ಕಾಸರಗೋಡು ಜಿಲ್ಲೆ : ಹೊಸ ಪ್ರಕರಣ ಇಲ್ಲ
ಕೇರಳದಲ್ಲಿ 2 ಪ್ರಕರಣ ದಾಖಲು
Team Udayavani, May 3, 2020, 9:16 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ ಕೂಡ ಹೊಸ ಕೋವಿಡ್ ಸೋಂಕು ಪ್ರಕರಣ ದಾಖಲಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು 179 ಮಂದಿಗೆ ಸೋಂಕು ಬಾಧಿಸಿದ್ದು, 171 ಮಂದಿ ಗುಣಮುಖರಾಗಿದ್ದಾರೆ. 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕಣ್ಣೂರು, ವಯನಾಡು ಜಿಲ್ಲೆಯಲ್ಲಿ ತಲಾ ಓರ್ವರಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಶನಿವಾರ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸತತ 55 ದಿನಗಳ ಬಳಿಕ ಒಂದೇ ಒಂದು ಕೊರೊನಾ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ನಿಟ್ಟುಸಿರು ಬಿಟ್ಟಿದ್ದ ರಾಜ್ಯದ ಜನತೆ ಶನಿವಾರ ಮತ್ತೆ ಎರಡು ಪ್ರಕರಣಗಳು ಪತ್ತೆಯಾಗಿರುವುದರಿಂದ ಚಿಂತೆಗೀಡಾಗಿದೆ.
8 ಮಂದಿ ಗುಣಮುಖ
ಇದೇ ವೇಳೆ 8 ಮಂದಿ ಗುಣಮುಖರಾಗಿದ್ದಾರೆ. ಕಣ್ಣೂರು ಜಿಲ್ಲೆಯಲ್ಲಿ 6, ಇಡುಕ್ಕಿ ಜಿಲ್ಲೆಯಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ವಯನಾಡಿನಲ್ಲಿ ಕೊರೊನಾ ಪಾಸಿಟಿವ್ ವರದಿಯಾಗದಿರುವ ಕಾರಣ ಈ ತನಕ ಹಸುರು ವಲಯದಲ್ಲಿದ್ದ ವಯನಾಡ್ ಹೊಸ ಪ್ರಕರಣದಿಂದಾಗಿ ಕಿತ್ತಳೆ ವಲಯಕ್ಕೆ ಜಾರಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ವರೆಗೆ ಕೇರಳದಲ್ಲಿ 499 ಮಂದಿಗೆ ಸೋಂಕು ಬಾಧಿಸಿದ್ದು, ಪ್ರಸ್ತುತ 96 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ 21,894 ಮಂದಿ ನಿಗಾದಲ್ಲಿದ್ದಾರೆ. ಶನಿವಾರ ವಿವಿಧ ಆಸ್ಪತ್ರೆಗಳಿಗೆ ಶಂಕಿತ 80 ಮಂದಿಯನ್ನು ದಾಖಲಿಸಲಾಗಿದೆ. ಈ ತನಕ 31,183 ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದು, ಲಭ್ಯ 30,358 ನೆಗೆಟಿವ್ ಆಗಿವೆ.
26 ಪ್ರಕರಣ ದಾಖಲು
ಲಾಕ್‌ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 26 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 30 ಮಂದಿಯನ್ನು ಬಂಧಿಸಿ, 7 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವೆಳ್ಳರಿಕುಂಡ್, ಮೇಲ್ಪರಂಬ ಠಾಣೆಗಳಲ್ಲಿ ತಲಾ 4, ಮಂಜೇಶ್ವರ, ಚಿತ್ತಾರಿಕಲ್‌ನಲ್ಲಿ ತಲಾ 3, ವಿದ್ಯಾನಗರ, ನೀಲೇಶ್ವರ, ಚಂದೇರ, ಬೇಡಗಂ ಅಂಬಲತ್ತರಗಳಲ್ಲಿ ತಲಾ 2, ಕಾಸರಗೋಡು, ಚೀಮೇನಿ, ರಾಜಪುರಂ ಠಾಣೆಗಳಲ್ಲಿ ತಲಾ 1 ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಈ ವರೆಗೆ 2,013 ಪ್ರಕರಣಗಳು ದಾಖಲಾಗಿವೆ. 2,529 ಮಂದಿಯನ್ನು ಬಂಧಿಸಿ, 830 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.