Kasaragod ಎಂಡಿಎಂಎ ಪ್ರಕರಣ: 10 ವರ್ಷ ಕಠಿನ ಸಜೆ
Team Udayavani, Jul 14, 2024, 11:39 PM IST
ಕಾಸರಗೋಡು: ಮಾದಕ ಪದಾರ್ಥ ಎಂಡಿಎಂಎ ಮಾರಾಟ ಮಾಡಲೆತ್ನಿಸಿದ ಪ್ರಕರಣದಲ್ಲಿ ಮುಳಿಯಾರು ಗ್ರಾಮದ ಪೊವ್ವಲ್ ಹೌಸ್‌ನ ನೌಶಾದ್ ಶೇಕ್ (39)ನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (2) 10 ವರ್ಷ ಕಠಿನ ಸಜೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.
ದಂಡ ಪಾವತಿಸದಿದ್ದಲ್ಲಿ 3 ತಿಂಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2021 ಮಾರ್ಚ್ 20ರಂದು ಪಿಲಿಕುಂಜೆಯಿಂದ ಪೊಲೀಸರು 150 ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದರು.
ಉಪ್ಪಳ: ಅಂಗಡಿಯಿಂದ ನಗದು ಕಳವು
ಉಪ್ಪಳ: ಧರ್ಮತ್ತಡ್ಕದ ಮೊಹಮ್ಮದ್ ಶಿಹಾಬ್ ಅವರ ಸ್ಟೇಷನರಿ ಅಂಗಡಿ ಹಾಗೂ ಫ್ಯಾನ್ಸಿ ಸಾಮಗ್ರಿ ಹೊಂದಿರುವ ಅಂಗಡಿ ಮತ್ತು ಸಮೀಪದ ಕುಂಞಾಲಿ ಅವರ ದಿನಸಿ ಅಂಗಡಿಯಿಂದ ಕಳವು ಮಾಡಲಾಗಿದೆ. ಮೊಹಮ್ಮದ್ ಶಿಹಾಬ್ ಅವರ ಅಂಗಡಿಯಿಂದ 30 ಸಾವಿರ ರೂ. ಕಳವು ಮಾಡ ಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.