ವೇದಗಳನ್ನು ಅನುಷ್ಠಾನಗೊಳಿಸಿದರೆ ಜನ್ಮ ಸಾರ್ಥಕ:ವಿಷ್ಣು ಆಸ್ರ
Team Udayavani, Apr 21, 2019, 6:30 AM IST
ಬದಿಯಡ್ಕ : ವೇದಗಳನ್ನು ಅಭ್ಯಸಿಸಿ, ಅದರಲ್ಲಿನ ವಿಚಾರಗಳನ್ನು ಆಚರಿಸಿ, ಅನುಷ್ಠಾನ ಮಾಡಿದಲ್ಲಿ ನಮ್ಮ ಜನ್ಮವು ಸಾರ್ಥಕವಾಗುತ್ತದೆ ಎಂದು ಹಿರಿಯ ಧಾರ್ಮಿಕ ಮುಂದಾಳು, ವೈದಿಕ ವಿದ್ವಾಂಸ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಅಭಿಪ್ರಾಯಪಟ್ಟರು. ಕೂಟ ಮಹಾಜಗತ್ತು ಸಾಲಿಗ್ರಾಮ ಇದರ ಕಾಸರಗೋಡು ಅಂಗಸಂಸ್ಥೆಯ ನೇತƒತ್ವದಲ್ಲಿ ಬೇಳ ಕುಮಾರಮಂಗಲದ ಸುಬ್ರಹ್ಮಣ್ಯ ಸ್ವಾಮೀ ದೇವಾಲಯದಲ್ಲಿ ಶರವಣ ಸೇವಾ ಟ್ರಸ್ಟ್‌ನ ಸಹಯೋಗದೊಂದಿಗೆ ಪ್ರಸ್ತುತ ದೇವಾಯಲದಲ್ಲಿ ಪ್ರಾರಂಭಗೊಂಡ ವಸಂತ ವೇದಪಾಠ ಶಿಬಿರವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ವೇದಾಧ್ಯನದ ಮೂಲಕ ಧನಾತ್ಮಕ ವ್ಯಕ್ತಿ, ಸಮಾಜ ಸƒಷ್ಟಿಯ ಹೊಣೆ ಯುವ ತಲೆಮಾರಿನ ಕರ್ತವ್ಯವಾಗಿದ್ದು, ಮಂತ್ರಾರ್ಥಗಳ ಜೊತೆಗೆ ಅದು ಪ್ರಕೃತಿಯ ಮೇಲೆ ಬೀರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಆಸಕ್ತಿ ಬೆಳೆಸಬೇಕು ಎಂದು ಅವರು ಈ ಸಂದರ್ಭ ಕರೆ ನೀಡಿದರು. ಸಮಾರಂಭದಲ್ಲಿ ಶರವಣ ಸೇವಾ ಟ್ರಸ್ಟ್‌ನ ನಿರ್ದೇಶಕರೂ, ಪ್ರಸ್ತುತ ದೇಗುಲದ ಪ್ರಧಾನ ಅರ್ಚಕರೂ ಆದ ರಾಮಚಂದ್ರ ಅಡಿಗ ಅವರು ಅಧ್ಯಕ್ಷತೆ ವಹಿಸಿದ್ದರು.0 ಕಾರ್ಯಕ್ರಮದಲ್ಲಿ ಕಾಸರಗೋಡು ಅಂಗಸಂಸ್ಥೆಯ ಅಧ್ಯಕ್ಷ ಎಸ್.ಎನ್.ಮಯ್ಯ ಬದಿಯಡ್ಕ, ಶಿಬಿರದ ಅಧ್ಯಾಪಕರಾದ ಶಿವಾನಂದ ಮಯ್ಯ ಐಲ, ಗೋವಿಂದ ಜೋಯಿಸ, ವೆಂಕಟರಾಜ ಕಾರಂತ ಹಾಗು ಗೋಪಾಲಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದರು.
ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಟುಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಬೇಕೆಂದರು. ಶಿಬಿರದ ಸಂಚಾಲಕ ಚಂದ್ರಶೇಖರ್ ರಾವ್ ಏತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಎಂ.ನರಸಿಂಹ ರಾಜ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.