‘ಜೀವನ-ದೇವರ ಸಂಬಂಧ ಭಕ್ತಿಭಾವದಲ್ಲಿ ಅಡಗಿದೆ’
Team Udayavani, May 20, 2019, 6:00 AM IST
ಕುಂಬಳೆ: ಜೀವನ ಮತ್ತು ದೇವರ ಸಂಬಂಧ ಭಕ್ತಿಭಾವದಲ್ಲಿ ಅಡಗಿದೆ, ಭಾವ ಶುದ್ಧಿಯ ಮೂಲಕ ಆತ್ಮ ಸಾಕ್ಷಾತ್ಕಾರ ಸಾಧ್ಯವಿದ್ದು, ಭಜನೆಯ ಮೂಲಕವೇ ಭಾವ ಶುದ್ಧಿಯ ಕಾರ್ಯ ನಡೆಯಬೇಕಿದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಸಜಂಕಿಲ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಉದ್ಘಾಟನಾ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವದ ಅಂಗವಾಗಿ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ತೆಂಗಿನ ಹಿಂಗಾರವನ್ನು ಅರಳಿಸಿ ಧಾರ್ಮಿಕ ಸಭೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಸಮಾಜದ ಪರಿವರ್ತನೆಗೆ ಕಾರಣೀಭೂತರಾಗುವವರು ಒಂದು ಯುವ ಸಮುದಾಯ ಮತ್ತು ಮಹಿಳಾ ಸಮುದಾಯ, ಮಹಿಳೆಯರು ಮನೆ-ಮನವನ್ನು ಬೆಳಗಿದರೆ, ಯುವ ಸಮುದಾಯವು ತನ್ನ ಅಂತಶಕ್ತಿಯ ಮೂಲಕ ಸಮಾಜವನ್ನು ಬೆಳಗುವಲ್ಲಿ ಪ್ರೇರಕ ಶಕ್ತಿಯಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ನವೀಕರಣ ಸಮಿತಿ ಅಧ್ಯಕ್ಷ ರಮೇಶ ಎಂ. ಬಾಯಾರು ವಹಿಸಿ ಮಾತನಾಡಿ ಭಜನಾ ಮಂದಿರಗಳು ಭಕ್ತಿಯ ಪ್ರತೀಕವಾಗಿದ್ದು, ಭಕ್ತಿ ಮಾರ್ಗವು ಸಮಾಜವನ್ನು ಧರ್ಮ ಮಾರ್ಗದಲ್ಲಿ ಮುನ್ನಡೆಯುವಂತೆ ಮಾಡುವಲ್ಲಿ ಸಫಲವಾಗಿದೆ ಎಂದರು.
ಪ್ರಮುಖರಾದ ಗಣೇಶ್ ಎನ್. ಭಟ್, ಆಟಿಕುಕ್ಕೆ ಸುಬ್ರಹ್ಮಣ್ಯ ಭಟ್, ಗಣಪತಿ ಭಟ್ ಆವಳಮಠ,ಯಂ.ವಿಶ್ವನಾಥ ಭಟ್ ಮೇಲಿನ ಪಂಜ ಶುಭಾಶಂಸನೆಗೈದರು. ಸಮಾರಂಭದಲ್ಲಿ ಮಂದಿರ ನಿರ್ಮಾಣ ಕಾರ್ಯದಲ್ಲಿ ಸಹಕರಿಸಿದ ಕುಶಲಕರ್ಮಿಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಹಲವು ವರ್ಷಗಳಿಂದ ಭಜನಾ ಮಂಡಳಿಯ ಅಧ್ಯಕ್ಷರಾಗಿರುವ ಕೆ.ವಾಸುದೇವ ಭಟ್ರವರನ್ನು ಸನ್ಮಾನಿಸಲಾಯಿತು.
ಎಸೆಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಎ ಪ್ಲಸ್ ಸಾಧನೆಗೈದ ಜಯಶ್ರೀ ಡಿ. ಅವರನ್ನು ಸ್ವಾಮೀಜಿಯವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಹರಸಿದರು. ಸದಾನಂದ.ಎಂ ಸ್ವಾಗತಿಸಿದರು.ಶ್ರೀಕಾಂತ್ ಮಾಸ್ತರ್ ವಾಟೆತ್ತಿಲ ವಂದಿಸಿದರು. ಶ್ರೀರಾಮ ಮಾಸ್ತರ್ ಆವಳ ಕೆದುಕೋಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.