Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ
ಚುನಾವಣಾ ತಕರಾರು ಪ್ರಕರಣ
Team Udayavani, Oct 17, 2024, 7:00 AM IST
ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣಾ ತಕರಾರು ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ರಾಜ್ಯ ಸರಕಾರ ಕೇರಳ ಹೈಕೋರ್ಟ್‌ಗೆ ರಿವಿಶನ್ ಪಿಟಿಶನ್ ಸಲ್ಲಿಸಿದೆ.
2021 ರಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕೆ.ಸುಂದರ ಅವರಿಗೆ 2.5 ಲಕ್ಷ ರೂ.ಹಾಗು ಮೊಬೈಲ್ ಫೋನ್ ನೀಡಿ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳವಂತೆ ಮಾಡಲಾಗಿದೆ ಎಂದು ಆರೋಪಿಸಿ ಅಂದು ಇದೇ ಕ್ಷೇತ್ರದ ಎಡರಂಗ ಅಭ್ಯರ್ಥಿ ನೀಡಿದ ದೂರಿನಂತೆ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಸಹಿತ ಆರು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ದ ಸರಕಾರ ಹೈಕೋರ್ಟ್‌ಗೆ ರಿವಿಷನ್ ಪಿಟಿಷನ್ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.