Madikeri ಮಾದಕ ಪದಾರ್ಥ ಸಾಗಾಟ ಪ್ರಕರಣ; ಮೂವರಿಗೆ 10 ವರ್ಷ ಕಠಿನ ಜೈಲು ಶಿಕ್ಷೆ
Team Udayavani, Feb 4, 2024, 10:53 PM IST
ಮಡಿಕೇರಿ: ನಿಷೇಧಿತ ಮಾದಕ ಪದಾರ್ಥ ಹ್ಯಾಶಿಷ್ ಆಯಿಲ್ (ಗಾಂಜಾದಿಂದ ತೆಗೆಯುವ ಎಣ್ಣೆ) ಸಾಗಾಟ ಮಾಡುತ್ತಿದ್ದ ಮೂವರಿಗೆ ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿನ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಅಹಮದ್ ಕಬೀರ್ (37), ಅಬ್ದುಲ್ ಖಾದರ್ (37) ಹಾಗೂ ಮೊಹಮ್ಮದ್ ಮುಜಮಿಲ್ (37) ಶಿಕ್ಷೆಗೆ ಒಳಗಾದವರು.
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರ ಅಕ್ಟೋಬರ್ 29ರಂದು ಭಾಗಮಂಡಲ-ಮಡಿಕೇರಿ ಜಂಕ್ಷನ್‌ನಲ್ಲಿರುವ ಐಬಿ ರಸ್ತೆಯಲ್ಲಿ ಈ ಮೂವರು ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದರು.
ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕಾ, ಎಎಸ್‌ಐ ಬೆಳ್ಳಿಯಪ್ಪ ಎಂ.ಸಿ., ಮಹದೇವ ಸ್ವಾಮಿ ಹಾಗೂ ಸಿಬಂದಿ ದಾಳಿ ಮಾಡಿ ಕಾರನ್ನು ತಡೆದು ಪರಿಶೀಲಿಸಿದಾಗ 1 ಕೆ.ಜಿ. 160 ಗ್ರಾಂ ಹ್ಯಾಶಿಷ್ ಆಯಿಲ್ ಪತ್ತೆಯಾಗಿತ್ತು. ಕಾರಿನಲ್ಲಿದ್ದ ಮೂವರನ್ನು ಎನ್‌ಡಿಪಿಎಸ್ ಕಾಯಿದೆಯಡಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ತನಿಖೆ ಪೂರ್ಣಗೊಳಿಸಿದ ತನಿಖಾಧಿಕಾರಿ ಪ್ರಿಯಾಂಕಾ 2022ರ ನವೆಂಬರ್ 21ರಂದು ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಎನ್‌ಡಿಪಿಎಸ್ ಕಾಯಿದೆ ಅಡಿಯಲ್ಲಿ 10 ವರ್ಷ ಕಠಿನ ಜೈಲು ಶಿಕ್ಷೆ ಪ್ರಕಟಿಸಿದೆ. ಮಾತ್ರವಲ್ಲದೇ ಪ್ರತಿ ಆರೋಪಿಗೆ ತಲಾ 1 ಲಕ್ಷ ರೂ. ದಂಡ ವಿಧಿಸಿದ್ದು, ದಂಡ ನೀಡಲು ತಪ್ಪಿದ್ದಲ್ಲಿ ಮತ್ತೆ 3 ವರ್ಷಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.
ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕಾ, ಎಎಸ್‌ಐ ಎಂ.ಸಿ. ಬೆಳ್ಳಿಯಪ್ಪ (ಪ್ರಸಕ್ತ ನಿವೃತ್ತ), ಸಿಬಂದಿ ಹಾಗೂ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಂಡಿಸಿ ಕಠಿಣ ಜೈಲು ಶಿಕ್ಷೆ ವಿಧಿಸುವಲ್ಲಿ ಉತ್ತಮ ಕಾರ್ಯನಿರ್ವಹಿಸಿರುವ ಸರಕಾರಿ ಅಭಿಯೋಜಕಿ ಕೆ.ಜಿ. ಅಶ್ವಿನಿ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.