ಕುಂಡುಕೊಳಕೆ: ಮರಳು ಅಕ್ರಮ ಸಾಗಾಟ; ಸ್ಥಳೀಯರಿಂದ ತಡೆ

Team Udayavani, Aug 17, 2019, 5:07 AM IST

16KSDC1

ಮಂಜೇಶ್ವರ: ಮಂಜೇಶ್ವರ ಕುಂಡು ಕೊಳಕೆ ಬೀಚ್‌ ಪರಿಸರದಿಂದ ರಾತ್ರಿ 8 ಗಂಟೆಯಿಂದ ಮುಂಜಾನೆ 5 ಗಂಟೆಯ ತನಕ ಎಗ್ಗಿಲ್ಲದೆ ಸಾಗುತ್ತಿರುವ ಅಕ್ರಮ ಮರಳು ಸಾಗಾಟವನ್ನು ತಡೆಯಲು ಪರಿಸರ ವಾಸಿಗಳು ಕಾನೂನು ಪಾಲಕರಲ್ಲಿ ಹಲವು ಬಾರಿ ಆಗ್ರಹಿಸಿದ್ದರೂ ಈ ಬಗ್ಗೆ ಕಿಂಚತ್ತೂ ತಲೆಕೆಡಿಸಿಕೊಳ್ಳದ ಕಾನೂನು ಪಾಲಕರ ವಿರುದ್ಧ ಆಕ್ರೋಶಗೊಂಡ ಸ್ಥಳೀಯರು ಶುಕ್ರವಾರ ಮುಂಜಾನೆ ಯುವಕರು,ವೃದ್ಧರು, ಮಹಿಳೆಯರು ಸೇರಿ ಮರಳು ಸಾಗಾಟ ಮಾಡುತ್ತಿರುವ ಟಿಪ್ಪರ್‌ ಲಾರಿಗಳನ್ನು ತಡೆದಿದ್ದಾರೆ.

ಈ ಸಂದರ್ಭ ರೊಚ್ಚಿಗೆದ್ದ ಮರಳು ಮಾಫಿಯಾ ತಂಡ ಮಾರಕಾಯುಧಗಳಿಂದ ಊರವರನ್ನು ಆಕ್ರಮಿಸಲು ಬಂದಿದ್ದಾರೆ. ಮಾತ್ರ ವಲ್ಲದೆ ಸ್ಥಳೀಯ ನಿವಾಸಿಯೊಬ್ಬರ ಮನೆ ಯವರ ಗೇಟನ್ನು ಮುರಿದು ಹಾಕಿ ಅವರಿಗೆ ಹಲ್ಲೆಗೈದಿರು ವುದಾಗಿ ದೂರಲಾಗಿದೆ. ಮಾತ್ರವಲ್ಲದೆ ತಡೆ ಹಿಡಿದ 5 ವಾಹನಗಳ ಪೈಕಿ ನಾಲ್ಕು ಟಿಪ್ಪರ್‌ ಲಾರಿಗಳನ್ನು ಬಲ ಪ್ರಯೋಗಿಸಿ ಕೊಂಡು ಹೋಗಿ ಊರವರಿಗೆ ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ.

ಮಂಜೇಶ್ವರ ಕುಂಡುಕೊಳಕೆ ಬೀಚ್‌ ಪರಿಸರದಿಂದ ನಂಬ್ರ ಪ್ಲೇಟ್‌ ಅಳವಡಿಸದ ಟಿಪ್ಪರ್‌ ಲಾರಿ ಹಾಗೂ ಪಿಕಪ್‌ ವಾಹನಗಳಲ್ಲಿ ಪ್ರತೀ ದಿನ ರಾತ್ರಿ 50 ಲೋಡ್‌ ಮರಳು ಸಾಗಾಟವಾಗುತ್ತಿರು ವುದಾಗಿ ಊರವರು ಹೇಳುತಿದ್ದಾರೆ.

ಕಡಲ್ಕೊರೆತದಿಂದ ಹಲವಾರು ಮನೆಗಳು ಕಡಲು ಪಾಲಾಗುತ್ತಿರುವುದು ದಿನ ನಿತ್ಯದ ದೃಶ್ಯವಾಗಿದ್ದರೂ ಕುಂಡುಕೊಳಕೆ ಬೀಚ್‌ ಪರಿಸರದಿಂದ ತೆಗೆದ ಮರಳಿನಿಂದಾಗಿ ಅಲ್ಲಲ್ಲಿ ಆಳವಾದ ಹೊಂಡ ಸೃಷ್ಟಿಯಾಗಿದೆ. ಇದೆಲ್ಲವನ್ನೂ ಕಂಡೂ ಕಾಣದಂತೆ ನಟಿಸುತ್ತಿರುವ ಕಾನೂನು ಪಾಲಕರ ವಿರುದ್ಧ ನಾಗರಿಕ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಊರವರು ತಡೆದ 5 ವಾಹನಗಳ ಪೈಕಿ ಒಂದು ಮಾತ್ರ ಅಲ್ಲಿ ಉಳಿದಿದ್ದು ಅದನ್ನು ಊರವರು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೂಡಲೇ ಕ್ರಮ ಕೈಗೊಳ್ಳದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗು ವುದಾಗಿ ಊರವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.