ಮಡಿಕೇರಿ: ಕರ್ನಾಟಕ ರಾಷ್ಟ್ರ ಸಮಿತಿ 12 ಕ್ಷೇತ್ರಗಳಲ್ಲಿ ಸ್ಪರ್ಧೆ
Team Udayavani, Apr 12, 2019, 6:30 AM IST
ಮಡಿಕೇರಿ : ಸ್ವತ್ಛ, ಪ್ರಾಮಾಣಿಕ ಮತ್ತು ಜನಪರವಾದ ರಾಜಕಾರಣದ ಸಲುವಾಗಿ ಅಸ್ತಿತ್ವಕ್ಕೆ ತರಲಾಗಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮೈಸೂರು-ಕೊಡಗು ಕ್ಷೇತ್ರ ಸೇರಿದಂತೆ 12 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಂಡು ಬರುತ್ತಿರುವ ವಿವಿಧ ರಾಜಕೀಯ ಪಕ್ಷಗಳ ಜನವಿರೋಧಿ ನಿಲುವುಗಳು, ಭ್ರಷ್ಟಾಚಾರ, ವಂಶಪಾರಂಪರ್ಯವಾದ ಆಡಳಿತವನ್ನು ದಿಕ್ಕರಿಸಿ, ಭ್ರಷ್ಟಾಚಾರ ರಹಿತವಾದ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರುವ ಧ್ಯೇಯೋದ್ದೇಶಗಳಿಂದ, ಪಕ್ಷವನ್ನು ಜನರಿಗೆ ಪರಿಚಯಿಸುವ ಉದ್ದೇಶಗಳ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆಯೆಂದು ಸ್ಪಷ್ಟಪಡಿಸಿದರು.
ಮೈಸೂರು-ಕೊಡಗು ಕ್ಷೇತ್ರಕ್ಕೆ ಕೆ.ಎಸ್. ಸೋಮಸುಂದರಂ ಅವರನ್ನು ಕಣಕ್ಕಿಳಿಸಲಾಗಿದೆ. ಇವರ ಕ್ರಮ ಸಂಖ್ಯೆ 22 ಆಗಿದ್ದು, ಇವರ ವಿಶಲ್ ಚಿಹ್ನೆಗೆ ಮತ ಹಾಕುವಂತೆ ಮನವಿ ಮಾಡಿಕೊಂಡ ಕೃಷ್ಣಾ ರೆಡ್ಡಿ, ಕರ್ನಾಟಕ ರಾಷ್ಟ್ರ ಸಮಿತಿಯು ಒಂದು ಪಕ್ಷವಾಗಿ ರಾಷ್ಟ್ರೀಯ ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ಅಂತಿಮ ಹಂತದಲ್ಲಿರುವುದಾಗಿ ತಿಳಿಸಿದರು.
ಕೊಡಗಿನ ಪರಿಸ್ಥಿತಿಗಳಿಗೆ ಜೆಸಿಬಿ ಕಾರಣ ಕಳೆದ ಸಾಲಿನ ಪ್ರಾಕೃತಿಕ ವಿಕೋಪದ ಬಳಿಕ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳು ನಡೆಯದಿರುವುದಕ್ಕೆ, ಜಿಲ್ಲೆ ಕಡೆಗಣಿ ಸಲ್ಪಡುತ್ತಿರುವುದಕ್ಕೆ ರಾಜ್ಯದಲ್ಲಿನ ಜೆಸಿಬಿ (ಜನತಾದಳ, ಕಾಂಗ್ರೆಸ್, ಬಿಜೆಪಿ) ಕಾರಣವೆಂದು ತೀಕ್ಷ್ಣವಾಗಿ ನುಡಿದ ಕೃಷ್ಣಾ ರೆಡ್ಡಿ, ಸ್ವಜನಪಕ್ಷಪಾತ, ವಂಶಪಾರಂಪರ್ಯ ರಾಜಕಾರ ಣಗಳಿಂದ ಇಂದು ಯಾವುದೇ ಪಕ್ಷದಿಂದ ಚುನಾವಣಾ ಸ್ಪರ್ಧೆಗೆ ಅಭ್ಯರ್ಥಿಗಳು ಮೊದಲೇ ನಿಗದಿಯಾಗಿರುತ್ತಾರೆಂದು ಮಾರ್ಮಿ ಕವಾಗಿ ನುಡಿದರು.
ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿ ಸೋಮಸುಂದರ್ ಮಾತ ನಾಡಿ, ಭ್ರಷ್ಟಾಚಾರ ಮುಕ್ತವಾದ ವ್ಯವ ಸ್ಥೆಯನ್ನು ಸಮಾಜದಲ್ಲಿ ಕಾಣುವ ಸಲುವಾಗಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ತಿಳಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎಸ್., ಸಾಹಿತಿ , ರೈತ ಮುಖಂಡ ಜೋಗನಹಳ್ಳಿ ಗುರುಮೂರ್ತಿ, ಮೋಹನ್ ಪರ್ಲಕೋಟಿ, ಮಂಜುಳಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.