ಕೇರಳ: ಐವರಲ್ಲಿ ಸೋಂಕು ದೃಢ; ಹೊರ ರಾಜ್ಯದಿಂದ ಬಂದವರದ್ದೇ ಭೀತಿ
Team Udayavani, May 13, 2020, 8:30 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ ಕೋವಿಡ್ ಸೋಂಕು ಪ್ರಕರಣ ದಾಖಲಾಗಿಲ್ಲ. ಆದರೆ ಇದೇ ವೇಳೆ ಕೇರಳ ರಾಜ್ಯದಲ್ಲಿ ಮತ್ತೆ ಐವರಲ್ಲಿ ಸೋಂಕು ದೃಢವಾಗಿದೆ. ಮಲಪ್ಪುರಂ ಜಿಲ್ಲೆಯ ಮೂವರಿಗೆ, ಪತ್ತನಂತಿಟ್ಟ ಮತ್ತು ಕೋಟ್ಟಯಂನಲ್ಲಿ ತಲಾ ಒಬ್ಬರಿಗೆ ರೋಗ ಬಾಧಿಸಿದೆ. ಅವರಲ್ಲಿ ನಾಲ್ವರು ವಿದೇಶದಿಂದ, ಒಬ್ಬರು ಚೆನ್ನೈಯಿಂದ ಬಂದವರು.
ರಾಜ್ಯದಲ್ಲಿ ಒಟ್ಟು 32 ಮಂದಿ ಕೋವಿಡ್ ಬಾಧಿತರು ಚಿಕಿತ್ಸೆ ಪಡೆಯುತ್ತಿದ್ದು, ಅವರ ಪೈಕಿ 23 ಮಂದಿಯೂ ಕೇರಳಕ್ಕೆ ಹೊರಗಿನಿಂದ ಬಂದವರು. ಚೆನ್ನೈಯಿಂದ 6, ಮಹಾರಾಷ್ಟ್ರದಿಂದ 4, ನಿಜಾಮು ದ್ದೀನ್‌ನಿಂದ 2 ಮತ್ತು ವಿದೇಶಗಳಿಂದ ಆಗಮಿಸಿದ 11 ಮಂದಿಯನ್ನು ಸೋಂಕು ಬಾಧಿಸಿದೆ. ಸಂಪರ್ಕದಿಂದ 9 ಮಂದಿಗೆ ರೋಗ ಬಾಧಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ನಾಲ್ವರಿಗೆ ಚಿಕಿತ್ಸೆ
ಜಿಲ್ಲೆಯಲ್ಲಿ ಒಟ್ಟು 183 ಮಂದಿಗೆ ಕೋವಿಡ್ ವೈರಸ್ ಸೋಂಕು ಬಾಧಿಸಿದ್ದು, ಈ ಪೈಕಿ 179 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.
7 ಪ್ರಕರಣ ದಾಖಲು
ಲಾಕ್‌ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 7 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 19 ಮಂದಿಯನ್ನು ಬಂಧಿಸಲಾಗಿದೆ. ವಾಹನವೊಂದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.