ಕಾಸರಗೋಡು: 86 ಮಂದಿ ಮೇಲೆ ನಿಗಾ
Team Udayavani, Feb 4, 2020, 6:17 AM IST
ಕಾಸರಗೋಡು: ಕೊರೋನಾ ವೈರಸ್ ಬಾಧಿತನಾಗಿ ಚೀನದಿಂದ ಮರಳಿರುವ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಯ ಸಹಿತ 86 ಮಂದಿಯ ಮೇಲೆ ತೀವ್ರ ನಿಗಾ ಇಡಲಾಗಿದೆ. ಕಾಸರಗೋಡು ಜನರಲ್ ಆಸ್ಪತ್ರೆ ಮತ್ತು ಕಾಂಞಂಗಾಡ್‌ನ ಜಿಲ್ಲಾ ಆಸ್ಪತ್ರೆಗಳಲ್ಲಿ ಐಸೋಲೇಶನ್ ವಾರ್ಡ್ ಗಳನ್ನು ರಚಿಸಲಾಗಿದ್ದು, ಕೊರೊನಾ ವೈರಸ್ ಸೋಂಕು ತಡೆಯಲು ಜಿಲ್ಲೆ ಪೂರ್ಣ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ಅವರು ತಿಳಿಸಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತುರ್ತು ಸಭೆ ಕರೆದ ಅವರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಆದೇಶಿಸಿದರು.
ಉಪಸಮಿತಿ ರಚನೆ
ಮುನ್ನೆಚ್ಚರಿಕೆಯಾಗಿ ಜಿಲ್ಲೆಯಲ್ಲಿ 15 ಉಪ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ದಿನಗಳಲ್ಲೂ ಸಂಜೆ 4.30ರಿಂದ 7 ಗಂಟೆಯ ವರೆಗೆ ಆರೋಗ್ಯ ಸ್ಥಿತಿಗತಿ ಗಳ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲು ಆದೇಶಿಸಲಾಗಿದೆ. ತುರ್ತು ಸಂದರ್ಭ ಎದುರಿಸಲು ಜಿಲ್ಲಾ ಆಸ್ಪತ್ರೆ ಮತ್ತು ಜನರಲ್ ಆಸ್ಪತ್ರೆಗಳಲ್ಲಿ 108 ಆ್ಯಂಬುಲೆನ್ಸ್ ಸೇವೆಯನ್ನು ಸಜ್ಜು ಗೊಳಿಸಲಾಗಿದೆ.
ಕಂಟ್ರೋಲ್ ರೂಂ ಆರಂಭ
ಕೊರೊನಾ ಸೋಂಕು ಪತ್ತೆ ಹಿನ್ನೆಲೆಯಲ್ಲಿ ಜಿಲ್ಲಾ ನಿಗಾ ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಚೀನದಿಂದ ಬಂದವರು ಇಲ್ಲಿ ವರದಿ ಮಾಡಬೇಕೆಂದು ಆದೇಶಿಸಲಾಗಿದೆ.
ಕಂಟ್ರೋಲ್ ರೂಂ ದೂರವಾಣಿ: 9946000493, 2217777
ದಿಶಾ ಟೋಲ್ ಫ್ರೀ ನಂಬರ್: 0471 2552056.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.