Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Team Udayavani, Aug 30, 2024, 1:17 AM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಇ-ಸಿಗರೇಟ್‌ ಪತ್ತೆ: ಇಬ್ಬರು ಪೊಲೀಸ್‌ ವಶಕ್ಕೆ
ಕಾಸರಗೋಡು: ನಗರದ ಪ್ರಸ್‌ ಕ್ಲಬ್‌ ಜಂಕ್ಷನ್‌ ಪರಿಸರದಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 3000 ದಷ್ಟು ಇ-ಸಿಗರೇಟ್‌ ಅನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ಈ ಸಂಬಂಧ ಮಂಜೇಶ್ವರ ನಿವಾಸಿಗಳಾದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ವಿತರಿಸಲೆಂದು ಮಲಪ್ಪುರಂನಿಂದ ಇದನ್ನು ತರಲಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ ಢಿಕ್ಕಿ: ಗಾಯಾಳು ಯುವಕ ಸಾವು
ಉಪ್ಪಳ: ಬದಿಯಡ್ಕ ಸಮೀಪದ ಮಾವಿನಕಟ್ಟೆಯಲ್ಲಿ ಆ.28 ರಂದು ಬೆಳಗ್ಗೆ ಖಾಸಗಿ ಬಸ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಿನ ಪ್ರಯಾಣಿಕ, ಮಂಗಲ್ಪಾಡಿ ಪ್ರತಾಪನಗರದ ಮದ್ರಸ ಬಳಿಯ ಅಬ್ದುಲ್‌ ರಹಿಮಾನ್‌ ಅವರ ಪುತ್ರ ಮುಬಾಶಿರ್‌(21) ಸಾವಿಗೀಡಾದರು.

ಕುಂಬಳೆ-ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯಲ್ಲಿ ಖಾಸಗಿ ಬಸ್‌ ಢಿಕ್ಕಿ ಹೊಡೆದು ಕಾರು ನಜ್ಜುಗುಜ್ಜಾಗಿತ್ತು. ಕಾರಿನಲ್ಲಿದ್ದ ಮುಬಾಶಿರ್‌ ಗಂಭೀರ ಗಾಯಗೊಂಡಿದ್ದರು. ಕೊಲ್ಲಿಯಲ್ಲಿ ಸೂಪರ್‌ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಬಾಶಿರ್‌ ಒಂದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸೆ. 6ರಂದು ಕೊಲ್ಲಿಗೆ ಮರಳುವವರಿದ್ದರು.

ನಾರಂಪಾಡಿ: ಯುವಕ ನಾಪತ್ತೆ
ಬದಿಯಡ್ಕ: ಮನೆಯಲ್ಲಿ ಏಕಾಂಗಿಯಾಗಿದ್ದ ನಾರಂಪಾಡಿ ನಿವಾಸಿ ರೋಶನ್‌ ಜೋನ್‌ ಡಿ’ಸೋಜಾ (41) ನಾಪತ್ತೆಯಾಗಿರುವುದಾಗಿ ಸಹೋದರಿ ತೂಮಿನಾಡು ನಿವಾಸಿ ಸರಿತಾ ಡಿ’ಸೋಜಾ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳಿಂದ ಇವರು ಕಾಣದೇ ಇದ್ದುದರಿಂದ ನೆರೆಮನೆ ನಿವಾಸಿಗಳು ಆ.25ರಂದು ಸಹೋದರಿ ಸರಿತಾ ಅವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು.

ಪಾಣತ್ತೂರು: ದನವನ್ನು ಅರ್ಧ ತಿಂದ ಚಿರತೆ
ಕಾಸರಗೋಡು: ಪಾಣತ್ತೂರು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ತಲೆದೋರಿದೆ. ಪಾಣತ್ತೂರು ಸಮೀಪದ ದೊಡ್ಡ ಮನೆಯ ಚಂದ್ರಶೇಖರ ಅವರ ಹಟ್ಟಿಯಲ್ಲಿ ಕಟ್ಟ ಹಾಕಿದ್ದ ದನವನ್ನು ಚಿರತೆ ಕೊಂದು ಅರ್ಧ ತಿಂದಿದೆ. ಹಟ್ಟಿಯಲ್ಲಿ ಮೂರು ದನಗಳಿದ್ದವು. ಈ ಪೈಕಿ ಒಂದನ್ನು ಕೊಂದು ಹಾಕಿದೆ. ಬಳಾಂತೋಡು ಪಶುಸಂಗೋಪನಾ ಆಸ್ಪತ್ರೆಯ ವೈದ್ಯರಾದ ಡಾ| ಅರುಣ್‌ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ದನದ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ ಸಂಸ್ಕರಿಸಲಾಯಿತು.

ಈ ಪರಿಸರದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.