ಮಲಯಾಳ ಭಾಷಾ ಮಸೂದೆ ಭಾಷಾ ಅಲ್ಪಸಂಖ್ಯಾಕ‌ರಿಗೆ ಆತಂಕ ಬೇಡ : ಸಚಿವ


Team Udayavani, Apr 17, 2017, 4:03 PM IST

17-KASRGOD-2.jpg

ಕಾಸರಗೋಡು: ಕೇರಳ ರಾಜ್ಯ ಸರಕಾರ ಆಧ್ಯಾದೇಶ ಹೊರಡಿಸಿದ ಮಲಯಾಳ ಭಾಷಾ ಮಸೂದೆಯಿಂದ ಭಾಷಾ ಅಲ್ಪಸಂಖ್ಯಾಕರು ಆತಂಕ ಪಡಬೇಕಾಗಿಲ್ಲ ಎಂದು ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್‌ ಭರವಸೆ ನೀಡಿದ್ದಾರೆ.
ಸಚಿವರನ್ನು ಭೇಟಿಯಾದ ಕನ್ನಡ ಪರ ಸಂಘಟನೆಗಳ ಪ್ರತಿನಿಧಿಗಳಿಗೆ ಭರವಸೆ ನೀಡಿರುವ ಸಚಿವರು ಭಾಷಾ ಅಲ್ಪಸಂಖ್ಯಾಕರಿಗೆ ಸಂವಿಧಾನಬದ್ಧವಾಗಿ ನೀಡಲಾದ ಎಲ್ಲಾ ಸವಲತ್ತುಗಳನ್ನು ನೀಡಲಾಗುವುದೆಂದು ಹೇಳಿದರು.

ಸರಕಾರದ ಮಲಯಾಳ ಭಾಷಾ ಮಸೂದೆಗೆ ಭಾಷಾ ಅಲ್ಪಸಂಖ್ಯಾಕರಾದ ಕನ್ನಡಿಗರು ಮತ್ತು ತಮಿಳರು ಯಾವುದೇ ಭಯ ಪಡಬೇಕಾಗಿಲ್ಲ. ಅಲ್ಲದೆ ಚಿಂತಿಸಬೇಕಾಗಿಲ್ಲ ಎಂದಿದ್ದಾರೆ. ಭಾಷಾ ಅಲ್ಪಸಂಖ್ಯಾಕರು ಈ ಹಿಂದಿನಂತೆಯೇ ಎಲ್ಲ ಸವಲತ್ತುಗಳನ್ನು ಪಡೆಯಲಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳ ಕಡ್ಡಾಯ ಗೊಳಿಸುವುದಿಲ್ಲ. ಇಂತಹ ಶಾಲೆಗಳಲ್ಲಿ ಮಲಯಾಳ ಕಲಿಕೆಯ ಬಗ್ಗೆ ಸ್ಥಳೀಯ ರಿಂದ ಒತ್ತಡ ಬಂದಲ್ಲಿ ಹಾಗೂ ಸಾಕಷ್ಟು ವಿದ್ಯಾರ್ಥಿಗಳಿದ್ದಲ್ಲಿ ಮಾತ್ರವೇ ಮಲಯಾಳ ತರಗತಿಯನ್ನು ತೆರೆಯ ಬೇಕಾಗುತ್ತದೆ ಎಂದರು. ಕನ್ನಡಿಗರಿಗೆ ಮಲಯಾಳ ಕಡ್ಡಾಯ ಗೊಳಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. 

ರಾಜ್ಯದ ಪತ್ರಿಕೆಗಳಲ್ಲಿ ಬಂದಿರುವ ವಾರ್ತೆಗಳ ಬಗ್ಗೆ ಗಮನ ಸೆಳೆದಾಗ ವಾರ್ತಾ ಪತ್ರಿಕೆಗಳಲ್ಲಿ ಬಂದಿರುವ ವರದಿಗಳ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದರು. ಗಡಿಪ್ರದೇಶಗಳಲ್ಲಿರುವ ಭಾಷಾ ಅಲ್ಪಸಂಖ್ಯಾಕರಿಗೆ ಸಂವಿಧಾನಬದ್ಧವಾಗಿ ನೀಡಿರುವ ಎಲ್ಲ    ಹಕ್ಕು, ಸವಲತ್ತು ಗಳು ಈ ಹಿಂದಿನಂತೆಯೇ ಮುಂದು ವರಿಯಲಿದೆ ಎಂದ ಅವರು   ಸರಕಾರ ಯಾರ ಮೇಲೂ ಒತ್ತಡ ಹೇರುವುದಿಲ್ಲ ಎಂದರು. 

ಭಾಷಾ ಅಲ್ಪಸಂಖ್ಯಾಕರ ಎಲ್ಲ ಸಮಸ್ಯೆಗಳು ತನಗೆ ಅರ್ಥವಾಗುತ್ತಿದೆ ಎಂದೂ, ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸುವುದಾಗಿಯೂ ಅವರು ಭರವಸೆ ನೀಡಿದರು.

ಕನ್ನಡ ಶಾಲೆಗಳಲ್ಲಿ ಮಲಯಾಳ ಹೇರುವ ಧೋರಣೆ  ಸರಕಾರಕ್ಕಿಲ್ಲ. ಭಾಷಾ ಅಲ್ಪಸಂಖ್ಯಾತರ ಹಕ್ಕು ಸಂರಕ್ಷಣೆ ಬಗ್ಗೆ  ಸಚಿವ ಸಂಪುಟ ಸಭೆಯಲ್ಲಿ ಖುದ್ದಾಗಿ ಚರ್ಚಿಸಲಾಗಿದೆ. ರಾಜ್ಯದಲ್ಲಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ  ಮಾತೃಭಾಷೆಯನ್ನು ನಿರಂತರ ಅವಗಣಿಸುತ್ತಿದ್ದು, ಆ ಶಾಲೆಗಳಿಗೆ ಕಡಿವಾಣ ಹಾಕುವ ಸಲುವಾಗಿಯೂ,  ಶಾಲೆಗಳಲ್ಲಿ    ಮಲಯಾಳ  ಮಾತನಾಡಿದರೆ ಶಿಕ್ಷೆ ಯನ್ನು ನೀಡುವಂತಹ ಕ್ರಮ ಕೆಲವು ಶಾಲೆಗಳಲ್ಲಿ ನಡೆಯುತ್ತದೆ. ಇದಕ್ಕೆಲ್ಲ ಪರಿಹಾರವೆಂಬಂತೆ 10ನೇ ತರಗತಿ ತನಕ ಮಲಯಾಳ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಅಧ್ಯಾದೇಶ  ಹೊರಡಿಸಲಾಗಿದೆ. ಭಾಷಾ ಅಲ್ಪಸಂಖ್ಯಾಕರಿಗೆ ದ್ರೋಹ ಮಾಡುವ ಯಾವುದೇ ಕ್ರಮವಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಕನ್ನಡ ಶಾಲೆಗಳಲ್ಲಿ ಮಲಯಾಳ ಕಡ್ಡಾಯವಲ್ಲ  
ಕನ್ನಡ ಶಾಲೆಗಳಲ್ಲಿ ಮಲಯಾಳ ಭಾಷೆ ಕಡ್ಡಾಯವಾಗಿ ಕಲಿಸಬೇಕೆಂಬ ನಿಯಮವೇನು ಇಲ್ಲ. ಪ್ರಸ್ತುತ ಯಾವ ರೀತಿಯಲ್ಲಿ ಸಂಪೂರ್ಣ ವಾಗಿ ಕನ್ನಡ ಮಾಧ್ಯಮವಿರುವ ಹಾಗೂ ಕನ್ನಡ ಮತ್ತು ಮಲಯಾಳ ಮಾಧ್ಯಮ ಶಾಲೆಗಳಿವೆಯೋ ಅದು ಹಾಗೆಯೇ ಮುಂದುವರಿಯುತ್ತದೆ.  ಬದಲಾಗಿ ಕನ್ನಡ ಶಾಲೆಗಳಿರುವ ಆ ಪ್ರದೇಶದಲ್ಲಿ ಮಲಯಾಳ ಕಲಿಯುವ ವಿದ್ಯಾರ್ಥಿಗಳಿದ್ದರೆ ಒಂದನೇ ತರಗತಿಯಿಂದ ಮಲಯಾಳ ತರಗತಿ ಯನ್ನು ಆರಂಭಿಸಲಾಗುವುದು. ಅಲ್ಲದೇ ಕಡ್ಡಾಯವಾಗಿ ಕನ್ನಡ ಶಾಲೆಗಳಲ್ಲಿ ಮಲಯಾಳ ತರಗತಿ ಆರಂಭಿಸಬೇಕೆಂಬುದಿಲ್ಲ  ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿಗೆ ಸೂಚನೆ : ಮಲಯಾಳ ಕಡ್ಡಾಯ ಅಧ್ಯಾದೇಶದಿಂದಾಗಿ ಜಿಲ್ಲೆಯ ಭಾಷಾ ಅಲ್ಪಸಂಖ್ಯಾತರಲ್ಲಿ ತಲೆದೋರಿದ ಆತಂಕಗಳ ನಿವಾರಣೆಗೆ ಜಿಲ್ಲಾಧಿಕಾರಿ ಖುದ್ಧಾಗಿ ಸಮಾಲೋಚಿಸಿ ಕ್ರಮ ಕೈಗೊಳ್ಳಬೇಕೆಂದು ಸಚಿವ ಇ.ಚಂದ್ರಶೇಖರನ್‌ ಜಿಲ್ಲಾಧಿಕಾರಿ ಜೀವನ್‌ಬಾಬು ಕೆ. ಅವರಿಗೆ ನಿರ್ದೇಶ ನೀಡಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಜಿಲ್ಲಾಮಟ್ಟದ ಸಭೆ ಸಹಿತ ಎಲ್ಲಾ ಕಾರ್ಯಗಳಲ್ಲಿ ಜಿಲ್ಲಾಧಿಕಾರಿ ಮೇಲ್ನೋಟದಲ್ಲಿಯೇ  ಸಭೆ ನಡೆಯಬೇಕು ಎಂದು ನಿರ್ದೇಶ ನೀಡಿದ್ದಾರೆ. ಇತ್ತೀಚೆಗೆ ನಡೆದ ಭಾಷಾ ಅಲ್ಪಸಂಖ್ಯಾತರ ಜಿಲ್ಲಾಮಟ್ಟದ ಸಭೆ ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ನಡೆದ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು.

ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಕನ್ನಡ ಸಮನ್ವಯ ಸಮಿತಿ ಅಧ್ಯಕ್ಷ ಪುರುಷೋತ್ತಮ ಮಾಸ್ತರ್‌, ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್‌.ವಿ. ಭಟ್‌, ಕೇರಳ ರಾಜ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘಟನೆಯ ಅಧಿಕೃತ ವಕ್ತಾರ ವಿಶಾಲಾಕ್ಷ ಪುತ್ರಕಳ, ಕನ್ನಡ ಸಮನ್ವಯ ಸಮಿತಿ ಕಾಸರಗೋಡು ನಗರ ಘಟಕದ ಅಧ್ಯಕ್ಷ  ಜೋಗೇಂದ್ರನಾಥ್‌ ವಿದ್ಯಾನಗರ, ಪಾರ್ತಿಸುಬ್ಬ ಯಕ್ಷಗಾನ ಕಲಾಕ್ಷೇತ್ರ ಅಧ್ಯಕ್ಷ ಜಯರಾಮ ಮಂಜತ್ತಾಯ, ಗಂಗಾಧರ ಮೊದಲಾದವರಿದ್ದರು.

ಮಲಯಾಳ ಮಸೂದೆಯಲ್ಲಿ ತಿದ್ದುಪಡಿ ಮಾಯ: ಕ್ರಮದ ಭರವಸೆ
ಕೇರಳ ಸರಕಾರ 2015ರಲ್ಲಿ ವಿಧಾನಸಭೆಯಲ್ಲಿ ಮಂಡಿಸಿದ ಮಲಯಾಳ ಭಾಷಾ ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾಕರ ಹಕ್ಕು ಸಂರಕ್ಷಣೆಯ ಬಗ್ಗೆ ಉಲ್ಲೇಖೀಸಲಾದ ಎರಡು ತಿದ್ದುಪಡಿಗಳು ರಾಷ್ಟ್ರಪತಿಯವರ ಅಂಕಿತಕ್ಕೆ ಕಳುಹಿಸಿಕೊಡುವ ಸಂದರ್ಭದಲ್ಲಿ ಬಿಟ್ಟುಹೋದ ಗಂಭೀರ ವಿಚಾರದ ಬಗ್ಗೆ  ಸಚಿವರ ಗಮನಕ್ಕೆ ತರಲಾಯಿತು. ಇದರ ಬಗ್ಗೆ  ಪರಿಶೀಲಿಸಲಾಗುವುದು ಎಂದು ಸಚಿವ ಇ. ಚಂದ್ರಶೇಖರನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.