Kasaragod: ಕುಂಬಳೆ ಅಪರಾಧ ಸುದ್ದಿಗಳು
Team Udayavani, Sep 1, 2023, 9:31 PM IST
ನೇಣು ಬಿಗಿದು ಯುವಕ ಆತ್ಮಹತ್ಯೆ
ಕುಂಬಳೆ: ಹೇರೂರು ಪಣಿಯೂರು ನಿವಾಸಿ ರಮೇಶ್ ಶೆಟ್ಟಿ ಅವರ ಪುತ್ರ ನವದೀಪ್ ಪಿ.(26) ಅವರು ಮನೆ ಹಿತ್ತಿಲಿನಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನವದೀಪ್ ಪ್ರೀತಿಸುತ್ತಿದ್ದ ಯುವತಿಯ ಸಂಬಂಧಿಕರು ಬಂದ್ಯೋಡ್‌ನಲ್ಲಿ ಬೆದರಿಕೆಯೊಡ್ಡಿರುವುದಾಗಿ ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿನಿಯರಿಗೆ ಕಾರು ಢಿಕ್ಕಿ :ಆರೋಪಿಗಾಗಿ ಶೋಧ
ಕುಂಬಳೆ: ವಾರಗಳ ಹಿಂದೆ ಕುಂಬಳೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರಿಗೆ ಕಾರು ಢಿಕ್ಕಿ ಹೊಡೆಸಿ ಪರಾರಿಯಾದ ವಳಯಂನ ನೌಶಾದ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದೇ ವೇಳೆ ಢಿಕ್ಕಿ ಹೊಡೆದ ಕಾರನ್ನು ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಪರಿಶೀಲಿಸಲಿದ್ದಾರೆ.
ಕಾರು ಮಗುಚಿ ವಿದ್ಯಾರ್ಥಿ ಸಾವು : ಕ್ರೈಂ ಬ್ರಾಂಚ್ ತನಿಖೆ
ಕುಂಬಳೆ: ಕಾರು ಅಪಘಾತಕ್ಕೀಡಾಗಿ ವಿದ್ಯಾರ್ಥಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಕಾರು ಅಪಘಾತಕ್ಕೀಡಾದ ಕಳತ್ತೂರು ಪಳ್ಳಕ್ಕೆ ಜಿಲ್ಲಾ ಕ್ರೈಂಬ್ರಾಂಚ್ ಅಧಿಕಾರಿಗಳು ತೆರಳಿ ಪ್ರಾಥಮಿಕ ಪರಿಶೀಲನೆ ನಡೆಸಿದರು. ಅವರು ನಡೆಸಿದ ಪರಿಶೀಲನೆಯ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
ಮದ್ಯ ಸಹಿತ ಬಂಧನ
ಕುಂಬಳೆ: 180 ಮಿಲ್ಲಿಯ 20 ಪ್ಯಾಕೆಟ್ ಮದ್ಯ ಸಹಿತ ಬಾಡೂರು ಪಾಡಿಯ ನಾರಾಯಣ(46)ನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಬಾಡೂರು ಜಂಕ್ಷನ್‌ನಿಂದ ಮದ್ಯ ವಶಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.