ಕಾಸರಗೋಡು: ಮತ್ತೆ 6 ಮಂದಿಗೆ ಸೋಂಕು

Team Udayavani, Mar 21, 2020, 5:38 AM IST

ಕಾಸರಗೋಡು: ಮತ್ತೆ 6 ಮಂದಿಗೆ ಸೋಂಕು

ಕಾಸರಗೋಡು: ಕೋವಿಡ್‌ 19 ವೈರಸ್‌ ಎಲ್ಲೆಡೆ ವ್ಯಾಪಿಸುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಆರು ಮಂದಿಗೆ ಕೋವಿಡ್‌ 19 ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8ಕ್ಕೇರಿದೆ.

ಕೋವಿಡ್‌ 19 ಪತ್ತೆಯಾದ ಕಾಸರಗೋಡಿನ ವ್ಯಕ್ತಿಯೋರ್ವ ಫುಟ್ಬಾಲ್‌ ಪಂದ್ಯಾಟ, ಕ್ಲಬ್‌, ವಿವಾಹ ಸಮಾರಂಭ ಮತ್ತು ಇತರೆಡೆ ಹೋಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ರೂಟ್‌ ಮ್ಯಾಪ್‌ ತಯಾರಿಸಲಾಗುವುದು.

ಕೇರಳದಲ್ಲಿ ಶುಕ್ರವಾರ ಒಟ್ಟು 12 ಮಂದಿಗೆ ಕೋವಿಡ್‌ 19 ದೃಢಪಟ್ಟಿದೆ. ಅದರಲ್ಲಿ ಕಾಸರಗೋಡು – 6, ಕೊಚ್ಚಿ – 5 ಮತ್ತು ಪಾಲಾ^ಟ್‌ನಲ್ಲಿ ಒಬ್ಬರಿಗೆ ಸೋಂಕು ಬಾಧಿಸಿದೆ. ಕೇರಳ ರಾಜ್ಯದಲ್ಲಿ ಈ ವರೆಗೆ 40 ಮಂದಿಗೆ ಕೊರೊನಾ ದೃಢೀಕರಿಸಲಾಗಿದೆ. ರಾಜ್ಯದಲ್ಲಿ ಒಟ್ಟು 44396 ಮಂದಿ ನಿಗಾದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿರುವನಂತಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬ್ರಿಟನ್‌ ಪ್ರವಾಸಿಗರು
ಕೊಚ್ಚಿಯಲ್ಲಿ ದೃಢೀಕರಿಸಲ್ಪಟ್ಟ ಐವರು ಬ್ರಿಟನ್‌ ಪ್ರವಾಸಿಗರಾಗಿ ದ್ದಾರೆ. ಒಟ್ಟು 13 ಮಂದಿ ಬ್ರಿಟನ್‌ ಪ್ರಜೆಗಳು ಕೇರಳದ ಪ್ರವಾಸಿ ಕೇಂದ್ರಗಳನ್ನು ವೀಕ್ಷಿಸಲು ಬಂದಿದ್ದರು. ಅವರಲ್ಲಿ ಐವರಿಗೆ ಕೋವಿಡ್‌ 19 ಪತ್ತೆಯಾಗಿದೆ.

ಕೋವಿಡ್‌ 19 ನಿಯಂತ್ರಣಕ್ಕೆ ಸೇನೆ ಯನ್ನು ಬಳಸಿಕೊಳ್ಳುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ತಿಳಿಸಿದ್ದಾರೆ. ಕೋವಿಡ್‌ 19 ಭೀತಿಯ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳನ್ನು, ಪ್ರಾರ್ಥನಾಲಯಗಳನ್ನು ಒಂದು ವಾರ ಮುಚ್ಚಬೇಕೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಅಂಗಡಿಗಳನ್ನು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರವೇ ತೆರೆಯಬೇಕೆಂದು ಮುಖ್ಯಮಂತ್ರಿ ಹೇಳಿದ್ದಾರೆ.

ಎಸೆಸೆಲ್ಸಿ, ಪ್ಲಸ್‌ ಟು ಪರೀಕ್ಷೆ ಮುಂದೂಡಿಕೆ
ಕೋವಿಡ್‌ 19 ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎಸೆಸೆಲ್ಸಿ, ಪ್ಲಸ್‌ ಟು, ವಿಶ್ವವಿದ್ಯಾಲಯ ಪರೀಕ್ಷೆಗಳು ಸಹಿತ ಮುಂದೂಡಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಕರೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.