ವಿದ್ಯಾರ್ಥಿಗಳು ನಿರಂತರ ಗೈರು; ಮುಖ್ಯಶಿಕ್ಷಕರೇ ಎತ್ತಂಗಡಿ!

ಅಡೂರು ಶಾಲೆಯ ಕನ್ನಡ ಮಕ್ಕಳ ಗೋಳಿನ ಕಥೆಗೆ 1 ತಿಂಗಳು

Team Udayavani, Jul 4, 2023, 7:25 AM IST

ಕನ್ನಡ ಮಕ್ಕಳ ಗೋಳಿನ ಕಥೆಗೆ 1 ತಿಂಗಳು: ಇನ್ನೂ ಬಗೆಹರಿಯದ ಸಮಸ್ಯೆ  

ಕಾಸರಗೋಡು: ಕಾಸರಗೋಡು ಜಿಲ್ಲೆಯ ಅಚ್ಚಗನ್ನಡ ಪ್ರದೇಶವಾದ ಅಡೂರಿನ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಕನ್ನಡ ವಿದ್ಯಾರ್ಥಿಗಳ ಹಾಗು ಪೋಷಕರ ಹೋರಾಟಕ್ಕೆ ಇಂದಿಗೆ ಸರಿಯಾಗಿ ಒಂದು ತಿಂಗಳು ತುಂಬಿದೆ.

ಕಳೆದ ಜೂನ್‌ 3 ರಂದು ಅಡೂರು ಶಾಲೆಯ ಕನ್ನಡ ಮಕ್ಕಳಿಗೆ ಸಮಾಜ ವಿಜ್ಞಾನ ಕಲಿಸಲು ಮಲಯಾಳಿ ಭಾಷೆಯ ಶಿಕ್ಷಕಿಯನ್ನು ಕೇರಳ ಸರಕಾರ ನೇಮಿಸಿದಾಗ ಕನ್ನಡಿಗ ವಿದ್ಯಾರ್ಥಿಗಳು ಅವರ ಪಾಠದ ಶೈಲಿಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದರು. ಜೂ.3 ರ ಪ್ರತಿಭಟನೆಯಂದಾಗಿ ನೇಮಕವಾಗದೆ ತೆರಳಿದ್ದ ಶಿಕ್ಷಕಿಯು ಆದೂರು ಪೊಲೀಸರನ್ನು ಕರೆದುಕೊಂಡು ಬಂದು ನೇಮಕಗೊಳ್ಳಲು ಪ್ರಯತ್ನಿಸಿದರು. ಆದರೆ ಮುಖ್ಯ ಶಿಕ್ಷಕರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ನೇಮಕಾತಿ ಸಾಧ್ಯವಾಗಿರಲಿಲ್ಲ. ಅನಂತರ ಜಿಲ್ಲಾಧಿಕಾರಿ ಸಹಿತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಶಿಕ್ಷಕಿಯ ನೇಮಕಾತಿಯಿಂದಾಗುವ ಸಮಸ್ಯೆಗಳ ಬಗ್ಗೆ ಕನ್ನಡ ಪೋಷಕರು ಮನವರಿಕೆ ಮಾಡಿದ್ದರು. ಆದರೆ ಜೂ.16 ರಂದು ಏಕಾಏಕಿಯಾಗಿ ಶಾಲೆಗೆ ಆಗಮಿಸಿ, ನೇಮಕಾತಿ ಪಡೆದು ತರಗತಿಗೆ ಮಲಯಾಳಿ ಭಾಷೆಯ ಶಿಕ್ಷಕಿಯು ತೆರಳಿದಾಗಲೇ ಕನ್ನಡ ಮಕ್ಕಳ ಹಾಗು ಪೋಷಕರ ಅಸಮಾಧಾನ ಕಟ್ಟೆಯೊಡೆದಿತ್ತು. ಆ ನಂತರ ಕನ್ನಡದ ಮಕ್ಕಳು ಮಲಯಾಳಿ ಶಿಕ್ಷಕಿಯ ಪಾಠ ಅರ್ಥವಾಗುತ್ತಿಲ್ಲ ಎಂದು ನಿರಂತರವಾಗಿ ತರಗತಿ ಬಹಿಷ್ಕರಿಸುತ್ತಿದ್ದಾರೆ. ಆದರೂ ಕೂಡಾ ಕೇರಳ ಸರಕಾರ ಮಕ್ಕಳ ಹಿತರಕ್ಷಣೆಯ ಬಗ್ಗೆ ಚಿಂತಿಸುತ್ತಿಲ್ಲ ಎಂದು ಪೋಷಕರು ದೂರಿದ್ದಾರೆ.

ಈ ಮಕ್ಕಳಿಗೆ ಕಳೆದ ಒಂದು ತಿಂಗಳಿನಿಂದ ಸಮಾಜ ವಿಜ್ಞಾನ ತರಗತಿಗಳು ನಡೆಯುತ್ತಿಲ್ಲ, ಮಲಯಾಳಿ ಶಿಕ್ಷಕಿಯ ಪಾಠ ಕೇಳಲು ಮಕ್ಕಳು ಸಿದ್ಧರಾಗುತ್ತಿಲ್ಲ. ಮಕ್ಕಳಿಗೆ ಮಾತೃ ಭಾಷಾ ಶಿಕ್ಷಣವನ್ನು ನೀಡುವ ಜವಾಬ್ದಾರಿಯಿರುವ ಕೇರಳ ಸರಕಾರದ ಈಗಿನ ನಿಲುವಿನ ಬಗ್ಗೆ ಸಾರ್ವತ್ರಿಕವಾಗಿ ಅಸಮಾಧಾನ ಕೇಳಿ ಬಂದಿದೆ.

ಮಕ್ಕಳಿಂದ ತರಗತಿ ಬಹಿಷ್ಕಾರ : ಕಳೆದ ಸುಮಾರು 15 ದಿನಗಳಿಂದ ಮಲಯಾಳಿ ಶಿಕ್ಷಕಿಯು ಕನ್ನಡ ತರಗತಿಗೆ ಪಾಠಕ್ಕೆ ಬಂದಾಗ ಸುಮಾರು 200 ಮಂದಿ ಕನ್ನಡದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಹೊರ ನಡೆಯುತ್ತಾರೆ. ಮಲಯಾಳಿ ಶಿಕ್ಷಕಿಯ ಪಾಠ ಬೇಡವೇ ಬೇಡ. ನಮಗೆ ಕನ್ನಡ ಶಿಕ್ಷಕರನ್ನು ನೀಡಿ ಎಂಬ ಮಕ್ಕಳ ಆರ್ತನಾದಕ್ಕೆ ಕೇರಳ ಸರಕಾರ ಇನ್ನೂ ಸ್ಪಂದಿಸಿಲ್ಲ. ಈಗಾಗಲೇ ಈ ವರ್ಷದ ಶೈಕ್ಷಣಿಕ ಅವಧಿಯ ಒಂದು ತಿಂಗಳು ಮುಗಿದಿರುವುದರಿಂದ ಕನ್ನಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇರಳ ಸರಕಾರ ಚೆಲ್ಲಾಟವಾಡಬಾರದು ಎಂದು ಪೋಷಕರು ಮನವಿ ಮಾಡಿದ್ದಾರೆ.

ಮುಖ್ಯ ಶಿಕ್ಷಕರ ವರ್ಗ : ಮಲಯಾಳ ಭಾಷೆಯ ಶಿಕ್ಷಕಿಯ ನೇಮಕಾತಿಯ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸಿದ ಹಾಗು ಕನ್ನಡ ವಿದ್ಯಾರ್ಥಿಗಳು ಹಾಗು ಪೋಷಕರ ಪ್ರತಿಭಟನೆಯ ಸಂದರ್ಭದಲ್ಲಿ ಮಲಯಾಳ ಶಿಕ್ಷಕಿಗೆ ಪೊಲೀಸ್‌ ಭದ್ರತೆ ನೀಡದ ಕಾರಣದಿಂದ ಅಡೂರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರನ್ನು ವಯನಾಡಿನ ಸರಕಾರಿ ಹೈಸ್ಕೂಲಿಗೆ ವರ್ಗಾವಣೆ ಮಾಡಲಾಗಿದೆ. ಜೂ.30 ರಂದು ಅವರು ವಯನಾಡು ಸರಕಾರಿ ಶಾಲೆಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಮಲಯಾಳಿ ಶಿಕ್ಷಕಿಯನ್ನು ವರ್ಗಾವಣೆ ಮಾಡದೆ, ಮುಖ್ಯ ಶಿಕ್ಷಕರನ್ನೇ ವರ್ಗಾವಣೆ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೈಕೋರ್ಟ್‌ ಮೆಟ್ಟಲೇರಿದ ವಿವಾದ : ಇದೀಗ ಮಲಯಾಳಿ ಶಿಕ್ಷಕಿಯ ನೇಮಕಾತಿಯಿಂದಾಗಿ ಕನ್ನಡಿಗ ಮಕ್ಕಳು ಮಾತೃ ಭಾಷಾ ಶಿಕ್ಷಣದಿಂದ ವಂಚಿರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿಕೊಂಡೆ ಅಡೂರಿನ ಕನ್ನಡಿಗ ಪೋಷಕರು ಕನ್ನಡ ಹೋರಾಟ ಕ್ರಿಯಾ ಸಮಿತಿಯನ್ನು ರಚಿಸಿಕೊಂಡು ಹೈಕೋರ್ಟ್‌ ಮೆಟ್ಟಲೇರಿದ್ದಾರೆ. ಇದೀಗ ಕಾಸರಗೋಡಿನ ಕನ್ನಡ ಪರ ಸಂಘಟನೆಗಳು, ಕರ್ನಾಟಕ ಸರಕಾರ ಹಾಗು ಸಾರ್ವತ್ರಿಕವಾಗಿ ಕನ್ನಡ ಭಾಷಾಭಿಮಾನಿಗಳು ಅಡೂರಿನ ಕನ್ನಡಿಗ ಮಕ್ಕಳಿಗೆ ಶಕ್ತಿಯಾಗಬೇಕಾಗಿದೆ. ಕನ್ನಡ ವಿದ್ಯಾರ್ಥಿಗಳಿಗೆ ಮಲಯಾಳಿ ಶಿಕ್ಷಕಿ ಪಾಠ ಮಾಡುವ ಶಿಫಾರಸ್ಸನೇ ತಿದ್ದುಪಡಿ ಮಾಡಬೇಕಾಗಿದೆ. ವಿವಾದ ಬಗೆಹರಿಯದಲ್ಲಿ ನೇಮಕವಾದ ಮಲಯಾಳಿ ಶಿಕ್ಷಕಿಯಾಗಲೀ, ಕೇರಳ ಸರಕಾರಕ್ಕಾಗಲೀ ಯಾವುದೇ ನಷ್ಟವಿಲ್ಲ. ಸರಕಾರಿ ಶಾಲೆಯಲ್ಲಿ ಕಲಿಯಲೆಂದು ಬಂದ ಕನ್ನಡದ ಮಕ್ಕಳ ಭವಿಷ್ಯ ಮಾತ್ರ ಭಾರೀ ಅಪಾಯಕ್ಕೆ ಸಿಲುಕಬಹುದು ಎಂದು ಪೋಷಕರು ಹೇಳುತ್ತಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.