ಬಾಳೆಗೊನೆಗಳ ಮಧ್ಯೆ ಗಾಂಜಾ ಬಚ್ಚಿಟ್ಟು ಸಾಗಾಟ; ಪೊಲೀಸರ ದಾಳಿ; ಆರೋಪಿಗಳು ಪರಾರಿ
Team Udayavani, Jul 22, 2020, 12:57 PM IST
ಮಂಜೇಶ್ವರ: ಬಾಳೆ ಗೊನೆಗಳ ಮಧ್ಯೆ ಒಂದು ಕ್ವಿಂಟಾಲ್ ಗಾಂಜಾವನ್ನು ಬಚ್ಚಿಟ್ಟು ಸಾಗಾಟ ಮಾಡುತಿದ್ದ ಪಿಕಪ್ ವಾಹನವನ್ನು ಮಂಜೇಶ್ವರ ಪೊಲೀಸರು ವಶಪಡಿಸಿಕೊಂಡಿದ್ದು ಅರೋಪಿಗಳು ಪರಾರಿಯಾದ ಘಟನೆ ಕರ್ನಾಟಕ _ಕೇರಳ ಗಡಿಭಾಗ ಕಾಸರಗೋಡಿನ ಕುಂಜತ್ತೂರು ಪದವಿನಲ್ಲಿ ನಡೆದಿದೆ.
ಪೊಲೀಸರು ಮಂಜೇಶ್ವರ ಕುಂಜತ್ತೂರು ಪದವು ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಅದೇ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಲಾಗಿದ್ದು , ನಿಲ್ಲಿಸಿದ್ದ ವಾಹನವನ್ನು ಪೊಲೀಸರು ತಪಾಸಣೆ ಮಾಡಲು ಸಮೀಪಿಸುತಿದಂತೆ ಆರೋಪಿಗಳು ವಾಹನವನ್ನು ಚಲಾಯಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ತಪಾಸಣೆ ನಡೆಸಿದಾಗ ವಾಹನದಲ್ಲಿ ಗಾಂಜಾ ಪತ್ತೆಯಾಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.