Kasaragod: ಆರಾಧನಾಲಯಗಳ ಸರಣಿ ಕಳವಿನ ಹಿಂದೆ ಒಂದೇ ತಂಡ?
Team Udayavani, Nov 5, 2024, 9:15 PM IST
ಕಾಸರಗೋಡು: ವಿದ್ಯಾನಗರ, ಬದಿಯಡ್ಕ, ಮಂಜೇಶ್ವರ ಮತ್ತು ಮೇಲ್ಪರಂಬ ಪೊಲೀಸ್ ಠಾಣೆಗಳ ವ್ಯಾಪ್ತಿಯ ಆರಾಧನಾಲಯಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದ ಸರಣಿ ಕಳವು ಕೃತ್ಯಗಳನ್ನು ಒಂದೇ ತಂಡ ನಡೆಸಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಎರಡು ದಿನಗಳಲ್ಲಾಗಿ ಹತ್ತರಷ್ಟು ಆರಾಧನಾಲಯಗಳು ಮತ್ತು ವ್ಯಾಪಾರ ಸಂಸ್ಥೆಗಳಿಂದ ಕಳವಾಗಿದೆ.
ಮಾನ್ಯ ಶ್ರೀ ಅಯ್ಯಪ್ಪ ಭಜನ ಮಂದಿರ, ಮೀಯಪದವು ಶ್ರೀ ಅಯ್ಯಪ್ಪ ಭಜನ ಮಂದಿರ, ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನ, ನೆಲ್ಲಿಕಟ್ಟೆಯ ಶ್ರೀ ನಾರಾಯಣ ಗುರು ಮಂದಿರ, ವರ್ಕಾಡಿ ಬಜಲಕರಿಯ ಬಾಲ ಯೇಸು ಪ್ರಾರ್ಥನಾ ಮಂದಿರ, ಪಾವಳದ ಕೊರಗಜ್ಜ ಕಟ್ಟೆ, ಮೂರುಗೋಳಿ ಸಮೀಪದ ಪಾಡಿಯ ಬಶೀರ್ ಅವರ ಜನರಲ್ ಸ್ಟೋರ್, ವರ್ಕಾಡಿಯ ಇಗರ್ಜಿ ಮೊದಲಾದಡೆಗಳಿಂದ ಕಳವು ಮಾಡಲಾಗಿತ್ತು.
ಈ ಪರಿಸರದ ಸಿಸಿ ಕೆಮರಾಗಳಲ್ಲಿ ಕಳ್ಳರದೆಂದು ಸಂಶಯಿಸಲಾಗುತ್ತಿರುವ ದೃಶ್ಯ ಗೋಚರಿಸಿದರೂ ಅವರು ಹೆಲ್ಮೆಟ್ ಧರಿಸಿದ್ದರಿಂದ ಗುರುತು ಹಚ್ಚಲು ಸಾಧ್ಯವಾಗಲಿಲ್ಲ. ವಾಹನದಲ್ಲಿ ಬಂದು ಕಳವು ನಡೆಸುತ್ತಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.