ಮಡಿಕೇರಿ: ಪ್ರಯೋಗಾಲಯಕ್ಕೆ ಚಾಲನೆ
Team Udayavani, May 23, 2020, 10:41 AM IST
ಮಡಿಕೇರಿ: ಜಿಲ್ಲಾ ಕೇಂದ್ರ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ 1.06 ಕೋಟಿ ರೂ. ವೆಚ್ಚದಲ್ಲಿ ಸಜ್ಜುಗೊಂಡಿರುವ ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಚಾಲನೆ ನೀಡಿದರು. ಕ್ಷಿಪ್ರಗತಿಯಲ್ಲಿ ಆರೋಗ್ಯ ತಪಾಸಣೆ ನಡೆಸುವ ಅಗತ್ಯವಿರುವ ಹಿನ್ನೆಲೆಯಲ್ಲಿ, ವಿಪತ್ತು ಪರಿಹಾರ ನಿಧಿಯಡಿ ಪ್ರಯೋಗಾಲಯವನ್ನು ಕೋವಿಡ್ ಆಸ್ಪತೆಯಲ್ಲಿ ಸ್ಥಾಪಿಸಲಾಗಿದೆ.
ನೂತನ ಪ್ರಯೋಗಾಲಯದಲ್ಲಿ ಒಂದು ಬಾರಿಗೆ 100 ಮಂದಿಯ ಮೂಗು-ಗಂಟಲಿನ ದ್ರವ ಮಾದರಿಗಳನ್ನು ಪರೀಕ್ಷಿಸಬಹುದಾ ಗಿದೆ. ಈ ಹಿಂದೆ ಶಂಕಿತ ರೋಗಿಯ ಗಂಟಲ ದ್ರವ ಮಾದರಿಗಳನ್ನು ಮೈಸೂರು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟು, ಪರೀಕ್ಷಾ ವರದಿಗೆ ಕಾಯಬೇಕಾಗುತ್ತಿತ್ತು. ಇದೀಗ ಇಲ್ಲಿಯೇ ಪ್ರಯೋಗಾಲಯ ಸಜ್ಜುಗೊಂಡಿದ್ದು, ಪರೀಕ್ಷಾ ವರದಿ ಕ್ಷಿಪ್ರಗತಿಯಲ್ಲಿ ದೊರಕುವುದರಿಂದ ಅಗತ್ಯ ಕ್ರಮಗಳನ್ನು ವಿಳಂಬವಿಲ್ಲದೆ ಕೈಗೊಳ್ಳಲು ಸಾಧ್ಯವಾಗಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.