ಕಾಸರಗೋಡು ಕ್ರೈಂ ಸುದ್ದಿಗಳು: ಕೋಳಿ ಅಂಕ; ಮೂವರ ಬಂಧನ
Team Udayavani, Sep 29, 2022, 5:34 PM IST
ಉಪ್ಪಳ: ಗುವೆದಪಡ್ಪು ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಕರ್ನಾಟಕ ನಿವಾಸಿ ಮಲ್ಲಿಕಾರ್ಜುನ(62), ಕಾಸರಗೋಡಿನ ನವೀನ್(42) ಮತ್ತು ಪೈವಳಿಕೆಯ ಶಿವಪ್ರಸಾದ್(48) ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದು, 7 ಕೋಳಿ ಹಾಗು 6850 ರೂ. ವಶಪಡಿಸಿದ್ದಾರೆ.
ಯುವಕನ ಕೊಲೆ: ಪುತ್ತಿಗೆ ನಿವಾಸಿಯ ಬಂಧನ
ಕಾಸರಗೋಡು: ಕೊಚ್ಚಿಯ ಕಲ್ಲೂರು ಅಂತಾರಾಷ್ಟ್ರೀಯ ಕ್ರೀಡಾಂಗಣ ಪರಿಸರದಲ್ಲಿ ಗ್ರೇಟರ್ ಕೊಚ್ಚಿನ್ ಡೆವಲಪ್‌ಮೆಂಟ್ ಅಥೋರಿಟಿ ವತಿಯಿಂದ ಸೆ.24 ರಂದು ನಡೆದ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಕೊಚ್ಚಿ ವನಯಪ್ಪಿಳ್ಳೆ ಅಮ್ಮಾ ಎನ್ ಕೋವಿಲ್‌ಪರಂಬದ ಚೆಲ್ಲಮ್ಮ ವೀಟಿಲ್ ರಾಧಾಕೃಷ್ಣನ್ ಅವರ ಪುತ್ರ ಎಂ.ಆರ್. ರಾಧಾಕೃಷ್ಣನ್(27) ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪುತ್ತಿಗೆ ನಿವಾಸಿ ಮೊಹಮ್ಮದ್ ಹುಸೈನ್‌ನನ್ನು ಮೈಸೂರಿನಿಂದ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಮುಖಂಡನ ಮನೆಗೆ ಕಲ್ಲೆಸೆದು ಹಾನಿ
ಕಾಸರಗೋಡು: ಬಿಜೆಪಿ ಕಾಂಞಂಗಾಡ್ ಮುನಿಸಿಪಲ್ ಸೆಕ್ರೆಟರಿ ಅರಯಿಕ್ಕಡವು ಬಾಂಗೋಡ್‌ನ ವಿ.ಕೆ.ರಂಜಿತ್ ಅವರ ಮನೆಗೆ ಸೆ.29 ರಂದು ಮುಂಜಾನೆ ಕಲ್ಲೆಸೆದು ಹಾನಿಗೊಳಿಸಲಾಗಿದೆ. ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಆಲ್ಟೋ ಕಾರಿನ ಗಾಜು ನಾಶಗೊಂಡಿದೆ. ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ :
ಕುಂಬಳೆ: ಕುಂಬಳೆ ಪೇಟೆಯಲ್ಲಿ ಕುಂಬಳೆ ಜಿಎಚ್‌ಎಸ್‌ಎಸ್‌ನ 8 ಮತ್ತು 10 ನೇ ತರಗತಿ ವಿದ್ಯಾರ್ಥಿಗಳ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಪೇಟೆ ಸಮೀಪ ಶಾಲೆಗೆ ತೆರಳುವ ರಸ್ತೆಯಲ್ಲಿ ಸುಮಾರು 100 ರಷ್ಟು ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ವಿದ್ಯಾರ್ಥಿಗಳು ಚದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.