Kasaragod Crime News: ಕಾಸರಗೋಡು ಅಪರಾಧ ಸುದ್ದಿಗಳು
Team Udayavani, Oct 17, 2023, 10:30 PM IST
ಗಾಂಜಾ ಸಾಗಾಟ: ಪರಾರಿಯಾದ ಆರೋಪಿ ಸೆರೆ
ಮಂಜೇಶ್ವರ: ಕಾರಿನಲ್ಲಿ 90 ಕಿಲೋ ಗಾಂಜಾ ಸಾಗಾಟ ನಡೆಸಿದ ಪ್ರಕರಣದಲ್ಲಿ ಪರಾರಿಯಾಗಿದ್ದ ಆರೋಪಿ ಪಳಯಂಗಡಿ ನಿವಾಸಿ ರಿಯಾಸ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಅ. 15ರಂದು ರಾತ್ರಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಬಾಯಿಕಟ್ಟೆಯಿಂದ ಗಾಂಜಾ ವಶಪಡಿಸಲಾಗಿತ್ತು. ಆರೋಪಿ ರಿಯಾಸ್ ಪರಾರಿಯಾಗಿದ್ದ. ಈ ಪ್ರಕರಣದಲ್ಲಿ ಮುಖ್ಯ ಆರೋಪಿ ಕೂತುಪರಂಬ ಕಣ್ಣವಂ ನಿವಾಸಿ ರೈಫ್ ಬಶೀರ್‌ನನ್ನು ಬಂಧಿಸಲಾಗಿತ್ತು.
**
ಸಂಚರಿಸುತ್ತಿದ್ದ ಸ್ಕೂಟರ್‌ಗೆ ಬೆಂಕಿ
ಹೊಸದುರ್ಗ: ಸಂಚರಿಸುತ್ತಿದ್ದ ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡ ಘಟನೆ ಕಾಂಞಂಗಾಡ್‌ನ ಇಕ್ಬಾಲ್ ನಗರದಲ್ಲಿ ನಡೆದಿದೆ. ಸ್ಕೂಟರ್ ಬೆಂಕಿಗಾಹುತಿಯಾಗಿದೆ. ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ ಸ್ಕೂಟರ್ ಸವಾರ ನಿಯಾದ್ ಸ್ಕೂಟರನ್ನು ನಿಲ್ಲಿಸಿ ಇಳಿದುದರಿಂದ ಅಪಾಯದಿಂದ ಪಾರಾದರು. ಸ್ಥಳೀಯರು ಬೆಂಕಿಯನ್ನು ಆರಿಸಿದರು.
**
ಪೆಟ್ರೋಲ್ ಬಂಕ್ ನೌಕರನಿಗೆ ಹಲ್ಲೆ
ಉಪ್ಪಳ: ಉಪ್ಪಳದ ಮೆಹಬೂಬ್ ಪೆಟ್ರೋಲ್ ಬಂಕ್‌ನ ನೌಕರ ಪೆರಿಯಡ್ಕದ ಸಜೇಶ್ (35) ಅವರಿಗೆ ಹಲ್ಲೆಗೈದ ಘಟನೆ ನಡೆದಿದೆ. ವಾಹನಕ್ಕೆ ಪೆಟ್ರೋಲ್ ತುಂಬಿಸುವ ವಿಷಯದಲ್ಲಿ ವಾಗ್ವಾದ ನಡೆದು ನೌಕರನಿಗೆ ಪಿಕಪ್ ಚಾಲಕ ಹಲ್ಲೆ ಮಾಡಿದ್ದಾಗಿ ದೂರು ನೀಡಲಾಗಿದೆ. ಇದರಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ.
**
ಯುವಕನಿಗೆ ಹಲ್ಲೆಗೈದು ಬೈಕ್ ಅಪಹರಣ
ಕಾಸರಗೋಡು: ಪಡನ್ನಕ್ಕಾಡ್ ಅಂದವಪ್ಪಣ ಕರುವಳದ ಬಿ.ಎಸ್.ಹನೀಫ (52) ಅವರಿಗೆ ಹಲ್ಲೆಗೈದು ಬೈಕ್ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕರುವಳ ನಿವಾಸಿಗಳಾದ ಶ್ರೀಹರಿ, ನಾಸರ್ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ. ಅ.16 ರಂದು ರಾತ್ರಿ 10.45 ಕ್ಕೆ ಬೈಕ್ ಅಪಹರಿಸಲಾಗಿದೆ.
ಇದನ್ನೂ ಓದಿ: Bengaluru: ಮಾಜಿ ಪ್ರಿಯಕನ ಹತ್ಯೆಗೈದು ಗಲ್ಲಿಯಲ್ಲಿ ಶವ ಎಸೆದ ದಂಪತಿ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.