ಕಾಸರಗೋಡು: ಮಾದಕ ವಸ್ತು ನೀಡಿ ಅತ್ಯಾಚಾರ : ನಾಲ್ವರ ಬಂಧನ
Team Udayavani, Dec 21, 2022, 9:04 PM IST
ಕಾಸರಗೋಡು:ವಿದ್ಯಾನಗರ ಠಾಣೆ ವ್ಯಾಪ್ತಿಯ 19ರ ಹರೆಯದ ಯುವತಿಯನ್ನು ಮಾದಕ ವಸ್ತು ನೀಡಿ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಪಟ್ಲ ನಿವಾಸಿ ಜೆ. ಶೈನಿತ್ ಕುಮಾರ್ (30), ಉಳಿಯತ್ತಡ್ಕದ ಕ್ವಾಟ್ರರ್ಸ್‌ನಲ್ಲಿ ವಾಸಿಸುತ್ತಿರುವ ಎನ್. ಪ್ರಶಾಂತ್ (43) ಮತ್ತು ಉಪ್ಪಳ ಸಮೀಪ ಮಂಗಲ್ಪಾಡಿಯ ಮೋಕ್ಷಿತ್ ಶೆಟ್ಟಿ (27)ಯನ್ನು ಕಾಸರಗೋಡು ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಪಿ. ಚಂದ್ರಿಕಾ ನೇತೃತ್ವದ ತಂಡ ಬಂಧಿಸಿದೆ. ಇವರಿಗೆ ಮಧ್ಯವರ್ತಿಯಾಗಿದ್ದ ಕಾಂಞಂಗಾಡ್ ನಿವಾಸಿ ಜಾಸ್ಮಿನ್‌ಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವತಿಗೆ ಆಮಿಷ ತೋರಿಸಿದ ಈ ತಂಡ ಈ ಕೃತ್ಯ ನಡೆಸಿದೆ. ನೆರೆಮನೆಯ ಯುವಕ ಪ್ರೀತಿಸುವ ನಾಟಕವಾಡಿ ಬಳಿಕ ವಿವಾಹವಾಗುವ ಭರವಸೆ ನೀಡಿ ವಿವಿಧೆಡೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಇದಲ್ಲದೆ ಮಧ್ಯವರ್ತಿಯಾದ ಮಹಿಳೆ ಮೂಲಕ ಇತರರಿಗೂ ಯುವತಿಯನ್ನು ಒಪ್ಪಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ.
ಕಾಸರಗೋಡು, ಮಂಗಳೂರು, ಚೆರ್ಕಳ, ತೃಶ್ಯೂರು ಮೊದಲಾದೆಡೆಯ ವಸತಿಗೃಹಗಳಲ್ಲಿ ವಾಸ್ತವ್ಯ ಹೂಡಿ ಅತ್ಯಾಚಾರ ನಡೆಸಲಾಗಿದೆ. ಇದರಿಂದ ಯುವತಿಗೆ ಅರೋಗ್ಯ ಸಮಸ್ಯೆ ತಲೆದೋರಿದ್ದು, ಆಸ್ಪತ್ರೆಗೆ ದಾಖಲಾದ ಸಂದರ್ಭ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಅತ್ಯಾಚಾರದ ಮಾಹಿತಿಗಳು ಹೊರಬಿದ್ದಿವೆ. ಆ ಬಳಿಕ ಪೊಲೀಸರು ಯುವತಿಯಿಂದ ಮಾಹಿತಿ ಪಡೆದು ತನಿಖೆ ನಡೆಸಿದ್ದರು. ಈ ಕೃತ್ಯದಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಶೀಘ್ರವೇ ಅವರ ಬಂಧನವೂ ಆಗಲಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.