ಮಡಿಕೇರಿ: ನಕ್ಸಲ್ ರೂಪೇಶ್ ವಿಚಾರಣೆ
Team Udayavani, Jun 10, 2022, 12:25 AM IST
ಮಡಿಕೇರಿ: ನಕ್ಸಲ್ ಸಂಘಟನೆಯ ಶಂಕಿತ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕ್ಸಲ್ ಪ್ರಕರಣ ದಾಖಲಾಗಿರುವ ರೂಪೇಶ್‌ನನ್ನು ಬಿಗಿ ಭದ್ರತೆಯಲ್ಲಿ ಗುರುವಾರ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂದಿಯಾಗಿರುವ ರೂಪೇಶ್‌ನನ್ನು ಬುಧವಾರ ಸಂಜೆ ಮಡಿಕೇರಿಗೆ ಕರೆತಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಗುರುವಾರ ಬೆಳಗ್ಗೆ ಕೊಡಗು ಕಮಾಂಡೋ ಮತ್ತು ಕೇರಳ ಥಂಡರ್ ಬೋಲ್ಟ್ ಕಮಾಂಡೋಗಳ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಯಿತು. ಪೊಲೀಸ್ ವಾಹನದಿಂದ ಇಳಿಯು ತ್ತಿದ್ದಂತೆಯೇ “ಕಮುನಿಸ್ಟ್ ಸರಕಾರಗಳು ನವ ಉದಾರವಾದಿ ನೀತಿಗೆ ಜೋತು ಬಿದ್ದಿವೆ’ ಎಂದು ಅಸಮಾಧಾನದ ಘೋಷಣೆ ಕೂಗಿದ.
ಪ್ರಕರಣ :
2013ರ ಫೆಬ್ರವರಿ 1ರಂದು ಭಾಗಮಂಡಲ ಠಾಣೆ ವ್ಯಾಪ್ತಿಯ ಮುಂಡ್ರೋಟಿನಲ್ಲಿರುವ ಮಾಗುಂಡಿ ಎಂಬ ತೋಟದಲ್ಲಿ ರೂಪೇಶ್ ಮತ್ತಿತರರು ಕಾರ್ಮಿಕರಿಂದ ಬಲವಂತ ವಾಗಿ ದಿನ ಬಳಕೆ ವಸ್ತುಗಳನ್ನು ಪಡೆದು ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಭಾಗಮಂಡಲ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು. ಅನಂತರ ನಡೆದ ಬೆಳವಣಿಗೆಯಲ್ಲಿ ರೂಪೇಶ್ ತಮಿಳುನಾಡಿನಲ್ಲಿ ಸೆರೆಸಿಕ್ಕಿದ್ದ. ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ಜೂ. 24ಕ್ಕೆ ನಿಗದಿಪಡಿಸಿ ದರು. ಆತನನ್ನು ಮತ್ತೆ ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.