ಜಾಮೀನಿನಲ್ಲಿ ಬಿಡುಗಡೆಗೊಂಡ ಆರೋಪಿಯ ನಿಗೂಢ ಸಾವು : ಮೂವರು ಪೊಲೀಸ್‌ ವಶಕ್ಕೆ


Team Udayavani, Mar 6, 2024, 11:05 PM IST

ಜಾಮೀನಿನಲ್ಲಿ ಬಿಡುಗಡೆಗೊಂಡ ಆರೋಪಿಯ ನಿಗೂಢ ಸಾವು : ಮೂವರು ಪೊಲೀಸ್‌ ವಶಕ್ಕೆ

ಮಂಜೇಶ್ವರ: ಗಾಂಜಾ ಸೇದಿ ಬೊಬ್ಬಿಟ್ಟ ಎಂಬ ಆರೋಪದಂತೆ ಪೊಲೀಸರು ಬಂಧಿಸಿ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡು ಸಂಬಂಧಿಕನೊಂದಿಗೆ ತೆರಳಿದ ಆರೋಪಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮೀಯಪದವು ಮನಕ್ಕಳದ ಅಬ್ದುಲ್ಲ ಅವರ ಪುತ್ರ ಮೊದೀನ್‌ ಆರಿಫ್‌(22) ಸಾವಿಗೆ ಸಂಬಂಧಿಸಿ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಗಂಭೀರವಾದ ಹಲ್ಲೆಯೇ ಮೊದೀನ್‌ ಆರಿಫ್‌ ಅವರ ಸಾವಿಗೆ ಕಾರಣವೆಂದು ಮೃತದೇಹದ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ. ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯಲ್ಲಿ ಈ ಬಗ್ಗೆ ತಿಳಿಸಲಾಗಿದೆ. ಪೂರ್ಣ ವರದಿ ಲಭಿಸಿದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗಾಂಜಾ ಸೇವಿಸಿ ಬೊಬ್ಬಿಡುತ್ತಿದ್ದಾನೆಂಬ ಬಗ್ಗೆ ಸ್ಥಳೀಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆದಿತ್ಯವಾರ ರಾತ್ರಿ ಮೊದೀನ್‌ ಆರಿಫ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಆತನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿತ್ತು. ಸಂಬಂಧಿಕನೊಬ್ಬನ ಜೊತೆ ಮನೆಗೆ ತೆರಳಿದ್ದರು. ಆದರೆ ಸೋಮವಾರ ಬೆಳಗ್ಗೆ ರಕ್ತ ವಾಂತಿ ಮಾಡಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಮೊದೀನ್‌ ಆರಿಫ್‌ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿತ್ತು. ಮನೆಗೆ ತಲುಪಿಸಿದ ಮೃತದೇಹದಲ್ಲಿ ಹಲ್ಲೆಯ ಗಾಯಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಾವಿಗೆ ಕಾರಣ ಹಲ್ಲೆಯಾಗಿರಬಹುದೆಂದು ಸಂಶಯ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪೊಲೀಸರಿಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ತಲುಪಿಸಿದ ಬಳಿಕ ಸಮಗ್ರ ಮರಣೋತ್ತರ ಪರೀಕ್ಷೆಗೆ ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.

ಇದೇ ವೇಳೆ ಪೊಲೀಸರು ಹಲ್ಲೆ ಮಾಡಿದ್ದರಿಂದ ಮೊದೀನ್‌ ಸಾವಿಗೀಡಾಗಿರುವುದಾಗಿ ನಾಗರಿಕರು ಆರೋಪಿಸಿದ್ದರು. ಆದರೆ ಅದನ್ನು ನಿರಾಕರಿಸಿದ ಪೊಲೀಸರು ಜಾಮೀನಿನಲ್ಲಿ ಯುವಕನನ್ನು ಕರೆದೊಯ್ದವರು ಹಲ್ಲೆ ಮಾಡಿದ್ದರಿಂದ ಯುವಕ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಹಿನ್ನೆಲೆಯಲ್ಲಿ ಜಾಮೀನಿನಲ್ಲಿ ಕೊಂಡೊಯ್ದ ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಲಾಗಿದೆ. ಸಾಕಷ್ಟು ಮಾಹಿತಿ ಲಭಿಸಿದೆ. ಸಮಗ್ರ ಮರಣೋತ್ತರ ಪರೀಕ್ಷಾ ವರದಿ ಲಭಿಸಿದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.