‘ಹಿರಿಯರಿಗೆ ಸಾಂಸ್ಕೃತಿಕ ವೇದಿಕೆ ರಚನೆಯಾಗಲಿ
ಕೊಂಕಣಿ ಸಾಂಸ್ಕೃತಿಕ ಸಂಘ ದಿಂದ 'ಸದಸ್ಯರ ದಿನಾಚರಣೆ'
Team Udayavani, Jul 1, 2019, 5:43 AM IST
ಕಾಸರಗೋಡು: ಹಿರಿಯರನ್ನು ಗೌರವಿಸುವುದು ಜೊತೆಗೆ ಅವರಲ್ಲಿ ಸುಪ್ತವಾಗಿರುವ ಪ್ರತಿಭೆಗೆ ವೇದಿಕೆ ನಿರ್ಮಿಸಿ ಅವರನ್ನು ಸಾಂಸ್ಕೃತಿಕವಾಗಿ ಸಕ್ರಿಯಗೊಳಿಸುವ ಅನಿವಾರ್ಯತೆಯಿದೆ. ಎಷ್ಟೋ ಮಂದಿ ಹಿರಿಯರು ಆರ್ಥಿಕವಾಗಿ ಸದೃಢವಾಗಿದ್ದರೂ ಮಾಡಲು ಕೆಲಸವಿಲ್ಲದೆ ಒಂಟಿಯಾಗಿ ಕಾಲಹರಣ ಮಾಡುವುದನ್ನು ಕಂಡಾಗ ವೇದನೆಯಾಗುತ್ತದೆ. ಇಂತಹ ಪ್ರತಿಭಾನ್ವಿತ ಹಿರಿಯರನ್ನು ಒಗ್ಗೂಡಿಸುವ ಮುಖಾಂತರ ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಕೆಲಸ ಮಾಡಬೇಕಾದದ್ದು ಸಾಂಸ್ಕೃತಿಕ ಸಂಘಟನೆಗಳ ಕರ್ತವ್ಯವೆಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಚಲನಚಿತ್ರ ನಟ, ನಿರ್ದೇಶಕ ಕಾಸರಗೋಡು ಚಿನ್ನಾ ಅಭಿಪ್ರಾಯಪಟ್ಟರು.
ಅವರು ಮಂಗಳೂರಿನ ಕೊಂಕಣಿ ಸಾಂಸ್ಕೃತಿಕ ಸಂಘ ಮಂಗಳೂರಿನ ಬಿ.ಇ.ಎಂ. ಹೈಸ್ಕೂಲ್ ಸಭಾಂಗಣದಲ್ಲಿ ‘ಸದಸ್ಯರ ದಿನಾಚರಣೆ’ ಅಂಗವಾಗಿ ಏರ್ಪಡಿಸಿದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಭಾ ಕಾರ್ಯಕ್ರಮದ ಮೊದಲು ಸದಸ್ಯರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಂಘದ ಸದಸ್ಯರಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಕಾಸರಗೋಡು ಚಿನ್ನಾ ಹಾಗೂ ಸಂಘದ ಅಧ್ಯಕ್ಷ ವಿಠuಲ್ ಕುಡ್ವ ಬಹುಮಾನವನ್ನು ವಿತರಿಸಿದರು. ಕೊಂಕಣಿ ಸಾಂಸ್ಕೃತಿಕ ಸಂಘದ ಅಧ್ಯಕ್ಷರು, ಖ್ಯಾತ ಲೆಕ್ಕ ಪರಿಶೋಧಕರು ಆದ ವಿಠuಲ್ ಕುಡ್ವ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಶೆಣೈ ಅವರು ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ರತ್ನಾಕರ ಕುಡ್ವ ಕಾರ್ಯಕ್ರಮ ನಿರ್ವಹಿಸಿದರು. ಸಂಚಾಲಕಿ ಮಮತಾ ಕಾಮತ್ ವಂದಿಸಿರು. ಶ್ವೇತಾ ಕಾಮತ್ ಪ್ರಾರ್ಥನೆ ಹಾಡಿದರು. ಕಾಸರಗೋಡು ಚಿನ್ನಾ ಅವರನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.