ತಶುದ್ಧಿ, ಅದ್ಭುತ ಶಾಂತಿ ಹೋಮ, ಹೋಮ ಕಲಶಾಭಿಷೇಕ, ವಿವಿಧ ಭಜನಾ ಮಂಡಳಿ ಗಳಿಂದ ಭಜನೆ, ಶಾಸ್ತಿÅàಯ ಸಂಗೀತ, ಯೋಗ ಪ್ರದರ್ಶನ, ಕೀಬೋರ್ಡ್‌ ಸಂಗೀತ ಸುಧಾ,  ಧಾರ್ಮಿಕ ಸಭೆ, ರಾತ್ರಿ ನಾಟ್ಯ  ನಡೆಯಿತು. 

ಇಂದಿನ ಕಾರ್ಯಕ್ರಮ 
ಬೆಳಗ್ಗೆ 6 ರಿಂದ ಗಣಪತಿ ಹೋಮ, ಅಂಕುರ ಪೂಜೆ, ತ್ರಿಕಾಲ ಪೂಜೆ, ಸೃಷ್ಟಿ ತತ್ವ ಕಲಶ ಪೂಜೆ, ಸೃಷ್ಟಿ ತತ್ವಹೋಮ, ಅನುಜ್ಞಾ ಕಲಶ ಪೂಜೆ, ಸೃಷ್ಟಿ ತತ್ವ ಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ, ವಿವಿಧ ಭಜನಾ ತಂಡಗಳಿಂದ ಭಜನೆ, ಮಧ್ಯಾಹ್ನ 1.30 ಕ್ಕೆ ಮಧ್ಯಾಹ್ನ ಪೂಜೆ, ರಾತ್ರಿ 7 ರಿಂದ ಶಯ್ನಾ ಮಂಟಪ ಸಂಸ್ಕಾರ, ಬ್ರಹ್ಮಕಲಶ, ಧ್ವಜ ಪ್ರತಿಷ್ಠೆಗೆ ಅಂಕುರಾರ್ಪಣೆ, ತ್ರಿಕಾಲ ಪೂಜೆ, ಅಂಕುರ ಪೂಜೆ, ಸಂಜೆ ಧಾರ್ಮಿಕ ಸಭೆ, ರಾತ್ರಿ   ನೃತ್ಯ ವೈಭವ ಯೋಗ ಪ್ರದರ್ಶನನೃತ್ಯಧಾರೆ ನಡೆಯಲಿದೆ.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.