ಕೇರಳದಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ್ತವ್ಯ: 35 ಮಂದಿ ಬಂಧನ
Team Udayavani, Sep 7, 2017, 10:26 AM IST
ಕಾಸರಗೋಡು: ಭಾರತಕ್ಕೆ ಅಕ್ರಮವಾಗಿ ನುಸುಳುವ ಬಾಂಗ್ಲಾ ದೇಶದ ಪ್ರಜೆಗಳು ಕೇರಳದಲ್ಲಿ ಅಪಾರ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಸಂಬಂಧ 35 ಮಂದಿಯನ್ನು ವಿವಿಧೆಡೆಗಳಿಂದ ಪೊಲೀಸರು ಬಂಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಸರಗೋಡಿನಲ್ಲೂ ಬಾಂಗ್ಲಾ ಪ್ರಜೆಗಳಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಸಮಗ್ರ ತನಿಖೆ ಆರಂಭಿಸಿದ್ದಾರೆ.
ಬಾಂಗ್ಲಾ ಪ್ರಜೆಗಳು ಅಕ್ರವಾಗಿ ಭಾರತದೊಳಕ್ಕೆ ನುಸುಳುತ್ತಿದ್ದು, ಇದು ದೇಶದ ಆಂತರಿಕ ಭದ್ರತೆಗೆ ಭಾರೀ ಅಪಾಯವನ್ನೊಡ್ಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪತ್ತೆಹಚ್ಚಲು ಕೇರಳ ಪೊಲೀಸರು ಎಲ್ಲ ಜಿಲ್ಲೆಗಳಲ್ಲೂ ತನಿಖೆ ಆರಂಭಿಸಿದ್ದಾರೆ. ಇದರಂತೆ ಮಲಪ್ಪುರ ಎಡವಣ್ಣಪಾರದಲ್ಲಿ ಮಲಪ್ಪುರ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ದಿಬೇಶ್ ಕುಮಾರ್ ಬೆಹ್ರ ನೀಡಿದ ನಿರ್ದೇಶದಂತೆ ಸಿ.ಐ. ಮೊಹಮ್ಮದ್ ಹನೀಫಾ ನೇತೃತ್ವದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 35 ಮಂದಿ ಬಾಂಗ್ರಾ ಪ್ರಜೆಗಳನ್ನು ಬಂಧಿಸಲಾಗಿದೆ.
ಎಡವಣ್ಣಾಪಾರದ ಬಾಡಿಗೆ ಮನೆಯಲ್ಲಿ ಹೊರ ರಾಜ್ಯ ಕಾರ್ಮಿಕರ ಸೋಗಿನಲ್ಲಿ ಅವರು ಇಲ್ಲಿ ವಾಸಿಸುತ್ತಿದ್ದರು. ವಿದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಗ್ಗಿ ವಾಸಿಸುತ್ತಿರುವ ಸೆಕ್ಷನ್ ಪ್ರಕಾರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರು ಭಾರತದೊಳಗೆ ಅಕ್ರಮವಾಗಿ ನುಸುಳಿದ ಮತ್ತು ಅದರ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು, ಕೇರಳ ರಾಜ್ಯ ಪೊಲೀಸ್ ಗುಪ್ತಚರ ವಿಭಾಗ ಮತ್ತು ಕೇಂದ್ರ ಗುಪ್ತಚರ ವಿಭಾಗವೂ ಸಮಗ್ರ ತನಿಖೆ ನಡೆಸುತ್ತಿದೆ.
ಪಾಸ್‌ಪೋರ್ಟ್, ಮೊಬೈಲ್ ವಶ: ಬಾಂಗ್ಲಾ ಪ್ರಜೆಗಳು ವಾಸಿಸುತ್ತಿದ್ದ ಬಾಡಿಗೆ ಮನೆಗಳಿಗೆ ಪೊಲೀಸರು ನಡೆಸಿದ ದಾಳಿ ಮತ್ತು ತಪಾಸಣೆಯಲ್ಲಿ ಪಾಸ್‌ಪೋರ್ಟ್‌ಗಳು, ಗುರುತು ಚೀಟಿಗಳು, ಹಲವು ಮೊಬೈಲ್ ಫೋನ್‌ಗಳು, ಸಿಮ್‌ಗಳನ್ನು ವಶಪಡಿಸಿಕೊಂಡು ತೀವ್ರ ಪರಿಶೀಲನೆಗೊಳಪಡಿಸಿದ್ದಾರೆ.
ಪಶ್ಚಿಮ ಬಂಗಾಲ ನಿವಾಸಿಗಳೆಂಬ ತಪ್ಪು ಮಾಹಿತಿ ನೀಡಿ ಅವರು ಕೇರಳಕ್ಕೆ ಬಂದು ಕಳೆದ ಎರಡು ವರ್ಷಗಳಿಂದ ಹಲವೆಡೆ ಪದೇ ಪದೇ ತಮ್ಮ ವಾಸ್ತವ್ಯ ಬದಲಾಯಿಸಿಕೊಂಡು ಹೊರ ರಾಜ್ಯ ಕಾರ್ಮಿಕರ ಸೋಗಿನಲ್ಲಿ ಜೀವಿಸುತ್ತಿದ್ದರು. ಅವರು ಪದೇ ಪದೇ ವಾಸ್ತವ್ಯ ಬದಲಾಯಿಸುತ್ತಿರುವುದು ಪೊಲೀಸರಲ್ಲಿ ತೀವ್ರ ಶಂಕೆ ಉಂಟು ಮಾಡಿದೆ. ಈ ಬಗ್ಗೆಯೂ ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಕೇರಳದ ಹೆಚ್ಚಿನ ಜಿಲ್ಲೆಗಳಲ್ಲಿ ಸಾವಿರಾರು ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯ ಹೂಡಿದ್ದಾರೆಂಬ ಬಗ್ಗೆಯೂ ಗುಪ್ತಚರ ವಿಭಾಗಕ್ಕೆ ಮಾಹಿತಿ ಲಭಿಸಿದೆ.
ಪಾಕ್ ಏಜೆಂಟರು !
ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬರುವ ಬಾಂಗ್ಲಾ ಪ್ರಜೆಗಳಲ್ಲಿ ಹಲವರು ಪಾಕಿಸ್ಥಾನದ ಬೇಹುಗಾರ ಸಂಘಟನೆಯಾದ ಐಎಸ್‌ಐ ಏಜೆಂಟರಾಗಿಯೂ, ಇನ್ನು ಕೆಲವರು ಉಗ್ರಗಾಮಿ ಸಂಘಟನೆಗಳ ಏಜೆಂಟರಾಗಿಯೂ ಭಾರತದ ಹಲವೆಡೆ ಅಕ್ರಮವಾಗಿ ತಂಗಿದ್ದು ಭಾರತ ವಿರೋಧಿ ಭೂಗತ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಜತೆಗೆ ಪಾಕ್‌ನಲ್ಲಿ ಮುದ್ರಿಸಿದ ಭಾರತದ ನಕಲಿ ನೋಟುಗಳನ್ನು ಭಾರತದಲ್ಲಿ ವಿತರಿಸುವ ಏಜೆಂಟರಾಗಿಯೂ ಕಾರ್ಯವೆಸಗುತ್ತಿದ್ದಾರೆ. ಇಂತಹ ಬೆಳವಣಿಗೆ ದೇಶದ ಆಂತರಿಕ ಭದ್ರತೆಗೆ ಅಪಾಯಕಾರಿ ಎಂಬ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಕೇಂದ್ರ ಗೃಹ ಖಾತೆ ರಾಜ್ಯಗಳಿಗೆ ನಿರ್ದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.