ಕಾಸರಗೋಡು : ಶುಕ್ರವಾರ 106 ಪಾಸಿಟಿವ್; ಕೇರಳದಲ್ಲಿ 885 ಮಂದಿಗೆ ಸೋಂಕು
Team Udayavani, Jul 25, 2020, 8:43 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 106 ಮಂದಿಗೆ ಕೋವಿಡ್ ಸೋಂಕು ಬಾಧಿಸಿದ್ದು 68 ಮಂದಿ ಗುಣಮುಖರಾಗಿದ್ದಾರೆ.
885 ಮಂದಿಗೆ ಸೋಂಕು
ಕೇರಳದಲ್ಲಿ ಶುಕ್ರವಾರ 885 ಮಂದಿಗೆ ಸೋಂಕು ದೃಢೀಕರಿಸಲಾಗಿದೆ. ಇದೇ ವೇಳೆ 968 ಮಂದಿ ಗುಣಮುಖರಾಗಿದ್ದಾರೆ. ಸಂಪರ್ಕದ ಮೂಲಕ 724 ಮಂದಿಗೆ ರೋಗ ಬಾಧಿಸಿದೆ. ವಿದೇಶದಿಂದ ಬಂದ 64 ಮತ್ತು ಇತರ ರಾಜ್ಯಗಳಿಂದ ಬಂದ 68 ಮಂದಿಗೆ ರೋಗ ಬಾಧಿಸಿದೆ. ಓರ್ವ ವೈದ್ಯರ ಸಹಿತ 26 ಮಂದಿ ಆರೋಗ್ಯ ಕಾರ್ಯಕರ್ತರಿಗೂ ರೋಗ ಬಾಧಿಸಿದೆ.
163 ಮಂದಿ ವಿರುದ್ಧ ಕೇಸ್
ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಜಿಲ್ಲೆಯಲ್ಲಿ 163 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಲಾಕ್‌ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಜಿಲ್ಲೆಯಲ್ಲಿ 12 ಕೇಸ್ ದಾಖಲಿಸಲಾಗಿದೆ.
ಮಧೂರು: 8 ಮಂದಿಗೆ ಪಾಸಿಟವ್
ಸಂಪರ್ಕ ಮೂಲಕ ಕೋವಿಡ್ ಸೋಂಕು ಅಧಿಕವಾಗಿರುವ ಮಧೂರು ಗ್ರಾಮ ಪಂಚಾಯತ್‌ನಲ್ಲಿ ಪ್ರತಿರೋಧ ಚಟುವಟಿಕೆಗಳನ್ನು ಆರೋಗ್ಯ ಇಲಾಖೆ ಚುರುಕುಗೊಳಿಸಿದೆ. ಇಲ್ಲಿ ನಡೆಸಲಾದ ಆ್ಯಂಟಿಜೆನ್ ತಪಾಸಣೆ ಶಿಬಿರದಲ್ಲಿ 8 ಮಂದಿಗೆ ಕೋವಿಡ್ ಪಾಸಿಟವ್ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.