ಪಿಂಚಣಿ ಯೋಜನೆ ಅನುಷ್ಠಾನಗೊಳಿಸಲು ಆಗ್ರಹ
Team Udayavani, Jun 24, 2019, 5:17 AM IST
ಅಡೂರು: 1975-77ರ ಅವಧಿಯ ತುರ್ತು ಪರಿಸ್ಥಿತಿಯ ಸಂದರ್ಭ ದಲ್ಲಿ ಪೊಲೀಸರಿಂದ ಸಾಕಷ್ಟು ದಬ್ಟಾಳಿಕೆ ಅನುಭವಿಸಿ, ಕೌಟುಂಬಿಕವಾಗಿ, ಸಾಮಾಜಿಕ ವಾಗಿ ಹಾಗೂ ಆರ್ಥಿಕವಾಗಿ ಬಳಲಿದ್ದ ನಾಗರಿಕರಿಗೆ ಯೋಗ್ಯ ಪರಿಹಾರ ರೂಪವಾಗಿ ಪಿಂಚಣಿ ವ್ಯವಸ್ಥೆಯನ್ನು ಅನುಷ್ಠಾನ ಗೊಳಿಸಲು ಅಡೂರು ಗ್ರಾಮಾಧಿಕಾರಿಗಳ ಮೂಲಕ ಕೇರಳ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ತುರ್ತು ಪರಿಸ್ಥಿತಿ ಹೋರಾಟ ಸಮಿತಿಯ ಜಿಲ್ಲಾ ಸಮಿತಿಯ ನಿರ್ದೇಶನದಂತೆ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದ ಅಡೂರಿನ ನಾಗರಿಕರು ಪಿಂಚಣಿ ಯೋಜನೆಯನ್ನು ಆರಂಭಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರು.
ಮನವಿಯನ್ನು ಚರಕ್ಕಂಡ ಗಣೇಶ ರಾವ್ ಅವರು ಗ್ರಾಮಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪ್ರಭಾಕರ ನಾಯಕ್ ಮಂಡೆಬೆಟ್ಟು, ಅಪ್ಪಕುಂಞ ಮಾಸ್ತರ್ ತಲ್ಪಚ್ಚೇರಿ, ಕುಂಞರಾಮ ತಲ್ಪಚ್ಚೇರಿ ಹಾಗೂ ಪ್ರಕಾಶ್ ಪಾಂಙಣ್ಣಾಯ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.