“ಕಣಿ ಕಾಣುವ ಹಬ್ಬ’ ಬಿಸು ಸಂಭ್ರಮದಿಂದ ಆಚರಣೆ
Team Udayavani, Apr 16, 2019, 6:30 AM IST
ಕಾಸರಗೋಡು: ಸುಖ, ನೆಮ್ಮದಿ, ಸಂವೃದ್ಧಿಯ ಸಂಕೇತವಾದ ಸೌರಯುಗಾದಿ “ಕಣಿ ಕಾಣುವ ಹಬ್ಬ’ ಬಿಸುವನ್ನು ಸೋಮವಾರ ಸಂಭ್ರಮ, ಸಡಗರ, ಭಕ್ತಿ, ಶ್ರದ್ಧೆಯಿಂದ ನಾಡಿನಾದ್ಯಂತ ಆಚರಿಸಲಾಯಿತು. ತುಳುನಾಡಿನಲ್ಲಿ ಬಿಸು ಎಂದು ಕರೆಸಿಕೊಳ್ಳುವ ಹಬ್ಬ ಕೇರಳದಲ್ಲಿ ವಿಷು ಎಂಬ ಹೆಸರಿನಲ್ಲಿ ಕೊಂಡಾಡಲಾಯಿತು.
ವಿಷು ಅಥವಾ ಬಿಸು ಹಬ್ಬದ ಅಂಗವಾಗಿ ನಾಡಿನ ಪ್ರಧಾನ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದು ವಿಶೇಷ ಪೂಜೆ, ಪುನಸ್ಕಾರ ಸಲ್ಲಿಸಿದರು. ಮುಂಜಾನೆ ಎದ್ದು ಮನೆಗಳಲ್ಲಿ ಸಿದ್ಧಪಡಿಸಿದ ಕಣಿ ಕಂಡು ಆ ಬಳಿಕ ಹತ್ತಿರದ ದೇವಸ್ಥಾನ, ದೈವಸ್ಥಾನ, ಮಠ, ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದೇವಸ್ಥಾನಗಳಲ್ಲೂ ಕಣಿ ಸಿದ್ಧಪಡಿಸಲಾಗಿತ್ತು. ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ದೇವರ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದರು. ವಿವಿಧ ದೇವಸ್ಥಾನಗಳಲ್ಲಿ ಕಣಿ ಸಿದ್ಧಪಡಿಸಿದ್ದು ನೋಡುಗರಿಗೆ ವಿಶೇಷವಾದ ಅನುಭವವನ್ನುಂಟು ಮಾಡಿತು. ನಾಡಿನಾದ್ಯಂತ ದೇವಸ್ಥಾನ, ದೈವಸ್ಥಾನ, ಮಂದಿರಗಳಲ್ಲೂ ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದು ವಿಶೇಷ ಪೂಜೆ ಪುನಸ್ಕಾರ ನಡೆಸಿದರು.
ಹೊಸ ಬಟ್ಟೆ ತೊಟ್ಟು ಕಣಿಕಂಡು ಸಂತೋಷದಿಂದ ವಿಷು ಆಚರಿಸಿ ಸಂಬಂಧಿಕರಿಗೆ, ಗೆಳೆಯರಿಗೆ, ಆತ್ಮೀಯರಿಗೆ ಪರಸ್ಪರ ಶುಭಾಶಯ ಹೇಳಿದರು. ಸಂಜೆಯ ಹೊತ್ತು ವಿಶ್ರಾಂತಿ ಪಡೆಯಲು ಸಮುದ್ರ ಕಿನಾರೆಗೆ ತೆರಳಿ ಸಮುದ್ರದಲೆಯ ಸವಿಯನ್ನು ಸವಿದರು.
ಸಂಕಲ್ಪ
ವಿಷು ಹೊಸ ವರುಷದ ಶುರು ಸಂವೃದ್ಧಿ ಸಂಕಲ್ಪದ ದಿನ. ಯಾವುದೇ ಕಾರ್ಯದ ಆರಂಭಕ್ಕೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಈ ದಿನ ಶುಭ ದಿನ. ವರ್ಷವಿಡೀ ಸುಖ, ಸಮೃದ್ಧಿ ನೆಲೆಸಲಿ ಎಂಬ ಆಶಯದೊಂದಿಗೆ ಐಶ್ವರ್ಯದ ಸಂಕೇತವಾಗಿ ತುಳುನಾಡ ಜನರು ಮತ್ತು ಕೇರಳಿಯರು ವಿಷು ಹಬ್ಬವನ್ನು ಆಚರಿಸಿದರು. ಇದೇ ಹಬ್ಬ ತುಳು ನಾಡಿನಲ್ಲಿ “ಬಿಸು ಪರ್ಬ’ ಎಂದೇ ಖ್ಯಾತಿ ಪಡೆದಿದೆ.
ವಿಷು ಕಣಿಯ ವಿಶೇಷ ಬಲಿ
ಕುಂಬಳೆ ಸೀಮೆಯ ಅತಿ ಪುರಾತನವೂ, ಪ್ರಸಿದ್ಧವೂ ಆದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಎ. 15 ರಂದು ಮುಂಜಾನೆ ದೀಪೋತ್ಸವದ ಬಳಿಕ ವಿಷು ಕಣಿಯ ವಿಶೇಷ ಬಲಿ ನಡೆಯಿತು.
ವಿಶೇಷ ಬಲಿ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಕ್ತರು ಭಾಗವಹಿಸಿದರು.
ಬಲಿ ಉತ್ಸವದ ಬಳಿಕ ರಾಜಾಂಗಣ ಪ್ರಸಾದ ನಡೆಯಿತು.
ಕಣಿ ಕಾಣುವುದು
ವರುಷದ ಆರಂಭದಲ್ಲಿ ಮೊದಲ ನೋಟಕ್ಕೆ ಆರಾಧ್ಯ ದೇವರನ್ನು ನೋಡುವ ಕ್ರಮವನ್ನು ಕಣಿ ಕಾಣುವುದು ಎನ್ನಲಾಗುತ್ತದೆ. ಕಣಿ ಎಂದರೆ ಶ್ರೇಯಸ್ಸು, ಶಕುನ, ಭವಿಷ್ಯ ಎಂಬ ಅರ್ಥಗಳೂ ಇವೆ. ಮನೆಯನ್ನು ಸಿಂಗರಿಸಿ ಹಿಂದಿನ ದಿನ ರಾತ್ರಿಯೇ ದೇವರ ವಿಗ್ರಹದ ಜತೆಗೆ ಕಣಿಯ ಸಾಮಗ್ರಿಗಳನ್ನು ಇರಿಸಿ ನವ ಧಾನ್ಯಗಳು, ಬಟ್ಟೆಬರೆ, ಬಂಗಾರದ ಆಭರಣ, ಫಲವಸ್ತುಗಳು ಇತ್ಯಾದಿಗಳೊಂದಿಗೆ ಸಾಂಪ್ರದಾಯಿಕ ಶೈಲಿಯಲ್ಲಿ ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ ಮತ್ತು ಕನ್ನಡಿ ಇರಿಸಿ ಕಣಿಯನ್ನು ಸಿದ್ಧಪಡಿಸಲಾಗುತ್ತದೆ. ಎಲ್ಲರೂ ಬೆಳಗಿನ ಜಾವವೇ ಎದ್ದು, ಮಿಂದು ಹೊಸಬಟ್ಟೆ ಧರಿಸಿ ಗುರುಹಿರಿಯರಿಗೆ ವಂದಿಸಿ ನಂತರ ಕಣಿ ದರ್ಶನ ಪಡೆದು ಕೃತಾರ್ಥರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.