School ಅಡೂರು ಶಾಲೆಯಲ್ಲಿ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ಕೇರಳ ಹೈಕೋರ್ಟ್ ಆದೇಶ
Team Udayavani, Aug 26, 2023, 1:05 AM IST
ಕಾಸರಗೋಡು: ಅಡೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ವಿಭಾಗಕ್ಕೆ ಮಲಯಾಳ ಶಿಕ್ಷಕಿ ನೇಮಕದ ವಿರುದ್ಧ ವಿದ್ಯಾರ್ಥಿಗಳು ಮತ್ತು ಪೋಷಕರು ನಡೆಸಿದ ಹೋರಾಟದ ಫಲವಾಗಿ ಕನ್ನಡ ಬಲ್ಲ ಶಿಕ್ಷಕಿಯನ್ನು ನೇಮಿಸಲು ಕೇರಳ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಹೋರಾಟಕ್ಕೆ ಮಹತ್ವದ ಜಯ ಲಭಿಸಿದೆ.
ಮಲಯಾಳಿ ಭಾಷೆಯ ಶಿಕ್ಷಕಿಗೆ ಕನ್ನಡದಲ್ಲಿ ವ್ಯವಹರಿಸಲು ತಿಳಿಯದು ಎಂಬುದನ್ನು ಮನಗಂಡಿರುವ ನ್ಯಾಯಾಲಯ, ಕೂಡಲೇ ಆ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾಯಿಸಿ ತತ್‌ಕ್ಷಣವೇ ಅವರ ಸ್ಥಾನಕ್ಕೆ ಕನ್ನಡ ಬಲ್ಲ ಶಿಕ್ಷಕರನ್ನು ನೇಮಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ನಿರಂತರವಾಗಿ ಕೇರಳ ಸರಕಾರ, ಶಿಕ್ಷಣ ಇಲಾಖೆ ಹಾಗೂ ಕೇರಳ ಲೋಕಸೇವಾ ಆಯೋಗ ಕನ್ನಡ ವಿರೋಧಿ ನೀತಿಯನ್ನು ಅನುಸರಿಸಿಕೊಂಡು ಬರುತ್ತಿದ್ದು, ಈ ತೀರ್ಪು ಚಾಟಿ ಬೀಸಿದಂತಾಗಿದೆ.
ಅಡೂರು ಶಾಲೆಗೆ ಮಲಯಾಳ ಶಿಕ್ಷಕಿಯನ್ನು ನೇಮಿಸಿದ ಪರಿಣಾಮವಾಗಿ ಸುಮಾರು ಎರಡು ತಿಂಗಳಿನಿಂದ ಕನ್ನಡ ವಿಭಾಗದ ವಿದ್ಯಾರ್ಥಿಗಳಿಗೆ ಸಮಾಜ ವಿಜ್ಞಾನ ಪಾಠವೇ ಇಲ್ಲ ಎಂಬಂತಾಗಿತ್ತು. ಈ ನೇಮಕವನ್ನು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟಿಸಿದ್ದರಲ್ಲದೇ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೇರಳ ಹೈಕೋರ್ಟ್ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಈ ಸ್ಥಾನಕ್ಕೆ ಕನ್ನಡ ಬಲ್ಲ ಶಿಕ್ಷಕರನ್ನು ನೇಮಿಸಬೇಕೆಂದು ಆದೇಶದಲ್ಲಿ ತಿಳಿಸಿದೆ. ಈ ತೀರ್ಪನ್ನು ಮಲಯಾಳ ಭಾಷಿಕ ಶಿಕ್ಷಕರು ನೇಮಕಗೊಂಡಿರುವ ಎಲ್ಲ ಕನ್ನಡ ಮಾಧ್ಯಮ ಶಾಲೆಗಳಿಗೆ ಅನ್ವಯಿಸುವಂತೆ ವಾದ ಮಂಡಿಸಿದೆ. ಈ ಬಗ್ಗೆ ತೀರ್ಪು ಬರಬೇಕಷ್ಟೆ ಎಂದು ಕೋರ್ಟ್ ಮೆಟ್ಟಿಲೇರಿದ್ದ ಅಡೂರು ಶಾಲಾ ಪೋಷಕರು ತಿಳಿಸಿದ್ದಾರೆ.
ಆದೇಶಕ್ಕೆ ಸಚಿವ ತಂಗಡಗಿ ಸಂತಸ
ಬೆಂಗಳೂರು : ಕಾಸರಗೋಡಿನ ಅಡೂರು ಕನ್ನಡ ಶಾಲೆಗೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನೇ ನೇಮಿಸುವಂತೆ ಕೇರಳ ಹೈಕೋರ್ಟ್ ಅಲ್ಲಿನ ಸರಕಾರಕ್ಕೆ ಆದೇಶ ನೀಡಿರುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲಿನ ಜನಸಾಮಾನ್ಯರ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.