ಕೊಡಗು: ಕಾವೇರಿ ಮಟ್ಟ ಹೆಚ್ಚಳ, ಅಲ್ಲಲ್ಲಿ ರಸ್ತೆ ಬಿರುಕು
Team Udayavani, Jul 7, 2019, 12:05 PM IST
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಕಾವೇರಿ ನದಿ ನೀರಿನ ಮಟ್ಟ ಹೆಚ್ಚಾಗಿದೆ. ಮಡಿಕೇರಿಯ ವಿವಿಧೆಡೆ ಬರೆ ಕುಸಿತ ಮತ್ತು ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.
ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜೀವನದಿ ಕಾವೇರಿ ನದಿ ಪಾತ್ರದಲ್ಲಿ ಹರ್ಷ ಮೂಡಿದೆ. ಹೆಚ್ಚೇನೂ ಗಾಳಿ ಇಲ್ಲದಿದ್ದರೂ ಕೆಲವೆಡೆಗಳಲ್ಲಿ ಮರಗಳು ಧರೆಗುರುಳಿರುವ ಘಟನೆಗಳು ನಡೆದಿವೆ. ನದಿ, ಕಿರುತೊರೆ, ಹೊಳೆಗಳಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.
ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಇಳಿಯುವ ಮೆಟ್ಟಿಲುಗಳು ಜಲಾವೃತವಾಗಿದ್ದು, ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಎರಡು- ಮೂರು ದಿನಗಳಲ್ಲಿ ಪ್ರವಾಹವೇರ್ಪಡುವ ಸಾಧ್ಯತೆಗಳಿದೆ. ಕಾವೇರಿ ನದಿ ಪಾತ್ರದ ಮೂರ್ನಾಡು ಬಲಮುರಿ, ಸಿದ್ದಾಪುರ, ಕುಶಾಲನಗರ ವಿಭಾಗಗಳಲ್ಲೂ ಉತ್ತಮ ಮಳೆಯಾಗುತ್ತಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿಯ ಅವಧಿಯಲ್ಲಿ ಭಾರೀ ಮಳೆೆಯಾಗಿದ್ದು, ಹಗಲಿನ ವೇಳೆ ಸಾಧಾರಣ ಮಳೆಯಾಗಿದೆ.
ರಸ್ತೆಯಲ್ಲಿ ಬಿರುಕು
ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಗಳೂರು ರಸ್ತೆಯಲ್ಲಿ ಕಾಣಿಸಿಕೊಂಡಂತೆಯೇ ಸೋಮವಾರಪೇಟೆ ರಸ್ತೆಯ ಅಂಚಿನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಜನ ಆತಂಕಗೊಂಡಿದ್ದಾರೆ. ಮುಂಜಾಗ್ರತೆಯಾಗಿ ಜಿಲ್ಲಾಡಳಿತ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ರಸ್ತೆಯ ಒಂದು ಭಾಗದಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.