ದೇವರೊಲುಮೆಯಿಂದ ಈ ಜಗತ್ತಿನಲ್ಲಿ ಎಲ್ಲವೂ ಸಾಧ್ಯ - ವಸಂತ ಪೈ
ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Apr 4, 2019, 1:26 PM IST
ಬದಿಯಡ್ಕ : ದೇವರೊಲುಮೆಯಿಂದ ಈ ಜಗತ್ತಿನಲ್ಲಿ ಎಲ್ಲವೂ ಸಾಧ್ಯ. ನಾನು, ನನ್ನದು, ನನ್ನಿಂದಾದುದು ಎಂಬ ಸ್ವಾರ್ಥ ಚಿಂತನೆಯಿಂದ ಹೊರಬಂದು ಸಮಷ್ಠಿಯ ಹಿತವನ್ನು ಬಯಸಿ, ಸಾತ್ವಿಕವಾದ ಜೀವನವನ್ನು ಭಕ್ತಿ ಶ್ರದ್ಧೆಯಿಂದ ಮಾತ್ರ ರೂಪಿಸಿಕೊಳ್ಳಲು ಸಾಧ್ಯ ಎಂದು ಉದ್ಯಮಿ, ಪ್ರತಿಷ್ಠಾ ಮಹೋತ್ಸವದ ಗೌರವಾಧ್ಯಕ್ಷರಾದ ವಸಂತ ಪೈ ಬದಿಯಡ್ಕ ಎಂದರು.
ಎ.27 ರಿಂದ 30 ವರೆಗೆ ಜರಗುವ ಬದಿಯಡ್ಕ ವಳಮಲೆ ಶ್ರೀ ಅಣ್ಣಪ್ಪ ಪಂಜುರ್ಲಿ, ಮೂಕಾಂಬಿಕಾ ಗುಳಿಗ ಹಾಗೂ ಪರಿವಾರ ದೈವಗಳ ದೇವಸ್ಥಾನದ ಪುನಃಪ್ರತಿಷ್ಠೆ ಕಲಶೋತ್ಸವ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೈವ ದೇವರುಗಳ ಬಗೆಗಿನ ಭಕ್ತಿ ಶ್ರದ್ದೆ ಹಾಗೂ ನಿಸ್ವಾರ್ಥ ಸೇವೆಯಿಂದ ಜನ್ಮಾಂತರಗಳ ಪುಣ್ಯ ಸಂಪಾದನೆ ಸಾಧ್ಯ. ಬದಿಯಡ್ಕ ಪೇಟೆಯ ಹೃದಯ ಭಾಗದಲ್ಲಿರುವ ಈ ದೈವಸ್ಥಾನವು ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು ಕಾರಣಿಕದ ಪುಣ್ಯ ಭೂಮಿಯಾಗಿದೆ.ಆದುದರಿಂದ ನಮ್ಮ ಪಾಲಿನ ಸಂರಕ್ಷಕರಾಗಿರುವ ದೈವಗಳ ಸೇವೆಯನ್ನು ನಿಸ್ವಾರ್ಥ ಮನೋಭಾವದಿಂದ ಕೈಗೊಂಡು ಯಶಸ್ವಿಯಾಗಿ ಎಲ್ಲವೂ ನಡೆಯುವಂತೆ ನೋಡಿಕೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷರಾದ ಶಂಕರ ಅವರು ಅಧ್ಯಕ್ಷತೆ ವಹಿಸಿದರು. ಮುಖ್ಯ ಅಥಿತಿಯಾಗಿ ಡಾ| ಶ್ರೀನಿಧಿ ಸರಳಾಯ ಮಾತನಾಡಿದರು. ಹಿರಿಯರಾದ ಚನಿಯ ಮಿಂಚಿನಡ್ಕ ಶುಭಾಶಂಸನೆಗೈದರು. ಪ್ರತಿಷ್ಠಾ ಮಹೋತ್ಸವದ ಗೌರವ ಕಾರ್ಯದರ್ಶಿಯಾದ ವಿಶ್ವನಾಥ ಪ್ರಭು ಕರಿಂಬಿಲ ಸ್ವಾಗತಿಸಿ, ವಿಜಯ ಧನ್ಯವಾದ ಸಮರ್ಪಿಸಿದರು. ರವಿಕಾಂತ್ ಕೇಸರಿ ಕಾರ್ಯಕ್ರಮ ನಿರೂಪಿಸಿದರು. ದೈವಗಳ ಪ್ರತಿಷ್ಠಾ ಮಹೋತ್ಸವದ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.