ನಾಡಿನೆಲ್ಲೆಡೆ ನಾಗರಪಂಚಮಿ: ಎಳನೀರು, ಕ್ಷೀರಾಭಿಷೇಕ

Team Udayavani, Jul 28, 2017, 8:50 AM IST

27ksde5.jpg

ಕಾಸರಗೋಡು: ನಾಡಿನೆಲ್ಲೆಡೆ ಗುರುವಾರ ಭಕ್ತಿ ನಿಷ್ಠೆ ಸಡಗರದಿಂದ ನಾಗರ ಪಂಚಮಿ ಆಚರಿಸಲಾಯಿತು. ನಾಡಿನ ಪ್ರಮುಖ ದೇವಾಲಯಗಳಲ್ಲಿ, ಮಂದಿರಗಳಲ್ಲಿ, ನಾಗನ ಬನಗಳಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ನಾಗನಿಗೆ ಎಳನೀರು ಮತ್ತು ಕ್ಷೀರಾಭಿಷೇಕ ನಡೆಸಿದರು. ವರ್ಷದ ಮೊದಲ ಹಬ್ಬದ ಸಡಗರ ಎಲ್ಲೆಡೆ ಕಂಡು ಬಂತು. ಪ್ರಕೃತಿಯನ್ನು ಪೂಜಿಸುವ ನಾಗಾರಾಧನೆ ಹೆಣ್ಮಕ್ಕಳಿಗೆ ವಿಶೇಷವಾಗಿದೆ.

ಕಾಸರಗೋಡಿನ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗಿನಿಂದಲೇ ನಾಗನಿಗೆ ಕ್ಷೀರಾಭಿಷೇಕ ಮತ್ತು ಎಳನೀರಿನ ಅಭಿಷೇಕ ಸಮರ್ಪಿಸಲು ಭಕ್ತಾದಿಗಳು ನೆರೆದಿದ್ದರು. ಇದೇ ರೀತಿ ಜಿಲ್ಲೆಯ ಬಹುತೇಕ ದೇವಸ್ಥಾನ, ಮಂದಿರ, ನಾಗಬನಗಳಲ್ಲಿ ದೃಶ್ಯಗಳು ಕಂಡು ಬಂತು. ನಾಗನಿಗೆ ಅಭಿಷೇಕ ಮಾಡುವ ಮೂಲಕ ಭಕ್ತಾದಿಗಳು ಕೃತಾರ್ಥತೆಯ ಭಾವವನ್ನು ಹೊಂದಿದರು. ಕಾಸರಗೋಡು ಬ್ಯಾಂಕ್‌ ರಸ್ತೆಯಲ್ಲಿರುವ ನಾಗರಾಜ ಕಟ್ಟೆಯಲ್ಲಿ ನಾಗನಿಗೆ ಹಾಲನ್ನೆರೆಯಲು ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ಬೆಳಗ್ಗಿನಿಂದಲೇ ಸರದಿಯಲ್ಲಿ ನಿಂತಿದ್ದರು.

ಕಾಸರಗೋಡು ನಗರದ ಎಸ್‌.ವಿ.ಟಿ. ರಸ್ತೆಯಲ್ಲಿರುವ ನಾಗನ ಕಟ್ಟೆಯಲ್ಲಿ ಭಕ್ತಾದಿಗಳು ಅಭಿಷೇಕ ಮಾಡಿದರು. ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ನೆಲ್ಲಿಕುಂಜೆ ಕೋಮರಾಡಿ ದೈವಸ್ಥಾನ, ಕೊರಕ್ಕೋಡು ನಾಗರಕಟ್ಟೆಯ ಶ್ರೀ ಶಾರದಾ ಭಜನಾಶ್ರಮದ ನಾಗನಕಟ್ಟೆಯಲ್ಲಿ ನಾಗನಿಗೆ ಹಾಲನ್ನೆರೆಯಲು ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದು, ವಿಶೇಷ ಪೂಜೆ ಪುನಸ್ಕಾರ ನಡೆಸಿದರು. ಹಲವೆಡೆ ನಾಗತಂಬಿಲ ನಡೆಯಿತು.

ವರ್ಕಾಡಿಯ ಕಾವೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯ ಅಂಗವಾಗಿ ಬೆಳಗ್ಗೆ ನಾಗತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕೂಡ್ಲು ಸಮೀಪದ ಬಾದಾರದಲ್ಲಿರುವ ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿ¿åಲ್ಲಿ ನಾಗರ ಪಂಚಮಿಯನ್ನು ಆಚರಿಸಲಾಯಿತು. ನಾಗ ದೇವರಿಗೆ ಹಾಲು, ಎಳನೀರಿನ ಅಭಿಷೇಕ ಹಾಗು ತಂಬಿಲ, ಮಹಾಪೂಜೆ ನಡೆಯಿತು. 

ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಬಳಿಕ ಅನ್ನ ದಾನವೂ ನಡೆಯಿತು. ಕಳತ್ತೂರು ಶ್ರೀ ಚಂಡೀಕಾದೇವಿ ಕ್ಷೇತ್ರದಲ್ಲಿ ನಾಗರ ಪಂಚಮಿಯಂಗವಾಗಿ ಬೆಳಗ್ಗೆ ನಾಗನಿಗೆ ಹಾಲಿನ ಅಭಿಷೇಕ, ನಾಗನಿಗೆ ವಿಶೇಷ ಪೂಜೆ, ಪ್ರಸಾದ ವಿತರಣೆ, ಚಂಡೀಕಾದೇವಿ ಕ್ಷೇತ್ರದಲ್ಲಿ ಪೂಜೆ, ಪ್ರಸಾದ ವಿತರಣೆ, ಅನ್ನದಾನ ಜರಗಿತು. ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಹಾಗು ಬಲಿವಾಡುಕೂಟ ನಡೆಯಿತು. ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಕಾನದಲ್ಲಿ ನಾಗರಪಂಚಮಿ ಆಚರಿಸಲಾಯಿತು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.