ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Team Udayavani, Apr 24, 2024, 12:19 AM IST
ಕಾಸರಗೋಡು: ಪ್ರಧಾನಮಂತ್ರಿ ಸ್ಥಾನಕ್ಕೆ ರಾಹುಲ್ ಗಾಂಧಿಯನ್ನು ವಿಪಕ್ಷಗಳ ಒಕ್ಕೂಟವಾದ “ಇಂಡಿಯ’ ಪರಿಗಣಿಸಿಲ್ಲವೆಂದು ಸಿಎಂ ಪಿಣರಾಯಿ ವಿಜಯನ್ ಹೇಳಿದರು.
ನಿರ್ಣಾಯಕ ಹಂತದಲ್ಲಿರುವ ಸಂದರ್ಭದಲ್ಲಿ ಸ್ವಂತ ಪಕ್ಷದ ನೇತೃತ್ವ ಸ್ಥಾನದಿಂದ ನುಣುಚಿಕೊಂಡ ನೇತಾರನಾಗಿರುವ ರಾಹುಲ್ ಗಾಂಧಿ ದೇಶದ ನಾಯಕತ್ವಕ್ಕೆ ಅರ್ಹರಲ್ಲ. ಬಿಜೆಪಿ ಮತ್ತು ಸಂಘ ಪರಿವಾರ ತಮ್ಮ ಬದ್ಧ ಎದುರಾಳಿಯಾಗಿದ್ದಾರೆಂದು ರಾಹುಲ್ ಗಾಂಧಿ ಹೇಳುತ್ತಿದ್ದರೂ ಅವರನ್ನು ಸಮರ್ಥವಾಗಿ ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಉತ್ತರ ಭಾರತದಿಂದ ಪಲಾಯನಗೈದು ಎರಡನೇ ಬಾರಿ ವಯನಾಡಿನಲ್ಲಿ ಈಗ ಸ್ಪರ್ಧಿಸುತ್ತಿರುವ ರಾಹುಲ್‌ಗೆ ಜನರನ್ನು ಇನ್ನೂ ಮೂರ್ಖರನ್ನಾಗಿಸಲು ಸಾಧ್ಯವಾಗದು. ಕೇರಳದ ಮುಖ್ಯಮಂತ್ರಿಯನ್ನು ಯಾಕೆ ಬಂಧಿಸಲಾಗಿಲ್ಲವೆಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಎತ್ತಿರುವ ಪ್ರಶ್ನೆ ಒಂದು ದೊಡ್ಡ ತಮಾಷೆಯಾಗಿದೆ ಎಂದರು.
ಡಿಎಲ್‌ಎಫ್‌ನೊಂದಿಗೆ ಅವರ ಪತಿ ಹೊಂದಿರುವ ನಂಟಾದರೂ ಏನು? 170 ಕೊಟಿ ರೂ.ಗಳ ಚುನಾವಣ ಬಾಂಡ್ ಬಿಜೆಪಿ ಕೈಸೇರಿರುವುದಾದರೂ ಹೇಗೆ ? ಅದಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಬೇಕಾದವರೇ ಇನ್ನೂ ಬಂಧನಕ್ಕೊಳಗಾಗದೇ ಇರುವಾಗ ಅವರನ್ನು ಈ ತನಕ ಬಂಧಿಸದೇ ಇರುವವರಿಗೆ ಧನ್ಯವಾದ ಹೇಳಬೇಕು. ಅದನ್ನು ಬಿಟ್ಟು ಪಿಣರಾಯಿರನ್ನು ಬಂಧಿಸಬೇಕಂದು ಹೇಳುವುದು ಬಾಲಿಶತನ ಎಂದು ಸಿಎಂ ಪಿಣರಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.