ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

Team Udayavani, Jun 13, 2021, 12:42 PM IST

ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನ ಸಾವು

ಮಡಿಕೇರಿ: ಮಾನಸಿಕ ಹಾಗೂ ಮೂರ್ಛೆ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ವೀರಾಜಪೇಟೆ ಪಟ್ಟಣ ಠಾಣಾ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ತೀವ್ರ ಚಿಂತಾಜನಕ ಸ್ಥಿತಿಯಲ್ಲಿದ್ದ ಆತ ಮಡಿಕೇರಿಯಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನುವ ಆರೋಪದಡಿ ಪ್ರಕರಣ ದಾಖಲಾಗಿದೆ.

ವೀರಾಜಪೇಟೆಯ ರಾಯ್‌ ಡಿ’ಸೋಜಾ (50) ಮೃತಪಟ್ಟವರು. ಪೊಲೀಸರ ವಿರುದ್ಧ ವಿವಿಧ ರಾಜಕೀಯಪಕ್ಷಗಳು ಹಾಗೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಪ್ರಕರಣಕ್ಕೆ ಸಂಬಂಧಿಸಿ ಮೃತರ ಸಹೋದರ ರಾಬಿನ್‌ ಡಿ’ಸೋಜಾ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು,ತಪ್ಪಿತಸ್ಥ ಪೊಲೀಸ್‌ ಅಧಿಕಾರಿ ಹಾಗೂ ಸಿಬಂದಿ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಘಟನೆ ವಿವರ: ಹಲವು ಸಮಯದಿಂದ ಮಾನಸಿಕಅಸ್ವಸ್ಥತೆ ಮತ್ತು ಮೂರ್ಛೆ ರೋಗದಿಂದ ಬಳಲುತ್ತಿದ್ದರಾಯ್‌ ಡಿ’ಸೋಜಾ ಅವರು ಜೂ. 9ರ ರಾತ್ರಿ ಮನೆಯಿಂದ ಹೊರ ಹೋಗಿ ರಸ್ತೆಯಲ್ಲಿ ಕತ್ತಿ ಹಿಡಿದು ತಿರುಗಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಬೀಟ್‌ ಪೊಲೀಸರ ಮೇಲೆ ರಾಯ್‌ ಕತ್ತಿ ಬೀಸಿದ್ದು, ಪೊಲೀಸ್‌ಪೇದೆಯೊಬ್ಬರ ಕೈಗೆ ಗಾಯವಾಗಿದೆ ಎನ್ನಲಾಗಿದೆ.

ಪೊಲೀಸರು ರಾಯ್‌ ಡಿ’ಸೋಜಾರನ್ನು ಠಾಣೆಗೆ ಕರೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಬಳಿಕ ರಾಯ್‌ ಅವರ ತಾಯಿ ಮೆಟೆಲ್ಡಾ ಲೋಬೊ ಅವರನ್ನು ಕರೆಯಿಸಿ ಮಗನನ್ನು ಮನೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ.ಮನೆಗೆ ಬಂದ ಬಳಿಕ ದೇಹವನ್ನು ಪರಿಶೀಲಿಸಿದಾಗ ಗಾಯದ ಗುರುತು ಗಳು ಕಂಡು ಬಂದಿದೆ.

ಹೀಗಾಗಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಗೂ ಪೊಲೀಸ್‌ ಅಧಿಕಾರಿಗಳು ಆಗಮಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲುಮತ್ತು ಸಾರ್ವಜನಿಕರು ಹಲ್ಲೆ ನಡಸಿದ್ದಾರೆಂದು ದೂರು ನೀಡುವಂತೆ ಮೆಟೆಲ್ಡಾ ಲೋಬೊ ಅವರಿಗೆ ಒತ್ತಡ ಹೇರಿದ್ದಾರೆಂದು ಆರೋಪಿಸಲಾಗಿದೆ. ಈ ನಡುವೆ ಜೂ.12ರಂದು ರಾಯ್‌ ಡಿ’ಸೋಜಾ ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

ತೀವ್ರ ಅಸಮಾಧಾನ :

ಮಾನಸಿಕ ರೋಗಿಯನ್ನು ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ ಪೊಲೀಸರು ರಾಯ್‌ ಡಿ’ಸೋಜಾ ಅವರ ಸಾವಿಗೆ ಕಾರಣ ಕರ್ತರಾಗಿ ದ್ದಾರೆ ಎಂದು ಕ್ರೈಸ್ತ ಸಮಾಜ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ತನಿಖೆ ಬಳಿಕ ಕ್ರಮ :

ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ. ಆತ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವಿಚಾರದ ಬಗ್ಗೆಯೂ ತನಿಖೆ ನಡೆಯಲಿದೆ. ತನಿಖೆಯ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾಮಿಶ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.