ಕುಂಬಳೆ: ಆದೂರು ನಿವಾಸಿ ಕಾಣೆ; ವಿವಾಹಕ್ಕಾಗಿ ಮತಾಂತರ ಶಂಕೆ
Team Udayavani, Jun 10, 2022, 6:48 AM IST
ಕುಂಬಳೆ: ಮುಳ್ಳೆರಿಯಾದ ಆದೂರು ಕೈತೋಡು ನಿವಾಸಿ ಜಯರಾಮ (46) ಅವರು ಕಳೆದ ಮಾರ್ಚ್ 18ರಂದ ಉಪ್ಪಳಕ್ಕೆಂದು ತೆರಳಿದವರು ನಾಪತ್ತೆಯಾಗಿದ್ದಾರೆ. ಅವರು ಮತಾಂತರವಾಗಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತ ಪಡಿಸಿದ್ದಾರೆ.
ಮೇಸ್ತ್ರಿ ಕೆಲಸದ ಅವಿವಾಹಿತರಾಗಿದ್ದ ಅವರು ಸಹೋದರರಿಂದ ಜಾಗದ ಪಾಲು ಪಡೆದು ಅದನ್ನು ಮಾರಾಟ ಮಾಡಿ ಚೆಕ್‌ಪೋಸ್ಟ್ ಬಳಿಯ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದರು. ಕೆಲಸಕ್ಕೆ ಹೋಗುತ್ತಿದ್ದಾಗ ಅನ್ಯ ಮತದವರ ಮನೆಯ ವಿಚ್ಛೇದಿತ ಮಹಿಳೆಯೊಂದಿಗೆ ಸ್ನೇಹ ಹೊಂದಿದ್ದರು. ಮತಾಂತರಗೊಳ್ಳದೆ ವಿವಾಹ ಅಸಾಧ್ಯ ಎಂದು ಆಕೆ ಹೇಳಿದ್ದರಿಂದ ಕೇರಳದ ಪೊನ್ನಾನಿಯ ಧಾರ್ಮಿಕ ಕೇಂದ್ರಕ್ಕೆ ತೆರಳಿ ಮತಾಂತರವಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಅವರಲ್ಲಿ ಗೆಳೆತನವಿದ್ದ ಮಹಿಳೆಯೂ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಜಯರಾಮ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.