Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Team Udayavani, Dec 26, 2024, 10:00 PM IST

Untitled-1

ಬೈಕ್‌ ಕಳವು : ಇಬ್ಬರ ಬಂಧನ
ಮಂಜೇಶ್ವರ: ಬೈಕ್‌ ಕಳವು ಸಂಬಂಧ ಮೇಲ್ಪರಂಬ ಪೊಲೀಸ್‌ ಠಾಣೆ ವ್ಯಾಪ್ತಿಯ ಕೋಳಿಯಡ್ಕ ಲಕ್ಷಂವೀಡು ನಿವಾಸಿಗಳಾದ ಅಬ್ದುಲ್‌ ಬಾಸಿತ್‌(22) ಮತ್ತು ಮುಹಮ್ಮದ್‌ ಅಫ್ಸಲ್‌(23)ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದರು. ಉಪ್ಪಳ ನಿವಾಸಿಯಾದ ಮುಹಮ್ಮದ್‌ ಹಮೀದ್‌ ಅವರ ಬೈಕನ್ನು ಕಳವು ಮಾಡಲಾಗಿತ್ತು. ಆರೋಪಿಗಳು ಬೈಕ್‌ ಕಳವು ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಮೂಡಿ ಬಂದಿತ್ತು. ಈ ದೃಶ್ಯದ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಆರೋಪಿಗಳನ್ನು ವಿದ್ಯಾನಗರದಿಂದ ಬಂಧಿಸಲಾಯಿತು.

ನೇಣು ಬಿಗಿದು ಯುವಕ ಆತ್ಮಹತ್ಯೆ
ಮಾನ್ಯ: ಮಾನ್ಯ ನಿವಾಸಿ ಕೃಷ್ಣ ಅವರ ಪುತ್ರ ವಿಜೇಶ್‌(38) ಮನೆಯ ಬೆಡ್‌ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಹೆಲ್ಮೆಟ್‌ನಿಂದ ಬಸ್‌ ಚಾಲಕನಿಗೆ ಹಲ್ಲೆ
ಕಾಸರಗೋಡು: ಸೈಡ್‌ ನೀಡುವ ವಿಷಯದಲ್ಲಿ ಬಸ್‌ ಚಾಲಕ ಚೆರ್ಕಳ ಕೋಲಾಚಿಯಡ್ಕ ನಿವಾಸಿ ಅಹಮ್ಮದ್‌ ಕಬೀರ್‌(35) ಅವರಿಗೆ ವಿದ್ಯಾನಗರದಲ್ಲಿ ಹೆಲ್ಮೆಟ್‌ನಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ಬೈಕ್‌ ಸವಾರ ಅಣಂಗೂರು ನಿವಾಸಿ ಮುಹಮ್ಮದ್‌ ರೊಯಾಸ್‌ (30) ವಿರುದ್ಧ ವಿದ್ಯಾನಗರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಗಾಂಜಾ ಸಹಿತ ಯುವಕನ ಬಂಧನ
ಕಾಸರಗೋಡು: ಸ್ಪೆಷಲ್‌ ಡ್ರೈವ್‌ನಂತೆ ಅಬಕಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 0.75 ಗ್ರಾಂ ಮೆಥಾಫಿಟಾಮಿನ್‌ ಮತ್ತು 5 ಗ್ರಾಂ ಗಾಂಜಾ ವಶಪಡಿಸಿಕೊಂಡು, ಈ ಸಂಬಂಧ ಚೆರ್ವತ್ತೂರು ಮುಂಡಕಂಡಂ ಆಯಿಶಾ ಮಂಜಿಲ್‌ನ ಶಂಶೀರ್‌(27)ನನ್ನು ಬಂಧಿಸಿದೆ. ಕಾರನ್ನು ವಶಪಡಿಸಿಕೊಂಡಿದೆ.

ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಚೆರ್ವತ್ತೂರು ತುರುತ್ತಿ ಕಾವುಂಚಿರದ ತಲಕ್ಕಾಟ್‌ ಹೌಸ್‌ನ ಸಾಮುವಲ್‌ ಅವರ ಪುತ್ರ ಎಸ್‌.ಮುರುಗನ್‌(41) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಂದೇರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ಯಾಕೆಟ್‌ ಮದ್ಯ ಸಹಿತ ಯುಕವನ ಬಂಧನ
ಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 144 ಪ್ಯಾಕೆಟ್‌ ಮದ್ಯ ವಶಪಡಿಸಿಕೊಂಡ ಅಬಕಾರಿ ದಳ ಈ ಸಂಬಂಧ ಚೆರ್ಕಳದ ಮೋಹನನ್‌(44)ನನ್ನು ಬಂಧಿಸಿದೆ. ಮದ್ಯ ಸಾಗಿಸಲು ಬಳಸಿದ ಸ್ಕೂಟರನ್ನು ವಶಪಡಿಸಿದೆ.

ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ
ಕಾಸರಗೋಡು: ಆಹಾರದೆಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್‌ ಸೋರಿಕೆಯಿಂದಾಗಿ ಕಾಸರಗೋಡಿನ ಹೊಸ ಬಸ್‌ ನಿಲ್ದಾಣ ಪರಿಸರದ ರಾ.ಹೆದ್ದಾರಿಯಲ್ಲಿ ಹರಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು.

ಡಿ.25 ರಂದು ರಾತ್ರಿ 10.30 ಕ್ಕೆ ಮಂಗಳೂರಿನಿಂದ ಕಣ್ಣೂರಿಗೆ ಸಾಗುತ್ತಿದ್ದ ಟ್ಯಾಂಕರ್‌ ಲಾರಿಯಿಂದ ಎಣ್ಣೆ ರಸ್ತೆಗೆ ಹರಿದಿದೆ. ರಸ್ತೆಯಲ್ಲಿ ವ್ಯಾಪಕವಾಗಿ ಎಣ್ಣೆ ಹರಡಿದ್ದರಿಂದ ಇತರ ವಾಹನಗಳಿಗೆ ಸಂಚರಿಸಲು ಸಾಧ್ಯವಾಗದೆ ವಾಹನ ಸಂಚಾರ ಮೊಟಕುಗೊಂಡಿತು. ಕಾಸರಗೋಡು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ನೀರು ಹಾಯಿಸಿ ಎಣ್ಣೆ ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಆರಂಭಗೊಂಡಿತು.

ಟಾಪ್ ನ್ಯೂಸ್

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chirate( leopard)

Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.