ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಝಾಕ್ ನಿಧನ
Team Udayavani, Oct 21, 2018, 9:46 AM IST
ಕಾಸರಗೋಡು: ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಝಾಕ್ (63) ಅವರು ಶನಿವಾರ ನಿಧನ ಹೊಂದಿದರು.
ಅಸೌಖ್ಯದಿಂದ ಬಳಲುತ್ತಿದ್ದ ಅವರು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 8.30ಕ್ಕೆ ಮೃತ ದೇಹವನ್ನು ಆಸ್ಪತ್ರೆಯಿಂದ ಮನೆಗೆ ತಂದು ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು. ಸಹಸ್ರಕ್ಕೂ ಅಧಿಕ ಮಂದಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅಂತಿಮ ನಮನ ಸಲ್ಲಿಸಿದರು. ಅಪರಾಹ್ನ 2.30ಕ್ಕೆ ಮೃತದೇಹವನ್ನು ಉಪ್ಪಳದಲ್ಲಿ ಸಾರ್ವಜನಿಕ ದರ್ಶನಕ್ಕಿರಿಸಿ ಬಳಿಕ ನಾಯಮ್ಮಾರ್ ಮೂಲೆಯ ಮನೆಗೆ ತರಲಾಯಿತು. ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಅಂತಿಮ ದರ್ಶನ ಪಡೆದರು.
ವೇತನ ಪಡೆಯದ ಶಾಸಕ: ಶಾಸಕ ಅಬ್ದುಲ್ ರಝಾಕ್ ಸಾಮಾಜಿಕ ಕಳಕಳಿಯಿಂದ ಹೆಸರು ಗಳಿಸಿದ್ದರು. 2 ಬಾರಿ ಶಾಸಕರಾಗಿದ್ದಾಗಲೂ ಸರಕಾರದ ಸಂಬಳವಾಗಲೀ ಇತರ ಅನುಕೂಲಗಳನ್ನಾಗಲೀ ಪಡೆಯದೆ ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಅವರು ನೆರವು ಯಾಚಿಸಿ ತನ್ನ ಬಳಿಗೆ ಬಂದ ಯಾರನ್ನೂ ಬರಿಗೈಯಲ್ಲಿ ಕಳುಹಿಸುತ್ತಿರಲಿಲ್ಲ.
ಸರಳ ನಡೆ ನುಡಿಯ ಅವರು ಕನ್ನಡ ಹಾಗೂ ತುಳುವಿನಲ್ಲಿ ನಿರರ್ಗಳವಾಗಿ ಮಾತನಾಡಬಲ್ಲವರಾಗಿದ್ದು, ತುಳು ಭಾಷೆಯ ಬಗ್ಗೆ ವಿಶೇಷ ಅಭಿಮಾನ ಹೊಂದಿದ್ದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಸಮರ್ಪಕವಾಗಿ ಬಳಸಿ ಸಂಕಷ್ಟದಲ್ಲಿ ರುವವರ ನೆರವಿಗೆ ಕಾರಣರಾಗಿ ಜನಾನುರಾಗಿಯಾಗಿದ್ದರು. ಅವರು ಪತ್ನಿ ಸಫಿಯಾ, ಮೂವರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.