ಗೋವಿಗೆ ಮೇವನ್ನು ನೀಡುವುದು ಪುಣ್ಯದ ಕೆಲಸ : ಕೆ.ಎನ್‌.ಕೃಷ್ಣ ಭಟ್‌

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆದ "ಹಲಸುಮೇಳ' ಉದ್ಘಾಟನೆ

Team Udayavani, Jun 8, 2019, 5:07 PM IST

bdk-1

ಬದಿಯಡ್ಕ: ಹಲಸು ಇಂದು ರಾಜ್ಯದಲ್ಲಿ ಶ್ರೇಷ್ಠಸ್ಥಾನವನ್ನು ಅಲಂಕರಿಸಿದ ಕಲ್ಪವೃಕ್ಷವಾಗಿದೆ. ಒಂದು ಕಾಲದಲ್ಲಿ ಬಡವರ ಪಾಲಿನ ಆಹಾರವಾದ ಹಲಸು ಇಂದು ಶ್ರೀಮಂತ ಸ್ಥಾನದಲ್ಲಿ ನೆಲೆನಿಂತಿದೆ. 33 ಕೋಟಿ ದೇವತೆಗಳ ಆವಾಸಸ್ಥಾನವಾದ ಗೋಮಾತೆಗೆ ಮೇವನ್ನು ನೀಡುವ ಸಲುವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮವು ಪುಣ್ಯಪ್ರದವಾದ ಕೆಲಸವಾಗಿದೆ ಎಂದು ಬದಿಯಡ್ಕ ಗ್ರಾಮಪಂಚಾಯತ್‌ ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌ ಹೇಳಿದರು.

ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವುಗಳ ಮೇವಿನ ಉದ್ದೇಶದಿಂದ ಮುಳ್ಳೇರಿಯ ಹವ್ಯಕ ಮಂಡಲದ ಶಿಷ್ಯವೃಂದದವರ ನೇತೃತ್ವದಲ್ಲಿ, ಗೋಭಕ್ತರ ಹಾಗೂ ಬದಿಯಡ್ಕ ಮಹಿಳ್ಳೋದಯದ ಸಹಕಾರದೊಂದಿಗೆ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನಡೆದ “ಹಲಸು ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ಸಬ್‌ ರಿಜಿಸ್ಟ್ರಾರ್ ಮುಹಮ್ಮದಾಲಿ ಪೆರ್ಲ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಮನುಷ್ಯ ಗೋವು ಹಲಸು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಮನೆಕಟ್ಟುವ ಮೊದಲ ಹಂತದಲ್ಲಿ ಹಲಸಿನ ತುಂಡನ್ನು ನಾವು ಉಪಯೋಗಿಸುತ್ತೇವೆ. ಮನೆ ಕಟ್ಟಿದ ನಂತರವೂ ಮನೆಯ ಮುಂಭಾಗದಲ್ಲಿ ಹಲಸು ಇರುವುದು ಸರ್ವೇಸಾಮಾನ್ಯವಾಗಿದೆ. ನಶಿಸಿ ಹೋಗುವ ಸಂಪ್ರದಾಯಕ್ಕೆ ಹೊಸ ಮೆರಗನ್ನು ನೀಡಿ ಹವ್ಯಕ ಸಮುದಾಯದ ನೇತೃತ್ವದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವು ಶ್ಲಾಘನೀಯವಾಗಿದೆ. ಮದುವೆ ಹಾಗೂ ಇನ್ನಿತರ ಸಮಾರಂಭಗಳಲ್ಲಿಯೂ ಹಲಸಿನ ಹಣ್ಣನ್ನು ಎಲ್ಲರೂ ಉಪಯೋಗಿಸುವಂತಾಗಬೇಕು ಎಂದ ಅವರು ಹಲಸಿನ ಪುನಶ್ಚೇತನಕ್ಕೆ ಈ ಕಾರ್ಯಕ್ರಮವು ಕಾರಣವಾಗಲಿ ಎಂದರು.

ಶ್ರೀರಾಮಚಂದ್ರಾಪುರಮಠದ ಗೋಕರ್ಣ ಮಂಡಲಾಧ್ಯಕ್ಷೆ ಈಶ್ವರಿ ಬೇರ್ಕಡವು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪ್ರತಿಯೊಂದು ಹಲಸು ಮೇಳಗಳು ನಮಗೆ ಸ್ಪೂರ್ತಿದಾಯಕವಾಗಿದೆ. ಪ್ರಕೃತಿಯಲ್ಲಿ ನಮಗೆ ಪೂರಕವಾದ ಅಂಶಗಳು ಪ್ರಕೃತಿದತ್ತವಾಗಿ ನಿರ್ಮಾಣವಾಗಿದ್ದರೂ ನಾವು ಅದನ್ನು ಗಮನಿಸುವುದಿಲ್ಲ. ಪ್ರತಿಯೊಂದು ವಸ್ತುವು ಪ್ರತಿಯೊಂದು ಜೀವಿಗೂ ಪರಸ್ಪರ ಪೂರಕವಾಗಿ ಆಹಾರರೂಪದಲ್ಲಿ ಹಾಗೂ ವಸ್ತುರೂಪದಲ್ಲಿ ನಮಗೆ ಒದಗಿಬರುತ್ತಿದೆ. ಈಗಾಗಲೇ ಹಲಸು ಕೇರಳ ರಾಜ್ಯದ ಫಲವೆಂದು ಅಂಗೀಕಾರವಾಗಿದೆ. ಹಲಸಿನಲ್ಲಿ ನಿರುಪಯುಕ್ತ ವಸ್ತುವೆಂಬುದಿಲ್ಲ. ಗೋವಿಗಾಗಿ ಹಮ್ಮಿಕೊಂಡ ಕಾರ್ಯಕ್ರಮವಿದಾಗಿದ್ದು ಹಲಸಿನ ಮೌಲ್ಯವರ್ಧನೆಗೆ ಕಾರಣವಾಗಿದೆ. ಹಲಸಿನ ಒಂದು ಕರೆಗೆ ಎಲ್ಲೆಡೆ ಒಂದು ತಿಂಗಳ ಕಾಲ ಹಲಸಿನ ಹಪ್ಪಳದ ಸಪ್ಪಳ ಕೇಳಿಬಂದಿದೆ. ಇದು ಇತರರಿಗೂ ಸ್ಪೂರ್ತಿಯಾಗಿ ಹಲಸಿನ ಸದ್ದು ಎಲ್ಲೆಡೆ ಮೊಳಗಲಿ, ಗೋಮಾತೆಯ ಚರಣಾರವಿಂದಕ್ಕೆ ಈ ಹಲಸು ಮೇಳ ಸಮರ್ಪಣೆಯಾಗಲಿ ಎಂದರು.

ವೇದಿಕೆಯಲ್ಲಿ ಮುಳ್ಳೇರಿಯ ಹವ್ಯಕ ಮಂಡಲ ದಿಗªರ್ಶಕ ಬಿ.ಜಿ. ರಾಮಭಟ್‌ ಗೋಳಿತ್ತಡ್ಕ, ಮುಳ್ಳೇರಿಯ ಮಂಡಲ ಅಧ್ಯಕ್ಷ ಪೊ.ಶ್ರೀಕೃಷ್ಣ ಭಟ್‌, ಮಂಡಲ ಕಾರ್ಯದರ್ಶಿ ಬಾಲ ಸುಬ್ರಹ್ಮಣ್ಯ ಸರ್ಪಮಲೆ, ಡಾ| ವೈ.ವಿ. ಕೃಷ್ಣಮೂರ್ತಿ, ಕುಸುಮ ಪೆರ್ಮುಖ, ಜಯ ಪ್ರಕಾಶ ಪಜಿಲ, ಕಾಸರಗೋಡು ಸಿಪಿಸಿಆರ್‌ಐಯ ವಿಜ್ಞಾನಿ ಡಾ| ಸರಿತಾ ಹೆಗ್ಡೆ, ವೆಂಕಟ ಕೃಷ್ಣ ಶರ್ಮ ಮುಳಿಯ ಉಪಸ್ಥಿತರಿದ್ದರು. ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಹಾಡಿದರು. ಹಲಸು ಮೇಳದ ಅಧ್ಯಕ್ಷ ಶಿವಪ್ರಸಾದ ವರ್ಮುಡಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೆರಡಾಲ ವಲಯ ಅಧ್ಯಕ್ಷ ಹರಿಪ್ರಸಾದ ಪೆರ್ಮುಖ ಧನ್ಯವಾದವನ್ನಿತ್ತರು. ಶಂಕರ ಪ್ರಸಾದ ಕುಂಚಿನಡ್ಕ, ಗುರುಮೂರ್ತಿ ನಾಯ್ಕಪು, ಚಂದ್ರಶೇಖರ ಏತಡ್ಕ, ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ, ಗೋವಿಂದ ಬಳ್ಳಮೂಲೆ ಕಾರ್ಯಕ್ರಮ ನಿರೂಪಣೆಗೈದರು. ಪ್ರಾರಂಭದಲ್ಲಿ ಶಿಷ್ಯವೃಂದದವರೆಲ್ಲ ಜೊತೆಗೂಡಿ ಗುರುವಂದನೆಯೊಂದಿಗೆ ಶ್ರೀಗುರುಗಳಿಗೆ ಚರಣಕಾಣಿಕೆಯನ್ನು ಸಮರ್ಪಿಸಿದರು.

ಟಾಪ್ ನ್ಯೂಸ್

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.