ಗುಂಪಿನಿಂದ ಥಳಿತ: ಯುವಕ ಸಾವು
Team Udayavani, Jan 24, 2021, 2:17 AM IST
ಕಾಸರಗೋಡು: ನಗರದ ಕರಂದಕ್ಕಾಡಿನಲ್ಲಿ ಶನಿವಾರ ಮಧ್ಯಾಹ್ನ ಗುಂಪೊಂದರಿಂದ ಥಳಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಯುವಕ ದೇಳಿ ನಿವಾಸಿ, ಮೂಲತಃ ಚೆಮ್ನಾಡ್ ಚಳಿಯಂಗೋಡುವಿನ ರಫೀಕ್ (49) ಅವರು ಮೃತಪಟ್ಟಿದ್ದಾರೆ.
ಕರಂದಕ್ಕಾಡು ಅಶ್ವಿನಿ ನಗರದ ಖಾಸಗಿ ಆಸ್ಪತ್ರೆಯೊಂದರ ಸಮೀಪ ಈ ಘಟನೆ ನಡೆದಿದೆ. ಥಳಿತದಿಂದ ಗಂಭೀರ ಗಾಯಗೊಂಡಿದ್ದ ರಫೀಕ್ ಅವರನ್ನು ತತ್‌ಕ್ಷಣ ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೆ ಅವರು ಮೃತಪಟ್ಟಿದ್ದರು. ಮಹಿಳೆಯೊಬ್ಬರು ಮಗುವಿನೊಂದಿಗೆ ಆಸ್ಪತ್ರೆಗೆ ಬಂದಿದ್ದರು.
ಈ ಸಮಯದಲ್ಲಿ ರಫೀಕ್ ಆ ಮಹಿಳೆಗೆ ಚುಡಾಯಿಸಿ ಕಿರುಕುಳ ನೀಡಲು ಯತ್ನಿಸಿದ್ದ. ಈ ವಿಷಯವನ್ನು ಅವರು ಅಶ್ವಿನಿ ನಗರದಲ್ಲಿದ್ದ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದರು. ಅವರು ತಂಡವಾಗಿ ಬಂದು ರಫೀಕ್ ಅವರಿಗೆ ಥಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಹಿಳೆಯಿಂದ ಪೊಲೀಸರು ಹೇಳಿಕೆ ಸಂಗ್ರಹಿಸಿದ್ದಾರೆ.
ಥಳಿತದಿಂದಲೇ ಸಾವು ಸಂಭವಿಸಿದೆ ಎಂದು ಹೇಳಲು ಸಾಧ್ಯವಾಗದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.