Kasaragod: ಆಪರೇಶನ್ ಬೈಕ್ ಸ್ಟಂಟ್ ; 35 ದ್ವಿಚಕ್ರ ವಾಹನಗಳು ವಶಕ್ಕೆ
Team Udayavani, Oct 15, 2023, 12:00 AM IST
ಕಾಸರಗೋಡು: ಕಾಸರಗೋಡು ಜಿಲ್ಲೆಯ ಸಹಿತ ಕೇರಳ ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಿ ಕೇರಳ ಪೊಲೀಸ್ ಮತ್ತು ಮೊಟಾರು ವಾಹನ ಇಲಾಖೆಗಳು ಜಂಟಿ ಕಾರ್ಯಾಚರಣೆ ಆರಂಭಿಸಿವೆ. ಇದರ ಅಂಗವಾಗಿ ಶನಿವಾರ ನಿಯಮ ಉಲ್ಲಂಘಿಸಿ ಪರಿವರ್ತನೆಗಳನ್ನು ಮಾಡಿರುವುದು ಮತ್ತು ಅಪಾಯಕಾರಿ ಸಾಹಸ ಪ್ರದರ್ಶಿಸಿರುವುದು ಹಾಗೂ ಅತಿಯಾದ ವೇಗದಲ್ಲಿ ವಾಹನ ಚಾಲನೆ ಆರೋಪದಡಿಯಲ್ಲಿ 35 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಜಂಟಿ ಕಾರ್ಯಾಚರಣೆ ತಂಡವು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, 3,59,250 ರೂ. ದಂಡ ವಿಧಿಸಲಾಗಿದೆ. ಈ ಕಾರ್ಯಾಚರಣೆಗೆ “ಆಪರೇಶನ್ ಬೈಕ್ ಸ್ಟಂಟ್’ ಎಂದು ಹೆಸರಿಡಲಾಗಿದ್ದು, ದ್ವಿಚಕ್ರ ವಾಹನ ಚಾಲನೆಯ ವೇಳೆ ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸುವುದು ಮತ್ತು ಅತಿಯಾದ ವೇಗ, ವಾಹನಗಳಲ್ಲಿ ನಿಯಮ ಉಲ್ಲಂ ಸಿ ಬದಲಾವಣೆ ಮಾಡುವುದನ್ನು ತಡೆಯಲು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಕೇರಳ ಪೊಲೀಸರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದೇ ಕಾರ್ಯಾಚರಣೆಯ ಅಂಗವಾಗಿ 30 ಮಂದಿಯ ವಾಹನ ಚಾಲನೆ ಪರವಾನಿಗೆ ರದ್ದುಗೊಳಿಸಲು ಕೂಡ ಕ್ರಮ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಾಹನ ಸಂಚಾರ ನಿಯಮ ಉಲ್ಲಂ ಸುವವರ ವಿರುದ್ಧ ವಿವಿಧ ಸಾಮಾಜಿಕ ಜಾಲತಾಣಗಳ ಮುಖಾಂತರ ಕೂಡ ನಿಗಾ ಇರಿಸಲಾಗುತ್ತಿದೆ. ಸಾಮಾಜಿಕ ತಾಣಗಳಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೋಗಳ ಆಧಾರದಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸುವ ಸವಾರರ ವಾಹನಗಳ ನೋಂದಣಿ ಸಂಖ್ಯೆ ಇತ್ಯಾದಿ ಪತ್ತೆಹಚ್ಚಲಾಗುತ್ತಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.