ಮಡಿಕೇರಿ: ಮರ ಬಿದ್ದು ವ್ಯಕ್ತಿ ಸಾವು
Team Udayavani, Aug 11, 2022, 7:40 PM IST
ಮಡಿಕೇರಿ: ಮರ ಬಿದ್ದು ತೋಟದ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ಗುಹ್ಯ ಗ್ರಾಮದ ಕಕ್ಕಟಕಾಡು ನಿವಾಸಿ ಪ್ರಕಾಶ್ (52) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಅಮ್ಮತ್ತಿ ಹೊಸಕೋಟೆ ಸಮೀಪದ ತೋಟವೊಂದರಲ್ಲಿ ಪ್ರಕಾಶ್ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಭಾರೀ ಗಾತ್ರದ ಮರವೊಂದು ಇವರ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ. ಪ್ರಕಾಶ್ ಅವರೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ರಘು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಅರ್ಚನಾ ಭಟ್, ಕಂದಾಯ ನಿರೀಕ್ಷಕ ಅನಿಲ್ ಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.