ಜಾಲ್ಸೂರು-ಕಾಸರಗೋಡು ರಸ್ತೆ: ಅಪಾಯಕಾರಿ ತಿರುವು
Team Udayavani, Feb 12, 2019, 1:00 AM IST
ಜಾಲ್ಸೂರು: ಸುಳ್ಯ- ಕಾಸರಗೋಡು ರಸ್ತೆಯಲ್ಲಿ ಜಾಲ್ಸೂರು ಗೇಟ್‌ನಿಂದ ಮುಂದೆ ದೊಡ್ಡ ತಿರುವಿದ್ದು, ನಿರಂತರ ಅಪಘಾತಗಳು ನಡೆಯುತ್ತಿವೆ. ವಾಹನ ದಟ್ಟನೆ ಇರುವ ರಸ್ತೆಯಲ್ಲಿ ಕಾರು, ಬೈಕ್‌ಗಳು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬೀಳುತ್ತವೆ. ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ. ಜನಪ್ರತಿನಿಧಿಗಳ ಜಾಣ ಮೌನವೂ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಲವು ವರ್ಷಗಳಿಂದ ಅಪಘಾತಗಳು ಸತತವಾಗಿ ನಡೆಯುತ್ತಿರುವ ಕುರಿತು “ಉದಯವಾಣಿ’ ಸುದಿನದಲ್ಲಿ ವಿಶೇಷ ವರದಿ ಪ್ರಕಟಿಸಲಾಗಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಭಾರೀ ಅನಾಹುತ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಸಂಭಾವ್ಯ ಅಪಾಯ ತಪ್ಪಿಸಲಾದರೂ ಸಂಬಂಧಪಟ್ಟವರು ಇತ್ತ ಗಮನ ಹರಿಸುವುದು ಒಳಿತು.
ವ್ಯರ್ಥ ತಡೆಗೋಡೆ
ಲೋಕೋಪಯೋಗಿ ಇಲಾಖೆಯಿಂದ 2003-2004ರಲ್ಲಿ ಜಾಲ್ಸೂರು ತಿರುವಿನಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಪರಿಸ್ಥಿತಿ ಬದಲಾಗಿಲ್ಲ. ಕಾಮಗಾರಿಯ ಅವ್ಯವಸ್ಥಿತ ನಿರ್ವಹಣೆಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿ¨ªಾರೆ. ಅನುದಾನದ ಕೊರತೆ ಕಾರಣ ನೀಡಿ ಕಾಮಗಾ ರಿಯನ್ನು ಅರೆಬರೆ ನಡೆಸಲಾಗಿತ್ತು.
ಸೂಚನ ಫಲಕವೂ ಇಲ್ಲ
ಇತ್ತೀಚೆಗೆ ಕಾರೊಂದು ಇದೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಅದೃಷ್ಟ ವಶಾತ್ ಯಾವುದೇ ಪ್ರಾಣ ಹಾನಿಯಾಗಿ ರಲಿಲ್ಲ. ಪ್ರಯಾಣಿಕರ ಗಮನಕ್ಕಾಗಿ ರಸ್ತೆಬದಿ “ಅಪಘಾತ ವಲಯ’ ಎನ್ನುವ ಸೂಚನ ಫಲಕವನ್ನೂ ಅಳವಡಿಸಿಲ್ಲ. ಮಳೆಗಾಲದಲ್ಲಿ ಇಲ್ಲಿ ಮಣ್ಣು ಕುಸಿಯುತ್ತಿದ್ದರೂ ಅಧಿಕಾರಿಗಳು ಭರವಸೆ ಕೊಟ್ಟು ಮತ್ತೆ ಆ ಕಡೆ ತಿರುಗಿ ನೋಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿ¨ªಾರೆ.
ಕರ್ತವ್ಯ ಮರೆತ ಜನಪ್ರತಿನಿಧಿಗಳು
ತಿರುವಿನ ಸಮಸ್ಯೆಯ ಕುರಿತು ಜನಪ್ರತಿನಿಧಿಗಳಿಗೆ ಹಲವು ವರ್ಷಗಳಿಂದ ಮನವಿ ಕೊಟ್ಟರೂ, ಯಾವುದೇ ಸ್ಪಂದನೆ ಇಲ್ಲ. ಗ್ರಾಮಸಭೆಯಲ್ಲೂ ವಿಷಯ ಪ್ರಸ್ತಾವಿಸಲಾಗಿದೆ.
ಅಭಿವೃದ್ಧಿಯ ಮಾತು ಚುನಾವಣೆಯ ಸಂದರ್ಭದಲ್ಲಿ ಮತಕ್ಕಾಗಿ ಹೇಳುತ್ತಾರೆ. ಆಮೇಲೆ ನಮ್ಮ ಕಡೆ ತಿರುಗಿ ಕೂಡ ನೋಡುವುದಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿ¨ªಾರೆ.
ಕಚೇರಿಗಳಿಗೆ ಅಲೆಯುವುದು ಬಿಟ್ಟು ಯಾವುದೇ ಪ್ರತಿಫಲವಿಲ್ಲ ಎನ್ನುವುದು ಜನರ ವಿಷಾದ.
ತಾತ್ಕಾಲಿಕ ಪರಿಹಾರವಾದರೂ ಮಾಡಲಿ ಎಂದು ಜನರು ಆಗ್ರಹಿಸಿ¨ªಾರೆ.
ಕ್ರಮ ಕೈಗೊಳ್ಳುತ್ತೇವೆ
ತಿರುವಿನಲ್ಲಿ ಅಪಘಾತ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಇದೆ. ತತ್‌ಕ್ಷಣ ತಾತ್ಕಾಲಿಕ ಪರಿಹಾರ ಮಾಡಲಾಗುವುದು. ತಡೆ ಬೇಲಿ ಅಥವಾ ಟ್ಯಾಪ್ ಹಾಕಲು ಕ್ರಮ ಕೈಗೊಳ್ಳುತ್ತೇವೆ.
-ಸಂದೇಶ್, ಅಸಿಸ್ಟೆಂಟ್ ಎಂಜಿನಿಯರ್, ಪಿಡಬ್ಲೂéಡಿ, ಸುಳ್ಯ
ಅಧಿಕಾರಿಗಳ ನಿರ್ಲಕ್ಷ
ತಿರುವಿನಲ್ಲಿ ವಾಹನಗಳು ತೋಟಕ್ಕೆ ಬೀಳುವುದು ಸಾಮಾನ್ಯವಾಗಿವೆ. ಇತ್ತೀಚೆಗೆ ಕಾರೊಂದು ಪಲ್ಟಿಯಾಗಿ ನಜ್ಜುಗುಜ್ಜಾಗಿತ್ತು. ಅಧಿಕಾರಿಗಳ ನಿರ್ಲಕ್ಷ ಅನಾಹುತಗಳಿಗೆ ಕಾರಣವಾಗುತ್ತಿವೆ.
– ಶೇರ್ಕ ಕಾಳಮನೆ, ಜಾಲ್ಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.