ಕಾಸರಗೋಡು: ಒಬ್ಬರಿಗೆ ಕೋವಿಡ್-19 ಸೋಂಕು ದೃಢ

24 ಮಂದಿ ರೋಗ ಮುಕ್ತ, ಬಿಡುಗಡೆ

Team Udayavani, Apr 17, 2020, 9:47 AM IST

ಕಾಸರಗೋಡು: ಒಬ್ಬರಿಗೆ ಕೋವಿಡ್-19 ಸೋಂಕು ದೃಢ

ಕಾಸರಗೋಡು: ಹೆಚ್ಚು ಪ್ರಕರಣ ದಾಖಲಾಗಿದ್ದ ಕಾರಣದಿಂದ ರೆಡ್‌ ಝೋನ್‌ ಎಂದು ಗುರುತಿಸಿರುವ ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಒಬ್ಬರಿಗೆ ಕೋವಿಡ್-19 ಸೋಂಕು ದೃಢಗೊಂಡಿದ್ದು, 24 ಮಂದಿ ಗುಣಮುಖರಾಗಿದ್ದಾರೆ. ಕೇರಳ ರಾಜ್ಯದಲ್ಲಿ ಎ. 16ರಂದು ಒಟ್ಟು 7 ಮಂದಿಗೆ ಕೋವಿಡ್-19 ಸೋಂಕು ಬಾಧಿಸಿದೆ. ಕಣ್ಣೂರು-4, ಕಲ್ಲಿಕೋಟೆ-2 ಮತ್ತು ಕಾಸರಗೋಡಲ್ಲಿ ಒಬ್ಬರಿಗೆ ರೋಗ ದೃಢಪಟ್ಟಿದೆ. ಈ ಪೈಕಿ ಐವರು ವಿದೇಶದಿಂದ ಬಂದ
ವರು. ಇಬ್ಬರಿಗೆ ಕೊರೊನಾ ಬಾಧಿತರ‌ ಸಂಪರ್ಕದಿಂದ ರೋಗ ಹರಡಿದೆ.

ಕೇರಳದಲ್ಲಿ ಒಟ್ಟು 394 ಮಂದಿಗೆ ರೋಗ ಬಾಧಿಸಿದ್ದು, 245 ಮಂದಿ ಗುಣ ಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ 147 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಕಾಸರಗೋಡಿನ 24 ಸಹಿತ ಒಟ್ಟು 27 ಮಂದಿ ರೋಗ ಮುಕ್ತರಾಗಿದ್ದಾರೆ. ಉಕ್ಕಿನಡ್ಕ ಕಾಸರಗೋಡು ಮೆಡಿಕಲ್‌ ಕಾಲೇಜಿನಲ್ಲಿ ದಾಖಲಾಗಿದ್ದ 5 ಮಂದಿ, ಕಾಸರಗೋಡು ಜನರಲ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ 16 ಮಂದಿ, ಕಾಂಞಂಗಾಡ್‌ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 3 ಮಂದಿಯ ಫಲಿತಾಂಶ ನೆಗೆಟಿವ್‌ ಆಗಿದೆ. ಎರ್ನಾಕುಳಂ, ಮಲಪ್ಪುರಂ ಮತ್ತು ಕಣ್ಣೂರು ಜಿಲ್ಲೆಯಲ್ಲಿ ತಲಾ ಒಬ್ಬರು ಗುಣಮುಖರಾಗಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈ ತನಕ 168 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 107 ಮಂದಿ ಗುಣಮುಖರಾಗಿದ್ದು, 61 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಬ್ಬರಿಗೆ ಸೋಂಕು
ಕಾಸರಗೋಡು ಜಿಲ್ಲೆಯ ಚೆಮ್ನಾಡ್‌ ನಿವಾಸಿ, 20ರ ಹರೆಯದ ಯುವಕನಿಗೆ ಸೋಂಕು ಖಚಿತ ಗೊಂಡಿದೆ. ಮಾ. 19ರಂದು ದುಬಾೖಯಿಂದ ಬಂದಿದ್ದು, ಮನೆಯಲ್ಲಿ ನಿಗಾದಲ್ಲಿದ್ದರು. ಅವರನ್ನು ಚಿಕಿತ್ಸೆಗಾಗಿ ಉಕ್ಕಿನಡ್ಕ ಕಾಸರಗೋಡು ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್‌ ತಿಳಿಸಿದರು. ಕೋಟ್ಟಯಂ ಸರಕಾರಿ ಮೆಡಿಕಲ್‌ ಕಾಲೇಜಿನ ಅರವಳಿಕೆ ವಿಭಾಗ ಮುಖ್ಯಸ್ಥ ಡಾ| ಯು. ಮುರಳೀ ಕೃಷ್ಣನ್‌ ಅವರ ನೇತೃತ್ವದ 25 ಮಂದಿಯ ತಂಡ ಗುರುವಾರ ಉಕ್ಕಿನಡ್ಕದ ಕಾಸರಗೋಡು ಸರಕಾರಿ ಮೆಡಿಕಲ್‌ ಕಾಲೇಜಿಗೆ ಆಗಮಿಸಿದೆ. ಡಾ| ಎಸ್‌.ಎಲ್‌. ಸಂತೋಷ್‌ ಅವರ ನೇತೃತ್ವದ 26 ಮಂದಿಯ ತಂಡ ಸೇವಾವಧಿ ಪೂರೈಸಿದ್ದು, ತಿರುವನಂತಪುರಕ್ಕೆ ಮರಳಲಿದೆ.

73 ಕೇಸು ದಾಖಲು
ಲಾಕ್‌ ಡೌನ್‌ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 73 ಕೇಸುಗಳನ್ನು ದಾಖಲಿಸಲಾಗಿದೆ. 58 ಮಂದಿಯನ್ನು ಬಂಧಿಸಿ, 15 ವಾಹನಗಳನ್ನು ವಶಪಡಿಸಲಾಗಿದೆ. ತಲಪ್ಪಾಡಿಯಲ್ಲಿ ಅಕ್ರಮ ಪ್ರವೇಶ ಮೂಲಕ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿದ ಆರೋಪದಲ್ಲಿ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸರಕಾರಿ ನಿಗಾ ವಿಭಾಗವಿರುವ ಶಾಲೆಯೊಂದರ ಕ್ವಾರೆಂಟೈನ್‌ನಲ್ಲಿ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದರು.

ಕೋವಿಡ್-19 ಮುಕ್ತರಾದ ಸಹೋದರರು
ಕಾಸರಗೋಡು : ಕೋವಿಡ್‌ 19 ಸೋಂಕು ಬಾಧಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಹೋದರರು ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬೋವಿಕ್ಕಾನದ ಆಲೂರು ನಿವಾಸಿಗಳಾದ ಈ ಇಬ್ಬರೂ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸಕ್ಕಿದ್ದರು. ಈ ಪೈಕಿ ಓರ್ವರು ಮಾ. 17ರಂದು ಊರಿಗೆ ಮರಳಿದ್ದರು. ತಪಾಸಣೆಯಲ್ಲಿ ಅವರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಆರಂಭದಲ್ಲಿ ಕಾಸರಗೋಡು ಜನರಲ್‌ ಆಸ್ಪತ್ರೆಗೆ, ಅನಂತರ ಪೆರಿಯ ಪಿ.ಎಚ್‌.ಸಿ.ಯ ನಿಗಾ ವಾರ್ಡಿಗೆ ದಾಖಲಿಸಲಾಗಿತ್ತು. ಮನೆಯ ಸದಸ್ಯರಿಗೂ ಕಾಂಞಂಗಾಡಿನ ಮನೆಯಲ್ಲಿ ನಿಗಾದಲ್ಲಿ ಇರಿಸಲಾಗಿತ್ತು. ಕೆಲವು ದಿನಗಳ ಬಳಿಕ ನಡೆಸಿದ ತಪಾಸಣೆಯಲ್ಲಿ ಮತ್ತೋರ್ವ ಸಹೋದರನಿಗೂ ಸೋಂಕು ತಗುಲಿರುವುದು ಖಚಿತವಾಗಿತ್ತು. ಈಗ ಇಬ್ಬರೂ ಗುಣಮುಖರಾಗಿದ್ದಾರೆ. ಓರ್ವರು ಎ. 13ರಂದು, ಇನ್ನೋರ್ವರು ಎ. 14ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯ ವೈದ್ಯರು, ದಾದಿಯರು ಹಾಗೂ ಸಿಬಂದಿ ಅತ್ಯಂತ ಕಾಳಜಿಯಿಂದ ಶುಶ್ರೂಷೆ ಒದಗಿಸಿದ್ದಾರೆ ಒಂದು ಈ ಸಹೋದರರು ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.