ತೀರ್ಥ ಅಮಾವಾಸ್ಯೆ: ಪೊಸಡಿಗುಂಪೆಯಲ್ಲಿ ವಿಭೂತಿ ಸಂಗ್ರಹಿಸಿದ ಭಕ್ತರು
Team Udayavani, Aug 22, 2017, 9:00 AM IST
ಉಪ್ಪಳ: ತೀರ್ಥ ಅಮಾವಾಸ್ಯೆ ದಿನವಾದ ಸೋಮವಾರ ಬಾಯಾರು ಪದವು ಸಮೀಪದ ಪುರಾಣ ಪ್ರಸಿದ್ಧ ಪೊಸಡಿ ಗುಂಪೆ ಪವಿತ್ರ ಗುಹಾ ಪ್ರವೇಶ ನಡೆಯಿತು. ಮುಂಜಾನೆ ಆರಂಭವಾದ ಗುಹಾ ಪ್ರವೇಶದಲ್ಲಿ ಧಾರ್ಮಿಕ ಶ್ರದ್ಧಾಳುಗಳು ಭಾಗವಹಿಸಿದ್ದರು. ಕಾನ ಶ್ರೀಕೃಷ್ಣ ಭಟ್ ಹಾಗೂ ರವೀಶ್ ಭಟ್ ನೇತೃತ್ವದಲ್ಲಿ ತೀರ್ಥ ಸ್ನಾನ ಹಾಗೂ ಪವಿತ್ರ ಗುಹೆ ಪ್ರವೇಶಿಸಿದ ಭಕ್ತರು ವಿಭೂತಿ ಸಂಗ್ರಹಿಸಿದರು. ಈ ಬಾರಿಯ ಪೊಸಡಿ ಗುಂಪೆ ವಿಭೂತಿ ಸಂಗ್ರಹಕ್ಕೆ 150ಕ್ಕೂ ಹೆಚ್ಚಿನ ಭಕ್ತರು ಭಾಗವಹಿಸಿದ್ದರು. ಪೆರ್ಲ ಸಹಿತ ದೂರದ ಬಂಟ್ವಾಳ ಹಾಗೂ ಪುತ್ತೂರಿನಿಂದ ಬಂದ ಆಸ್ತಿಕರು ಮೊದಲ ಬಾರಿಗೆ ಗುಹಾ ಪ್ರವೇಶ ನಡೆಸಿದರು.
ಮೂರು ತಂಡವಾಗಿ ಗುಹಾ ಪಯಣ ಆರಂಭಿಸಿದ ಭಕ್ತರು ತೀರ್ಥ ಗುಂಪೆಯಲ್ಲಿ ಶುಚಿಯಾಗಿ ಗೋವಿಂದನ ನಾಮಸ್ಮರಣೆಯೊಂದಿಗೆ ಕಣಿವೆ ಮಾರ್ಗವಾಗಿ ಸಂಚರಿಸಿ ಸುಮಾರು 200 ಮೀ. ದೂರವಿರುವ ವಿಭೂತಿ ಗುಹೆಗೆ ಸಮೀಪಿಸಿ ಕತ್ತಲ ಗುಹೆಯನ್ನು ಪ್ರವೇಶಿಸಿದರು. ತೀರ ಬೆಳಕಿನ ಅಭಾವವಿರುವ ಗುಹೆ ಪ್ರವೇಶಿಸಲು ದೀಪ ನಿಷಿದ್ಧವಿರುವ ಕಾರಣ ಒಬ್ಬರ ಹಿಂದೆ ಒಬ್ಬರಂತೆ ಕೈ ಹಿಡಿದು ಗುಹಾ ಸುರಂಗದಲ್ಲಿ ಸಂಚರಿಸಿ ವಿಭೂತಿ ಸಂಗಹಿಸುವ ಮೂಲಕ ಪುನೀತರಾದರು.
ವಿಭೂತಿ ಧಾರಣೆಯಂತಹ ನಿತ್ಯ ಅನುಷ್ಠಾನ ಕ್ರಮಗಳು ಜನಸಾಮಾನ್ಯರಲ್ಲಿ ಕಡಿಮೆಯಾಗುತ್ತಿದ್ದರೂ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿಭೂತಿಗೆ ಮಹತ್ವವಿದೆ. ವರ್ಷದಿಂದ ವರ್ಷಕ್ಕೆ ಗುಂಪೆಯ ಪವಿತ್ರ ಗುಹೆಗೆ ಪ್ರವೇಶಿಸಿ ವಿಭೂತಿ ಸಂಗ್ರಹ ನಡೆಸುವವರ ಸಂಖ್ಯೆ ಇಮ್ಮಡಿಯಾಗುತ್ತಿದೆ. ಪೊಸಡಿ ಗುಂಪೆಯ ಗುಹಾ ಪ್ರವೇಶ ಅಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ ಎನ್ನುತ್ತಾರೆ ವಿಷ್ಣು ಪ್ರಸಾದ್ ಆವಳ ಮಠ ಅವರು.
ವಿಭೂತಿ ಸಂಗ್ರಹದ ಮಹತ್ವ
ಪುರಾತನ ಕಾಲದಿಂದ ನಡೆದು ಬರುತ್ತಿರುವ ಪರಂಪರೆಯಂತೆ ತೀರ್ಥ ಅಮಾವಾಸ್ಯೆಯ ಪುಣ್ಯ ದಿನದಂದು ಪೊಸಡಿ ಗುಂಪೆಯ ಪವಿತ್ರ ಗುಹೆಗೆ ಪ್ರವೇಶಿಸಿ ವಿಭೂತಿ ಸಂಗ್ರಹಿಸುವುದು ವಾಡಿಕೆಯಾಗಿದೆ. ಶಾಕ್ತ ಹಾಗೂ ಶೈವ ಸಂಪ್ರದಾಯದಂತೆ ವಿಭೂತಿಧಾರಣೆ ಮಾಡುವ ಪ್ರತಿಯೊಬ್ಬ ವ್ಯಕ್ತಿಗೂ ಪೊಸಡಿ ಗುಂಪೆ ಗುಹಾ ಪ್ರವೇಶ ವಿಶೇಷವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.