ಕಾಸರಗೋಡು ಜಿಲ್ಲೆಗೆ ಹರಿದು ಬರುತ್ತಿರುವ ಗಾಂಜಾ

Team Udayavani, Jul 16, 2017, 2:45 AM IST

ganja.jpg

ಕಾಸರಗೋಡು: ಮದ್ಯ ಸಹಿತ ಹೊಗೆಸೊಪ್ಪು ಉತ್ಪನ್ನಗಳನ್ನು ನಿಷೇಧಿಸಿದ್ದರೂ ಕಾಸರಗೋಡು ಜಿಲ್ಲೆಗೆ ನಿರಂತರವಾಗಿ ಮದ್ಯ, ಹೊಗೆಸೊಪ್ಪು ಉತ್ಪನ್ನಗಳು ಮತ್ತು ಮಾದಕ ದ್ರವ್ಯ ಗಾಂಜಾ ಹರಿದು ಬರುತ್ತಿದೆ. ಹಲವೆಡೆಗಳಿಂದ ಇಂತಹ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದರೂ, ಬಯಲಾಗುವ ಪ್ರಕರಣಗಳಿಗಿಂತ ಬಯಲಾಗದ ಪ್ರಕರಣಗಳೇ ಹೆಚ್ಚು.  ಇದೇ ವೇಳೆ ವ್ಯವಸ್ಥಿತ ಮಾಫಿಯಾ ತಂಡ ಗಾಂಜಾ ಸಾಗಾಟದಲ್ಲಿ ಸಕ್ರಿಯವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ 12 ವರ್ಷದ ಬಾಲಕ ಕೂಡಾ ಗಾಂಜಾ ಗುಲಾಮನಾಗಿದ್ದಾನೆಂದರೆ ಇದರ ಗಂಭೀರತೆಯನ್ನು ಅರ್ಥೈಸಿಕೊಳ್ಳಬಹುದು.
ಕಾಸರಗೋಡು ಜಿಲ್ಲೆಯಲ್ಲಿ 12 ವರ್ಷದ ಬಾಲಕನಿಗೂ ಕೂಡ ಮಾದಕ ದ್ರವ್ಯದ ಚಟ ಹಿಡಿದಿದೆ ಎಂದು ಸರ್ವೆಯೊಂದರಲ್ಲಿ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ  700 ಕಿಲೋಗಿಂತ ಅಧಿಕ  ಗಾಂಜಾ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ.

ವಿದ್ಯಾರ್ಥಿಗಳಲ್ಲೇ ಹೆಚ್ಚು
ವಿದ್ಯಾರ್ಥಿಗಳಲ್ಲಿ ಮದ್ಯಕ್ಕಿಂತಲೂ ಮಾದಕ ದ್ರವ್ಯ ಬಳಕೆ ಅಧಿಕವಾಗುತ್ತಿದೆ. ಸುಲಭವಾಗಿ ಸಾಗಾಟ, ಬಳಸಲು ಸುಲಭ ಮತ್ತು ಅಧಿಕ ಮಾದಕತೆ ಲಭಿಸುತ್ತದೆ ಎಂಬ ಕಾರಣದಿಂದ ಗಾಂಜಾ ಸಹಿತ ಮಾದಕ ದ್ರವ್ಯ ಬಳಕೆ ಹೆಚ್ಚುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಬೊಟ್ಟು ಮಾಡುತ್ತಿದ್ದಾರೆ. ಕಾಸರಗೋಡು ಜಿಲ್ಲೆಯಿಂದಲೂ ಭಾರೀ ಪ್ರಮಾಣದಲ್ಲಿ ಮಾದಕ ದ್ರವ್ಯ ವಶಪಡಿಸಲಾಗಿದೆ ಎಂದು ನಾರ್ಕೋಟಿಕ್ಸ್‌ ಸೆಲ್‌ ಅಧಿಕಾರಿಗಳು ಹೇಳುತ್ತಾರೆ. ಅಂತಾರಾಜ್ಯ ಮಾದಕ ಸಾಗಾಟದಾರರನ್ನು ಬಂಧಿಸಿ ವಾಹನಗಳನ್ನು ವಶಪಡಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವವರನ್ನು ಬಂಧಿಸಲು ನಾಲ್ಕು ಶ್ಯಾಡೋ ಪೊಲೀಸ್‌ ವಿಭಾಗವನ್ನು ರಚಿಸಲಾಗಿದ್ದು, ಸಕ್ರಿಯವಾಗಿ ಕಾರ್ಯಾಚರಿಸುತ್ತಿದೆ. ಮಾದಕ ಬೆರೆತ ಮಿಠಾಯಿ, ಚೂಯಿಂಗಂ, ಜ್ಯೂಸ್‌ ಮೊದಲಾದವು ಗಡಿ ದಾಟಿ ಕಾಸರಗೋಡು ಜಿಲ್ಲೆಗೆ ಹರಿದು ಬರುತ್ತಿದೆ. ಅನ್ಯ ರಾಜ್ಯಗಳ ಕಾರ್ಮಿಕರು ಗಾಂಜಾ, ಪಾನ್‌ ಮಸಾಲ ಮೊದಲಾದ ಮಾದಕ ವಸ್ತುಗಳನ್ನು ಜಿಲ್ಲೆಗೆ ಸಾಗಿಸುತ್ತಿದ್ದಾರೆ. ಜಿಲ್ಲೆಯ ಶಾಲಾ ವಿದ್ಯಾರ್ಥಿಗಳನ್ನು ಗುರಿಯಿರಿಸಿಕೊಂಡು ಮಾದಕ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ತಿಳಿವಳಿಕೆ ತರಗತಿ ನಡೆಸಲು ಆರು ಮಂದಿ ತರಬೇತುದಾರರನ್ನು ನೇಮಿಸಿದೆ. ಜಿಲ್ಲೆಯ 81 ಶಾಲೆಗಳಲ್ಲಿ 40 ವಿದ್ಯಾರ್ಥಿಗಳಂತೆ ಮಾದಕ ವಿರುದ್ಧ ಕ್ಲಬ್‌ಗಳನ್ನು ರೂಪೀಕರಿಸಿ ಜಾಗೃತಿ ಮೂಡಿಸುವ ಕಾರ್ಯಗಳನ್ನು ನಡೆಸಲಾಗುತ್ತಿದೆ.

ರಾಜ್ಯ ಯುವಜನ ಆಯೋಗ ಮದ್ಯ ಹಾಗೂ ಮಾದಕ ದ್ರವ್ಯ ಸೇವನೆಯಿಂದ ತಲೆದೋರುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು ಯುವಕರನ್ನು ಹಾಗೂ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿ ಅಭಿಯಾನ ನಡೆಸುತ್ತಿದೆ. ಇದರ ಅಂಗವಾಗಿ ಜಿಲ್ಲಾ ಮಟ್ಟದ ರ್ಯಾಲಿಗಳು, ಸಮಾವೇಶಗಳು, ತಿಳಿವಳಿಕೆ ಶಿಬಿರಗಳು ನಡೆಯುತ್ತಿವೆ. ಮಾದಕ ದ್ರವ್ಯ ವಿರುದ್ಧ ಸಾಮೂಹಿಕ ಓಟ ಕಾರ್ಯಕ್ರಮವೂ ಜರಗುತ್ತಿದೆ. ವಿದ್ಯಾರ್ಥಿಗಳು, ಯುವಜನ ಸಂಘಟನೆಗಳು, ಕುಟುಂಬಶ್ರೀ, ಎನ್‌.ಸಿ.ಸಿ, ಎನ್‌.ಎಸ್‌.ಎಸ್‌, ರೆಸಿಡೆನ್ಸ್‌ ಅಸೋಸಿಯೇಶನ್‌, ಸಮಾಜ ಸೇವಾ ಸಂಘಟನೆಗಳು, ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಮೊದಲಾದವುಗಳ ಸಹಕಾರದೊಂದಿಗೆ ಮಾದಕ ವಿರುದ್ಧ ಅಭಿಯಾನ ನಡೆಯುತ್ತಿದೆ.

ಕಾಲೇಜು ಕ್ಯಾಂಪಸ್‌ಗಳಲ್ಲಿ ಮದ್ಯ, ಮಾದಕ ಮುಕ್ತಗೊಳಿಸಲು ಸೇಫ್ ಕ್ಯಾಂಪಸ್‌, ಕ್ಲೀನ್‌ ಕ್ಯಾಂಪಸ್‌ ಎಂಬ ಕಾರ್ಯಕ್ರಮವೂ ನಡೆಯುತ್ತಿದೆ. ಶಾಲೆಗಳಲ್ಲೂ, ಕಾಲೇಜುಗಳಲ್ಲೂ ವಿಚಾರಗೋಷ್ಠಿಗಳು, ನಾಟಕ, ಕಿರು ಚಿತ್ರ ಪ್ರದರ್ಶನ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಚಿತ್ರ ರಚನೆ, ಪ್ರಬಂಧ, ಭಾಷಣ ಸ್ಪರ್ಧೆಗಳು ನಡೆಯುತ್ತಿವೆ. ಆದರೂ ಕಾಸರಗೋಡು ಜಿಲ್ಲೆಗೆ ಮಾದಕ ದ್ರವ್ಯ ಸಾಗಾಟ ಪ್ರಮಾಣ ನಿಯಂತ್ರಣದಲ್ಲಿ ಹೇಳಿಕೊಳ್ಳುವಂತಹ ಫಲಿತಾಂಶ ಬಂದಿಲ್ಲ.

ಶಾಲಾ ಪರಿಸರದಲ್ಲಿ ಮಾದಕ ವಸ್ತುಗಳ ತಪಾಸಣೆ  
ಶಾಲಾ, ಕಾಲೇಜು ಪರಿಸರಗಳಲ್ಲಿ ಗಾಂಜಾ, ನಿಷೇಧಿತ ಪಾನ್‌ ಮಸಾಲ ಉತ್ಪನ್ನಗಳ ಮಾರಾಟವನ್ನು ತಡೆಗಟ್ಟಲು ಪೊಲೀಸರು ತಪಾಸಣೆಯನ್ನು ಸಕ್ರಿಯಗೊಳಿಸಿದ್ದಾರೆ. ಹಲವೆಡೆಗಳಲ್ಲಿ ಇಂತಹ ಮಾದಕ ವಸ್ತುಗಳು ರಹಸ್ಯವಾಗಿ ಮಾರಾಟವಾಗುತ್ತಿವೆೆ ಎಂಬ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಮಾದಕ ವಸ್ತುಗಳ ಮಾರಾಟ, ಸಾಗಾಟ ಬಗ್ಗೆ ಮಾಹಿತಿ ಲಭಿಸಿದಲ್ಲಿ  ಸಾರ್ವಜನಿಕರು ತತ್‌ಕ್ಷಣ ಹತ್ತಿರದ ಪೊಲೀಸ್‌ ಠಾಣೆಗಳಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಅಥವಾ ಜಿಲ್ಲಾ  ಪೊಲೀಸರ “ಆಪರೇಶನ್‌ ಮೂನ್‌ ಲೈಟ್‌’ ನಂಬ್ರ ಆಗಿರುವ 9497975812 ನಂಬ್ರಕ್ಕೆ ಮಾಹಿತಿ ನೀಡಬಹುದು. ಶಾಲಾ ವಿದ್ಯಾರ್ಥಿಗಳು ಮೊಬೈಲ್‌ ಫೋನ್‌ಗಳನ್ನು ಶಾಲೆ ಪರಿಸರದ ಅಂಗಡಿಗಳಲ್ಲಿ ಇಡುತ್ತಿರುವುದಾಗಿ ಮಾಹಿತಿ ಲಭಿಸಿದೆ. ಇಂತಹ ಮೊಬೈಲ್‌ ಲಭಿಸಿದಲ್ಲಿ ಅಂಗಡಿಗಳ ವಾರಿಸುದಾರರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.