Kasaragod: ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ತಲೆಮರೆಸಿಕೊಂಡ ಮಹಾವಂಚಕಿಗೆ ಉಡುಪಿಯಲ್ಲಿ ಶೆಲ್ಟರ್?
Team Udayavani, Oct 24, 2024, 7:10 AM IST
ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ನಂಬಿಸಿ ಹಲವರಿಂದ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ವಿರುದ್ಧ ಬದಿಯಡ್ಕ ಪೊಲೀಸರು ಇನ್ನೊಂದು ಕೇಸು ದಾಖಲಿಸಿಕೊಂಡಿದ್ದಾರೆ.
ಪಳ್ಳತ್ತಡ್ಕ ಉಕ್ಕಿನಡ್ಕ ಬಳ್ಳಂಬೆಟ್ಟು ನಿವಾಸಿ ಶ್ವೇತಾ ಕುಮಾರಿ ನೀಡಿದ ದೂರಿನಂತೆ ಈ ಕೇಸು ದಾಖಲಿಸಲಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ ಸೆ. 25ರಂದು ಎರಡೂವರೆ ಲಕ್ಷ ರೂ. ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಸಚಿತಾ ರೈ ವಿರುದ್ಧ ದಾಖಲಾದ ಕೇಸುಗಳ ಸಂಖ್ಯೆ 8ಕ್ಕೇರಿದೆ.
ಡಿವೈಎಫ್‌ಐ ಮಾಜಿ ಜಿಲ್ಲಾ ಸಮಿತಿ ಸದಸ್ಯೆಯಾಗಿದ್ದ ಸಚಿತಾ ರೈ ಬಾಡೂರು ಎಎಲ್‌ಪಿ ಶಾಲೆ ಅಧ್ಯಾಪಕಿಯಾಗಿದ್ದು, ವಂಚನೆ ಪ್ರಕರಣದಲ್ಲಿ ಕೇಸು ದಾಖಲಿಸಿಕೊಳ್ಳುವುದರೊಂದಿಗೆ ಈಕೆ ತಲೆಮರೆಸಿಕೊಂಡಿದ್ದಾಳೆ. ಮೊದಲಿಗೆ ಎರ್ನಾಕುಳಂನಲ್ಲಿ ತಲೆಮರೆಸಿಕೊಂಡಿದ್ದ ಸಚಿತಾ, ಪ್ರಸ್ತುತ ಉಡುಪಿಯ ರಹಸ್ಯ ಕೇಂದ್ರವೊಂದರಲ್ಲಿ ಇರುವುದಾಗಿ ಪೊಲೀಸರಿಗೆ ಸುಳಿವು ದೊರೆತಿದೆ. ಈ ವಿಷಯವನ್ನು ಕೇರಳ ಪೊಲೀಸರು ಕರ್ನಾಟಕ ಪೊಲೀಸರಿಗೆ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲೂ ಕೇಸು ದಾಖಲಾದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರೂ ತನಿಖೆ ನಡೆಸುತ್ತಿದ್ದಾರೆ.
ತಲೆಮರೆಸಿಕೊಂಡಿರುವ ಸಚಿತಾ ರೈಯನ್ನು ಪತ್ತೆ ಹಚ್ಚಲು ಕಾಸರಗೋಡು ಡಿವೈಎಸ್‌ಪಿ ಸಿ.ಕೆ. ಸುನಿಲ್ ಕುಮಾರ್ ನೇತೃತ್ವದಲ್ಲಿ ಪ್ರತ್ಯೇಕ ತನಿಖಾ ತಂಡವನ್ನು ರೂಪಿಸಲಾಗಿದೆ. ಈ ತಂಡದಲ್ಲಿ ಕುಂಬಳೆ ಠಾಣೆ ಇನ್‌ಸ್ಪೆಕ್ಟರ್, ಮಂಜೇಶ್ವರ, ಬದಿಯಡ್ಕ ಠಾಣೆಯ ಎಸ್.ಐ., ಸಿಬಂದಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.